ಮೈಸೂರು, (ಜುಲೈ 24): ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ BK Hariprasad )ಬಿಕೆ ಹರಿಪ್ರಸಾದ್ ( ಹೇಳಿಕೆ ರಾಜ್ಯ ಕಾಂಗ್ರೆಸ್ನಲ್ಲಿ (Congress) ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬಿ ಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆ. ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್ಗೆ ನೋಟಿಸ್ ನೀಡಿ ವಿಧಾನಪರಿಷತ್ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ , KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದರು.
ಇನ್ನು ಈ ಬಗ್ಗೆ ಮೈಸೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಎಚ್ಕೆ ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ ಎಂದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ