Karnataka Assembly Poll ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಸೂಚನೆ ಕೊಟ್ಟ ಡಿಕೆ ಶಿವಕುಮಾರ್

ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ ಆಕಾಂಕ್ಷಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಹಗತ್ವದ ಸೂಚನೆ ಕೊಟ್ಟಿದ್ದಾರೆ.

Karnataka Assembly Poll ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಸೂಚನೆ ಕೊಟ್ಟ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 24, 2022 | 6:04 PM

ಕುಮಟಾ( ಉತ್ತರ ಕನ್ನಡ): ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಇಂದು(ನ.24) ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಕಾಂಗ್ರೆಸ್ ಜನಜಾಗೃತಿ​ ಸಮಾವೇಶ ಮಾಡಿದ್ದು, ಈ ವೇಳೆ 50ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇನ್ನೂ ಹಲವು ನಾಯಕರು ಕಾಂಗ್ರೆಸ್​ ಬರಲಿದ್ದಾರೆ. ಯಾರು-ಯಾರು ಸೇರ್ಪಡೆಯಾಗಲಿದ್ದಾರೆ ಎಂದು ಶೀಘ್ರದಲ್ಲೇ ತಿಳಿಯಲಿದೆ ಎಂದು ಹೊಸ ಬಾಂಬ್ ಸಿಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.

KPCC: 1200 ಟಿಕೆಟ್ ಆಕಾಂಕ್ಷಿಗಳಿಂದ 25 ಕೋಟಿ ರೂ ಅರ್ಜಿ ಹಣ ಸಂಗ್ರಹಿಸಿದ ಕರ್ನಾಟಕ ಕಾಂಗ್ರೆಸ್

ಈ ಬಾರಿ ಟಿಕೆಟ್​ ಬೇಗ ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅರ್ಜಿ ಸಲ್ಲಿಸದವರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ. ಅರ್ಜಿ ಹಾಕಿದವರು ಸದ್ಯ ಸಂಘಟನೆಯಲ್ಲಿ ತೊಡಗುವಂತೆ ಡಿಕೆ ಶಿವಕುಮಾರ್, ಟಿಕೆಟ್ ಆಕಾಂಕ್ಷಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ರಾಜ್ಯದಲ್ಲಿ ಬಿಜೆಪಿ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್ ಸರ್ಕಾರವನ್ನ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದು ಐತಿಹಾಸಿಕ ಸಭೆ, ಕೇವಲ ಇದು ಪರೇಶ್ ಮೆಸ್ತಾ ವಿಚಾರ ಮಾತ್ರ ಅಲ್ಲ. ಜನರನ್ನ ಜಾಗೃತಿ ಮಾಡುವ ಸಮಾವೇಶ ಇದು. ಸಹಸ್ರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದೀರಿ. ನಿಮ್ಮ ಮೇಲೆ ಬಹಳ ಅಭಿಮಾನಿ ಇಟ್ಟು ಬಂದಿದ್ದೇನೆ. ಲಿಂಬೆ ಹಣ್ಣಿಗಿಂತ ಹುಳಿ ಇಲ್ಲ, ದುಂಬಿಗಿಂತ ಕರಿ ಇಲ್ಲ, ಶಂಬುಕಿಂತ ಅಧಿಕ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಶಕ್ತಿಲ್ಲ. ಉತ್ತರ ಕನ್ನಡ ಜಿಲ್ಲೆಯ ಜನರ ಮೇಲೆ ನಂಬಿಕೆ ಇಟ್ಟು ಬಂದಿದ್ದೆನೆ. ಜಿಲ್ಲೆ ಜನರು ಬಹಳ ನೊಂದಿದ್ದೀರಿ ಎಂದರು.

ರಾಜ್ಯದಲ್ಲಿ ಆಪರೇಷನ್ ಲೋಟಸ್ ಮಾಡಿ ಅಧಿಕಾರಕ್ಕೆ ಬಂದ್ರು. ಕೇಂದ್ರದಲ್ಲಿ ಅವರದೆ ಅಧಿಕಾರವಿದೆ. ಡಬಲ್ ಇಂಜಿನ್ ಸರ್ಕಾರ ಇದೆ. ಬಿಜೆಪಿ ಪಕ್ಷದವರು ಕೊಟ್ಟ ಮಾತನ್ನ ಒಂದು ಮಾತನ್ನಾದ್ರು ಉಳಿಸಿಕೊಂಡಿದ್ದಾರೆಯೇ. ಪುಣ್ಯವಂತರು, ಸಂತರು ಹುಟ್ಟಿದ ನಾಡು ಇದು. ಈಗ ಸಮಾಜದಲ್ಲಿ ಅಶಾಂತಿ ಮನೆ ಮಾಡಿದೆ. ಉದ್ಯೋಗವಿಲ್ಲ, ಬೇರೆ ಬೇರೆ ರಾಜ್ಯಗಳಲ್ಲಿ ಉದ್ಯೋಗ ಹುಡಿಕೊಂಡು ಹೋಗುತ್ತಿದ್ದಾರೆ.. ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:03 pm, Thu, 24 November 22

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ