Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚ ರಾಜ್ಯ ಚುನಾವಣೆ ಬಳಿಕ ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆ: ಕಾಂಗ್ರೆಸ್ ಸುಳಿವು

ಲೋಕಸಭೆ ಚುನಾವಣೆವರೆಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಮೂವರು ಸಚಿವರಾಗಿರುವ ಕಾರಣ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

ಪಂಚ ರಾಜ್ಯ ಚುನಾವಣೆ ಬಳಿಕ ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆ: ಕಾಂಗ್ರೆಸ್ ಸುಳಿವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Nov 13, 2023 | 5:47 PM

ಬೆಂಗಳೂರು, ನವೆಂಬರ್ 13: ಐದು ರಾಜ್ಯಗಳ ಚುನಾವಣೆಯ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC)ಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸೋಮವಾರ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳನ್ನು ಬದಲಿಸಲು ಪಕ್ಷ ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ. ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ನೇಮಕ ಮಾಡಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಪಕ್ಷದ ರಾಜ್ಯ ಘಟಕದ ಪುನಶ್ಚೇತನಕ್ಕೆ ಮುಂದಾಗಿದೆ.

ಲೋಕಸಭೆ ಚುನಾವಣೆವರೆಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು.

ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಮೂವರು ಸಚಿವರಾಗಿರುವ ಕಾರಣ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಐದು ರಾಜ್ಯಗಳ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

ನಾವು ಈಗ ಸಚಿವರಾಗಿರುವ ಕಾರಣ ನಮ್ಮನ್ನು ಬಿಡುಗಡೆ ಮಾಡುವಂತೆ ಹೈಕಮಾಂಡ್‌ಗೆ ಕೇಳಿದ್ದೇವೆ. ನಾವು ಈಗಾಗಲೇ ಶಿಫಾರಸುಗಳನ್ನು ಕಳುಹಿಸಿದ್ದೇವೆ. ಐದು ರಾಜ್ಯಗಳ ಚುನಾವಣೆಯ ನಂತರ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಎಂಎಲ್‌ಸಿ ಸಲೀಂ ಅಹಮದ್ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲದೆ, 20 ಜಿಲ್ಲಾಧ್ಯಕ್ಷರ ಸ್ಥಾನವನ್ನು ನಿರ್ಣಾಯಕ ಲೋಕಸಭೆ ಚುನಾವಣೆಗೂ ಮುನ್ನ ಬದಲಾಯಿಸಲು ಪಕ್ಷ ಮುಂದಾಗಿದೆ.

ಮೇ ತಿಂಗಳಲ್ಲಿ ಚುನಾವಣೆ ಫಲಿತಾಂಶ ಬಂದ ಕೂಡಲೇ ಪಕ್ಷ ಬದಲಾವಣೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಯಸಿದ್ದರೂ ಅಭ್ಯರ್ಥಿಗಳ ಬಗ್ಗೆ ಒಮ್ಮತ ಮೂಡದ ಕಾರಣ ವಿಳಂಬವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ತಮ್ಮ ಬೆಂಬಲಿಗರಿಗೆ ನಿರ್ಣಾಯಕ ಹುದ್ದೆಗಳನ್ನು ನೀಡಲು ಉತ್ಸುಕರಾಗಿದ್ದು, ಡಿಸೆಂಬರ್ 15 ರ ಮೊದಲು ನೇಮಕಾತಿಯನ್ನು ಅಂತಿಮಗೊಳಿಸಲು ಹೈಕಮಾಂಡ್ ಮಧ್ಯಪ್ರವೇಶಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಲಿಂಗಾಯತ ಅಭ್ಯರ್ಥಿ, ಚಿಕ್ಕೋಡಿಗೆ ಯಾರು?: ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ

ಇದೇ ವೇಳೆ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಬೆಳಗಾವಿ ಜಿಲ್ಲಾಧ್ಯಕ್ಷರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ ಬೆಂಬಲ ನೀಡಿದ್ದು, ಪರಿಸ್ಥಿತಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇತ್ತೀಚೆಗಷ್ಟೇ ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ: ಸಂಭಾವ್ಯರು ಯಾರೆಲ್ಲ?

ವರದಿಗಳ ಪ್ರಕಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ವಿನಯ್ ಕುಲಕರ್ಣಿ, ಜಿ.ಸಿ.ಚಂದ್ರಶೇಖರ್ ಮತ್ತು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೆಸರು ಕೇಳಿಬರುತ್ತಿದೆ.

ಇದೇ ವೇಳೆ ಪಕ್ಷವು 28 ಲೋಕಸಭಾ ಸ್ಥಾನಗಳಿಗೆ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದ್ದು, ರಾಜ್ಯದ ಪ್ರತಿ ಕ್ಷೇತ್ರದಿಂದ ಮೂರು ಹೆಸರುಗಳ ಪಟ್ಟಿ ಸಲ್ಲಿಸಲು ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ