AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್​ನಿಂದ ಗ್ರೀನ್ ಸಿಗ್ನಲ್, ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್!

gali janardhan reddy: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಇದರ ಮಧ್ಯೆ ಪಕ್ಷಾಂತರ ಪರ್ವ ಸಹ ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಕೆಆರ್​ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿದೆ.

ಹೈಕಮಾಂಡ್​ನಿಂದ ಗ್ರೀನ್ ಸಿಗ್ನಲ್, ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್!
ಅಮಿತ್ ಶಾ, ಜನಾರ್ದನ ರೆಡ್ಡಿ
TV9 Web
| Edited By: |

Updated on: Mar 24, 2024 | 1:44 PM

Share

ಬೆಂಗಳೂರು, (ಮಾರ್ಚ್ 24):​ ರಾಜ್ಯದಲ್ಲಿ ಲೋಕಸಭೆ ಚುನಾವಣೆ (Loksabha Elections 2024) ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಇದರ ಮಧ್ಯೆ ಬಿಜೆಪಿ ಹೈಕಮಾಂಡ್, ಕೆಆರ್​ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ (gali janardhan reddy) ಅವರನ್ನು ಮರಳಿ ಬಿಜೆಪಿಗೆ ಸೇರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ಈ ಬಗ್ಗೆ ಚರ್ಚಿಸಲು ಹೈಕಮಾಂಡ್, ಶ್ರೀರಾಮುಲು ಅವರನ್ನು ಕರೆಯಿಸಿಕೊಂಡು ಮಾತುಕತೆ ನಡೆಸಿತ್ತು. ಬಳಿಕ ಖುದ್ದು ಅಮಿತ್ ಶಾ, ಜನಾದರ್ನ ರೆಡ್ಡಿಯನ್ನು ದೆಹಲಿಗೆ ಕರೆಯಿಸಿಕೊಂಡು ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದರು. ಇದೀಗ ರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಮುಹೂರ್ತ ಸಹ ಫಿಕ್ಸ್ ಆಗಿದೆ. ನಾಳೆ(ಮಾರ್ಚ್ 25) ಜನಾರ್ದನ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತಮ್ಮ ಬೆಂಬಲಿಗರಿಗೆ ತಿಳಿಸಲು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ.

ಹೌದು..ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾದರ್ನ ರೆಡ್ಡಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಇಂದು (ಮಾರ್ಚ್ 24) ಸಂಜೆ ಬೆಂಗಳೂರಿನಲ್ಲಿ ಕರೆದಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಪಾರಿಜಾತ ಅಪಾರ್ಟ್ಮೆಂಟ್ ನಲ್ಲಿ  ಕೆಆರ್‌ಪಿಪಿ ಪಕ್ಷದ ಮುಖಂಡರ ಜತೆ ಸಭೆ ನಡೆಯಲಿದ್ದು, ಸಭೆ ಬಳಿಕ ಸಂಜೆ 5 ಗಂಟೆಗೆ ರೆಡ್ಡಿ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಲಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿಯನ್ನು ದಿಲ್ಲಿಗೆ ಕರೆಯಿಸಿಕೊಂಡು ಮಾತನಾಡಿದ ಶಾ, ಭೇಟಿ ಹಿಂದಿನ ರಹಸ್ಯವೇನು?

ಕೇಂದ್ರ ಗೃಹ ಸಚಿವ ಅಮಿತ್ ಆಹ್ವಾನದ ಮೇರೆಗೆ ಕೆಲವು ದಿನಗಳ ಹಿಂದೆ ದೆಹಲಿಗೆ ತೆರಳಿದ್ದರು. ಅಲ್ಲಿ ಶಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದಲ್ಲಿ ಬಗ್ಗೆ ಮಾತುಕತೆ ನಡೆಸಿದ್ದರು. ಈ ವೇಳೆ ಬಿಜೆಪಿಗೆ ಸೇರುವಂತೆ ರೆಡ್ಡಿಗೆ ಆಹ್ವಾನ ನೀಡಿದ್ದಾರೆ. ಅಲ್ಲದೇ ಕೆಆರ್​ಪಿಪಿ ಪಕ್ಷವನ್ನು ವಿಲೀನಗೊಳಿಸುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ನಿಲುವು ಬದಲಿಸುತ್ತಾರಾ ರೆಡ್ಡಿ?

ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜನಾದರ್ನ ರೆಡ್ಡಿ ಕಾಂಗ್ರೆಸ್​ಗೆ ಮತ ನೀಡಿದ್ದರು. ಸಿಎಂ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಖುದ್ದು ಆಹ್ವಾನಿಸಿ ಮಾತುಕತೆ ನಡೆಸಿದ್ದರಿಂದ ಕಾಂಗ್ರೆಸ್​ ಅಭ್ಯರ್ಥಿಗೆ ಬೆಂಬಲಿಸಲು ಒಪ್ಪಿದ್ದರು. ಇದೀಗ ಲೋಕಸಭೆ ಚುನಾವಣೆ ಪೂರ್ಣ ಅಮಿತ್ ಶಾ ಅಹ್ವಾನಿಸಿರುವ ಕಾರಣ ರೆಡ್ಡಿ ತಮ್ಮ ನಿಲುವು ಬದಲಿಸಿ ಬಿಜೆಪಿ ಸೇರ್ಪಡೆಯಾಗಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಒಂದು ಕಾಲದ ಆಪ್ತಮಿತ್ರ, ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಜನಾರ್ದನ ರೆಡ್ಡಿ ಅವರನ್ನು ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರ ಜೊತೆ ಮಾತುಕತೆ ನಡೆಸಿದ್ದರು. ರೆಡ್ಡಿ ಅವರನ್ನು ಸೇರಿಸಿಕೊಂಡರೆ ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ ಎನ್ನುವುದನ್ನು ತಿಳಿಸಿದ್ದರು. ಹೀಗಾಗಿ ಖುದ್ದು ಶಾ, ರೆಡ್ಡಿಯನ್ನು ದಿಲ್ಲಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್