ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ
ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ ಎಂದರು.
ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ(Krishna Byre Gowda) ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಅವರು ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ ಆಗಿದ್ದು, 5 ವರ್ಷದಲ್ಲಿ 62 ಸಾವಿರ ಕೋಟಿ ನಷ್ಟ ಉಂಟಾಗುತ್ತದೆ ಎಂದರು.
ಕರ್ನಾಟಕದಿಂದ ರಫ್ತು ಆಗುತ್ತಿರುವುದು 3.5 ಲಕ್ಷ ಕೋಟಿ ಡಾಲರ್ ವರಮಾನ
ಕರ್ನಾಟಕದಿಂದ ಐಟಿ-ಬಿಟಿ ಸರ್ವಿಸ್ನಿಂದಲೇ ಬರೊಬ್ಬರಿ 3.5 ಲಕ್ಷ ಕೋಟಿ ಡಾಲರ್ ವರಮಾನ ರಫ್ತಾಗುತ್ತಿದೆ. ಆದರೆ, ಈ ದೊಡ್ಡ ಪಾಲಿನಲ್ಲಿ ಸರ್ಕಾರಕ್ಕೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂಬುದು ನಮ್ಮ ವಾದ. 14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುವ ತೆರಿಗೆಯಲ್ಲಿ ಶೇ.4.71ರಷ್ಟು ಕೊಡುತ್ತಿದ್ರು, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇಕಡಾ 3.4ಕ್ಕೆ ಇಳಿಕೆಯಾಗಿದೆ. ಅಂದರೆ, 100 ರೂ.ನಲ್ಲಿ 12 ರೂ. ನಷ್ಟು ಮಾತ್ರ ನಮ್ಮ ರಾಜ್ಯಕ್ಕೆ ವಾಪಸ್ ಬರುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಬೆಂಗಳೂರು: ಪ್ರತಿಬಾರಿ ಮಳೆಯಿಂದ ತೊಂದರೆ, ಸಚಿವ ಕೃಷ್ಣ ಭೈರೇಗೌಡ ಎದುರು ಅಸಹನೆ, ಆಕ್ರೋಶ ವ್ಯಕ್ತಪಡಿಸಿದ ಸಹಕಾರನಗರ ನಿವಾಸಿಗಳು
15 ನೇ ಹಣಕಾಸು ಆಯೋಗದ ಶಿಫಾರಸು
ಪ್ರತಿ ವರ್ಷ 30% ಪ್ರತಿಶತ ರಾಜ್ಯಕ್ಕೆ ಬರಬೇಕಾದ ಪಾಲು ಕಡಿತ ಆಗುತ್ತಿದೆ. ತೆರಿಗೆ ಎನ್ನುವ ಬದಲು ಸೆಸ್, ಕರ ಎಂದು ಹೆಸರು ಬದಲಾಯಿಸಿ ಸಂಗ್ರಹ ಮಾಡಲಾಗುತ್ತಿದೆ. ಹಾಲಿ ಬಿಜೆಪಿ ಸರ್ಕಾರ ಬರುವ ಮೊದಲು ಸೆಸ್ ರ್ಚಾರ್ಜ್ 8 ರಿಂದ 9 ಪ್ರತಿಶತ ಇರುತ್ತಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ 23% ಸೆಸ್ ರ್ಚಾರ್ಜ್ ಆಗಿದೆ. 5 ರಿಂದ 6 ಲಕ್ಷ ಕೋಟಿ ಸೆಸ್ ರ್ಚಾರ್ಜ್ ಮೂಲಕ ಕೇಂದ್ರ ಆದಾಯ ಮಾಡುತ್ತಿದೆ. ಇದರಿಂದ ರಾಜ್ಯಕ್ಕೆ ನಮಗೆ ಸಿಗುವ ಪ್ರಮಾಣ ಕಡಿಮೆ ಆಗುತ್ತಿದೆ. ಜನರಿಗೆ ಇದರಿಂದೇನೂ ಹೊರೆ ಕಡಿಮೆ ಆಗುತ್ತಿಲ್ಲ. ಕರ್ನಾಟಕ ಒಂದು ರಾಜ್ಯಕ್ಕೆ 8200 ಕೋಟಿ ರೂ. ಸೆಸ್ನಿಂದಲೇ ನಷ್ಟ ಆಗುತ್ತಿದ್ದು, ತೆರಿಗೆಯನ್ನು ಕರವಾಗಿ ಪರಿವರ್ತನೆ ಮಾಡಿ ರಾಜ್ಯದ ಆದಾಯ ಖೋತಾ ಮಾಡಲಾಗಿದೆ ಎಂದು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು.
ಸಲಹಾ ಸಮಿತಿಯಲ್ಲಿ ಯಾರ್ಯರು
ಇನ್ನು ರಚನೆ ಮಾಡುವ ಸಲಹಾ ಸಮಿತಿಯಲ್ಲಿ ಹಣಕಾಸು ತಜ್ಞರಾದ ಗೋವಿಂದ ರಾವ್, ಶ್ರೀನಿವಾಸ್ ಮೂರ್ತಿ ಮತ್ತು ನರೇಂದ್ರ ಪಾಣಿ ಸೇರಿ ತಜ್ಞರ ಸಲಹಾ ಸಮಿತಿ ಮಾಡುತ್ತೇವೆ. ಹಣಕಾಸು ಆಯೋಗದ ಮುಂದೆ ಏನು ವಾದ ಮಾಡಬೇಕು ಎಂಬ ಬಗ್ಗೆ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ ಎಂದರು.
ಸಂಪುಟ ಸಭೆಯಲ್ಲಿ 33 ವಿಷಯ ಪರಿಶೀಲಿಸಿ ನಿರ್ಣಯ ಕೈಗೊಂಡಿದ್ದೇವೆ- ಹೆಚ್ಕೆ ಪಾಟೀಲ್
ಸಂಪುಟ ಸಭೆ ನಂತರ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ ‘ ಸಂಪುಟ ಸಭೆಯಲ್ಲಿ 14ನೇ ಹಣಕಾಸು ಆಯೋಗ ಹಾಗೂ 15ನೇ ಹಣಕಾಸು ಆಯೋಗದಿಂದ ಬಿಡುಗಡೆ ಆಗಬೇಕಿದ್ದ ಅನುದಾನದ ಬಗ್ಗೆ ಚರ್ಚೆಯಾಗಿದೆ. ನೈತಿಕ ಹಕ್ಕು ಪ್ರಕಾರ ಕರ್ನಾಟಕಕ್ಕೆ ಸಿಗಬೇಕಾಗಿದ್ದ ಆರ್ಥಿಕ ಸಹಾಯ ಸಿಗುತ್ತಿಲ್ಲ. 14 ಮತ್ತು 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಆರ್ಥಿಕ ಆಘಾತವಾಗಿದೆ ಎಂದರು.
ಹಲವಾರು ಕಾರ್ಯಕ್ರಮಗಳಿಗೆ ಅನುಮೋದನೆ
- ಡಾ|| ಬಿ.ಎಂ. ಯೋಗೇಶ್ ಗೌಡ, ಆಡಳಿತ ವೈದ್ಯಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಗೆ ಲೋಕಾಯುಕ್ತ ಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳು ಸಾಬೀತಾಗಿರುವೆ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಿ ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
- ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ಕ್ಕೆ ಅನುಮೋದನೆ (ಭವಿಷ್ಯ ನಿಧಿಯ ರಕ್ಷಣೆಗೆ ಇದರಿಂದ ಅನುಕೂಲ ಆಗಲಿದೆ).
- ಶಿವಮೊಗ್ಗ ಜಿಲ್ಲೆ,ಶಿವಮೊಗ ತಾಲೂಕು, ತೇವರಚಟ್ನಳ್ಳಿ ಗ್ರಾಮದಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡವನ್ನು ರೂ. 22.50 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ.
- “ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ 2023″ ಕ್ಕೆ ಘಟನೋತ್ತರ ಅನುಮೋದನೆ(267 ಕೋಟಿ ಹೆಚ್ಚುವರಿ ಆದಾಯ ಇದರಿಂದ ನಿರೀಕ್ಷೆ ಮಾಡಲಾಗಿದೆ).
- ಬಿಎಂಟಿಸಿ ಯಲ್ಲಿ ಒಟ್ಟು 10 ಡಬಲ್ ಡೆಕ್ಕರ್ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಸುಗಳನ್ನು ಜಿ.ಸಿ.ಸಿ.( ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್) ಆಧಾರದ ಮೇಲೆ ಕಾರ್ಯಾಚರಣೆ ಮಾಡಲು ಆಡಳಿತಾತ್ಮಕ ಅನುಮೋದನೆ. (2023-24 ನೇ ಸಾಲಿನಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳು ಸರ್ಕಾರಕ್ಕೆ ಪಾವತಿಸ ಬೇಕಾಗಿರುವ ಮೋಟಾರು ವಾಹನ ತೆರಿಗೆ ಬಾಕಿ ಹಣ ರೂ.581.47 ಕೋಟಿಗಳನ್ನು ಪಾವತಿಸುವುದರಿಂದ ಕ್ಯಾಬಿನೆಟ್ ವಿನಾಯಿತಿ ನೀಡಿದೆ.
- ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ “ಪ್ರಶಾದ್” (PRASHÁD) ಯೋಜನೆಯಡಿಯಲಿ ಮೈಸೂರಿನ ಚಾಮುಂಡೇಶ್ವರಿ ದೇವಿ ಸನ್ನಿಧಾನದ ಅಭಿವೃದ್ಧಿ ಯೋಜನೆಯನ್ನು ರೂ. 45.70 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
- 16 ನೇ ಹಣಕಾಸು ಆಯೋಗಕ್ಕೆ ಜ್ಞಾಪನಾ ಪತ್ರವನ್ನು (Memorandum) ತಯಾರಿಸಲು 3 ಸದಸ್ಯರುಗಳನ್ನೊಳಗೊಂಡ ತಾಂತ್ರಿಕ ಕೋಶವನ್ನು ವಿತ್ತೀಯ ಕಾರ್ಯನೀತಿ ಸಂಸ್ಥೆಯಲಿ ಸಾಪಿಸುವ ಬಗೆ ಹಾಗೂ ಜ್ಞಾಪನ ಪತ್ರ ಸಿದ್ಧಪಡಿಸುವ ಕುರಿತು ಸಚಿವ ಸಂಪುಟ ಅನುಮೋದನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:46 pm, Fri, 5 January 24