ಸಿದ್ದರಾಮಯ್ಯ, ಕುಮಾರಸ್ವಾಮಿಗೆ ತಲೆ ಕೆಟ್ಟಿದೆ: ಸಚಿವ ಕೆ.ಎಸ್. ಈಶ್ವರಪ್ಪ

ಯಾರೂ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ. ಬಲವಂತವಾಗಿ ದೇಣಿಗೆ ಸಂಗ್ರಹ ಮಾಡಿದ್ದರೆ ದೂರು ಕೊಡಿ. ಮನೆಗಳಿಗೆ ಮಾರ್ಕ್ ಮಾಡುತ್ತಿದ್ದರೆ ಎಲ್ಲಿ ಅಂತ ತೋರಿಸಿ. ದಾಖಲೆ ಕೊಡಿ, ವಿಷಯಾಂತರ ಮಾಡಬೇಡಿ ಎಂದು ರೇಣುಕಾಚಾರ್ಯ ಹೇಳಿದರು.

  • TV9 Web Team
  • Published On - 15:07 PM, 17 Feb 2021
ಸಿದ್ದರಾಮಯ್ಯ, ಕುಮಾರಸ್ವಾಮಿಗೆ ತಲೆ ಕೆಟ್ಟಿದೆ: ಸಚಿವ ಕೆ.ಎಸ್. ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕಾಗಿ ಇಡೀ ರಾಜ್ಯದ ಜನರು ದೇಣಿಗೆಯನ್ನು ನೀಡುತ್ತಿದ್ದಾರೆ. ದೇಶ, ವಿಶ್ವದೆಲ್ಲೆಡೆಯಿಂದ ದೇಣಿಗೆ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಗೆ ತಲೆ ಕೆಟ್ಟಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಸ್ಥಳ ಬದಲಾದರೆ ಮಾಡಿದರೆ ದೇಣಿಗೆ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಒಬ್ಬ ವಕೀಲರಾಗಿ ಈ ರೀತಿಯಾಗಿ ಹೇಳುವುದು ಸರಿಯಲ್ಲ. ಈಗಾಗಲೇ ಜೆಡಿಎಸ್ ಪಕ್ಷ ನೆಲಕಚ್ಚಿ ಹೋಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ತಲೆಹರಟೆ ಮಾಡಬಾರದು. ಈ ರೀತಿ ಮಾಡಿದರೆ ಮುಸ್ಲಿಂ ಮತಗಳು ಸಹ ಬೀಳಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

ಹೆಚ್​ಡಿಕೆಗೆ ರೇಣುಕಾಚಾರ್ಯ ತಿರುಗೇಟು
ಕುಮಾರಸ್ವಾಮಿಯವರೇ ನೀವ್ಯಾಕೆ ಸಂಘ ಪರಿವಾರದ ಕಾರ್ಯಕರ್ತರನ್ನು ಹಿಟ್ಲರ್​ಗೆ ಹೋಲಿಸುತ್ತೀರಿ? ಯಾರೂ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ. ಬಲವಂತವಾಗಿ ದೇಣಿಗೆ ಸಂಗ್ರಹ ಮಾಡಿದ್ದರೆ ದೂರು ಕೊಡಿ. ಮನೆಗಳಿಗೆ ಮಾರ್ಕ್ ಮಾಡುತ್ತಿದ್ದರೆ ಎಲ್ಲಿ ಅಂತ ತೋರಿಸಿ. ದಾಖಲೆ ಕೊಡಿ, ವಿಷಯಾಂತರ ಮಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಮಮಂದಿರ ಬಹಳ ವರ್ಷಗಳ ಕನಸು. ಬಿಜೆಪಿ ಯಾವತ್ತೂ ವೋಟ್ ಬ್ಯಾಂಕ್ ರಾಜಕಾರಣ ಮಾಡಿಲ್ಲ. ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ರಾಮಮಂದಿರ ದೇಣಿಗೆಯಲ್ಲಿ ಒಂದು ರೂಪಾಯಿ ಕೂಡಾ ವ್ಯತ್ಯಾಸ ಆಗಲ್ಲ. ನೀವೂ ದೇವಭಕ್ತರು. ನೀವೂ ರಾಮ ಮಂದಿರಕ್ಕೆ ಉದಾರ ಮನಸ್ಸಿನಿಂದ ದೇಣಿಗೆ ಕೊಡಿ. ದೇಣಿಗೆ ಕೊಟ್ಟು ರಾಮನ ಕೃಪೆಗೆ ಒಳಗಾಗಿ. ಇಂತಹ ಹೇಳಿಕೆ ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರಲ್ಲ. ಅನುಮಾನಾಸ್ಪದವಾಗಿ ಯಾರಾದರೂ ದೇಣಿಗೆ ಸಂಗ್ರಹ ಮಾಡುತ್ತಿದ್ದರೆ ಅಂಥವರ ಮೇಲೆ ಪೊಲೀಸ್ ದೂರು ಕೊಡಿ ಎಂದು ರೇಣುಕಾಚಾರ್ಯ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ಕನ್ಫರ್ಮ್​.. ಫೆಬ್ರವರಿ 22ರಂದು ಕಾಂಗ್ರೆಸ್​ಗೆ ಸೇರ್ಪಡೆಯಾಗಲಿರುವ ಶರತ್ ಬಚ್ಚೇಗೌ