AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ದನ ರೆಡ್ಡಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ, ಪಕ್ಷ ಹೊಂದಾಣಿಕೆಗೆ ಗಣಿ ಧಣಿ ನಿರ್ಧಾರ!

ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳು ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ತೀರ್ಮಾನಿಸಿದ್ದಾರೆ. ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಹೈಕಮಂಡ್ ಸಮ್ಮತಿಸಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗಬೇಕೆನ್ನುವ ಗಾಲಿ ಜನಾರ್ದನ ರೆಡ್ಡಿ ಅವರ ಕನಸು ಕನಸಾಗಿಯೇ ಉಳಿದಿದೆ. ಆದ್ರೆ, ಬಿಜೆಪಿ ಜೊತೆ ಹೊಂದಾಣಿಕೆಗೆ ಜನಾರ್ದನ ರೆಡ್ಡಿ ನಿರ್ಧರಿಸಿದ್ದಾರೆ.

ಜನಾರ್ದನ ರೆಡ್ಡಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ, ಪಕ್ಷ ಹೊಂದಾಣಿಕೆಗೆ ಗಣಿ ಧಣಿ ನಿರ್ಧಾರ!
ರಮೇಶ್ ಬಿ. ಜವಳಗೇರಾ
|

Updated on: Jan 31, 2024 | 6:08 PM

Share

ಬೆಂಗಳೂರು, (ಜನವರಿ 31):  ಜನಾರ್ದನ ರೆಡ್ಡಿ (janardhan reddy) ಬಿಜೆಪಿ ಸೇರ್ಪಡೆಗೆ ಇನ್ನೂ ಮುಹೂರ್ತ ಕೂಡಿಬಂದಿಲ್ಲ. ಅದ್ಯಾಕೋ ಹೈಕಮಾಂಡ್ ಸದ್ಯಕ್ಕೆ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮನಸ್ಸು ಮಾಡುತ್ತಿಲ್ಲ ಹೀಗಾಗಿ ಕೆಆರ್‌ಪಿಪಿ (KRPP) ಸಂಸ್ಥಾಪಕ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ. ಇಂದು (ಜನವರಿ 31) ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನವಾಗಿದೆ. ಬಿಜೆಪಿ ಜೊತೆ ಹೊಂದಾಣಿಕೆಗೆ ನಾಯಕರು ಸಹ ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ರೆಡ್ಡಿ ಸದ್ಯ ಬಿಜೆಪಿ ಸೇರ್ಪಡೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ.

ಬಿಜೆಪಿ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದ ಹಿನ್ನೆಲೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಗೆ ನಿರ್ಧಾರಿಸಲಾಗಿದೆ. ಮೊನ್ನೇ ಅಷ್ಟೇ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿ ಜನಾರ್ದನ ರೆಡ್ಡಿ ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಇದರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಸುಳಿವು ಸಹ ನೀಡಿದ್ದರು. ಅಲ್ಲದೇ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಬಹಿರಂಗವಾಗಿ ಹೇಳಿದ್ದರು. ಇದೀಗ ಅಂತಿಮವಾಗಿ ರೆಡ್ಡಿ ಬಿಜೆಪಿಗೆ ಜೈ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ಬಿಜೆಪಿಗೆ ಸೇರುತ್ತಾರಾ ಜನಾರ್ದನ್ ರೆಡ್ಡಿ? ಸುಳಿವು ನೀಡಿದ ಕೆಆರ್​ಪಿಪಿ ಸ್ಥಾಪಕ

ರೆಡ್ಡಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಹಿಂದೇಟು?

ಜಗದೀಶ್ ಶೆಟ್ಟರ್ ವಾಪಸ್ ಬಿಜೆಪಿಗೆ ಸೇರ್ಪಡೆಯಾದ ಬಳಿಕ ಕೆಆರ್‌ಪಿಪಿ ಸಂಸ್ಥಾಪಕ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಸೇರಿಸಿಕೊಳಳ್ಳು ಕೆಲ ನಾಯಕರು ಹೈಕಮಾಂಡ್​ ಜತೆ ಚರ್ಚಿಸಿದ್ದರು.  ಸ್ವತಃ ರೆಡ್ಡಿಯೇ ಬಿಜೆಪಿಗೆ ವಾಪಸ್ ಆಗಲು ಉತ್ಸುಕರಾಗಿದ್ದರು. ಜನಾರ್ದನ ರೆಡ್ಡಿ ಆವರೊಂದಿಗೆ ಬಿಜೆಪಿ ಹೈಕಮಾಂಡ್‌ ನಿರಂತರ ಸಂಪರ್ಕದಲ್ಲಿತ್ತು. ಇನ್ನೇನು ಸೇರ್ಪಡೆ ದಿನಾಂಕ ನಿಗದಿಯಾಗುವುದು ಬಾಕಿ ಇದೆ ಎನ್ನಲಾಗಿತ್ತು. ಕೆಆರ್‌ಪಿಪಿ ಉಳಿಸಿಕೊಂಡು ಬಿಜೆಪಿ ಸೇರ್ಪಡೆಯಾಗಬೇಕೇ ಅಥವಾ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಬೇಕೇ ಎನ್ನುವ ಬಗ್ಗೆಯೂ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿತ್ತು.

ಆದರೆ, ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು  ಅದ್ಯಾಕೋ ಮನಸ್ಸು ಮಾಡಿಲ್ಲ.  ಕೆಲ ಗಂಭೀರ ಅಪವಾಧಗಳು ಅವರ ಮೇಲಿರುವ ಕಾರಣದಿಂದ ಪಕ್ಷ ಸೇರಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಹಿಂದೇಟು ಹಾಕಿದೆ ಎನ್ನಲಾಗುತ್ತಿದೆ. ಹೀಗಾಗಿ ವಿಧಿ ಇಲ್ಲದೇ  ಜನಾರ್ದನ ರೆಡ್ಡಿ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ತೀರ್ಮಾನ ಕೈಗೊಂಡಿದ್ದಾರೆ. ಇದರೊಂದಿಗೆ ಬಿಜೆಪಿ ಸೇರಬೇಕೆನ್ನುವ ರೆಡ್ಡಿ ಕನಸು ಕನಸಾಗಿಯೇ ಉಳಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು