AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್-ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ: ಕೃಷ್ಣ ಬೈರೇಗೌಡ

2024ಕ್ಕೆ ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗುತ್ತಾರೆಂದು ಹೆಚ್​ಡಿ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೃಷ್ಣ ಬೈರೇಗೌಡ, ಜೆಡಿಎಸ್ ಮತ್ತು ಬಿಜೆಪಿ ಸಂಚಿನ ಸತ್ಯವನ್ನು ​ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ ಎಂದರು. ಅಷ್ಟು ಸುಲಭವಾಗಿ ಹೇಳುತ್ತಿದ್ದಾರೆ ಅಂದರೆ ಬಿಜೆಪಿಗೆ ಷರತ್ತು ವಿಧಿಸಿರಬಹುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಜೆಡಿಎಸ್-ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ: ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: Digi Tech Desk|

Updated on:Oct 10, 2023 | 4:17 PM

Share

ಚಿತ್ರದುರ್ಗ, ಅ.10: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಜೈಲಿಗೆ ಹೋಗುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ತಿರುಗೇಟು ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಜೆಡಿಎಸ್ ಮತ್ತು ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ ಎಂದಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಗೆ ಈಗಾಗಲೇ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ‌ ಜೊತೆ ಜೆಡಿಎಸ್ ಕೈಜೋಡಿಸಿದೆ. ಬೇರೆ ಪಕ್ಷದ ರಾಜಕೀಯ ಹೇಳಿಕೆ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ, ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ ಎಂದರು.

ಇದನ್ನೂ ಓದಿ: ಶಿವಕುಮಾರ್ ರನ್ನು ಜೈಲಿಗೆ ಕಳಿಸಲೆಂದೇ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಿರುವರೇ? ಕೆಎಂ ಶಿವಲಿಂಗೇಗೌಡ

ಯಾವುದೇ ಸರ್ಕಾರ ಮಾಡದ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಕ್ರಾಂತಿಕಾರಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಸರ್ಕಾರ ಬಡವರಿಗೆ ಸಹಾಯ ಮಾಡುತ್ತಿರುವುದು ಬಿಜೆಪಿ, ಜೆಡಿಎಸ್ ನಾಯಕರ ಕಣ್ಣು ಕುಕ್ಕುತ್ತಿದೆ. ನಮ್ಮ ಸರ್ಕಾರ‌ ಬಡವರು, ರೈತರು, ದುಡಿಯುವ ವರ್ಗದ ಪರವಿದೆ. ಜೆಡಿಎಸ್ ಮತ್ತು ಬಿಜೆಪಿಯವರು ಒಂದಾಗಿ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರನ್ನು ಜೈಲಿಗೆ ಕಳಿಸುವುದಾಗಿ ಹೇಳುತ್ತಿದ್ದಾರೆ. ಸೇಡಿನ ರಾಜಕಾರಣ ಮುಂದುವರಿದರೆ ಜನರೇ ಉತ್ತರ ನೀಡುತ್ತಾರೆ ಎಂದರು.

ಷರತ್ತು ವಿಧಿಸಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ

2024ಕ್ಕೆ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್, ಯಾವ ವಿಚಾರಕ್ಕೆ ಜೈಲಿಗೆ ಹಾಕುತ್ತಾರೆಂದು ಸರಿಯಾಗಿ ಹೇಳಬೇಕಲ್ವಾ? ಷರತ್ತು ವಿಧಿಸಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರಬೇಕು. ಅಷ್ಟು ಸುಲಭವಾಗಿ ಹೇಳುತ್ತಿದ್ದಾರೆ ಅಂದರೆ ಅಮಿತ್ ಶಾ ಜೊತೆ ಚರ್ಚೆ ವೇಳೆ ಕುಮಾರಸ್ವಾಮಿ ಷರತ್ತು ವಿಧಿಸಿರಬಹುದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Tue, 10 October 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!