KS Eshwarappa: ಚುನಾವಣಾ ರಾಜಕೀಯಕ್ಕೆ ಹಿಂದೂ ಫೈರ್ ಬ್ರಾಂಡ್ ಗುಡ್ ​ಬೈ: ಕೆಎಸ್ ಈಶ್ವರಪ್ಪ ರಿಯಾಕ್ಷನ್ ಹೀಗಿದೆ

ಚುನಾವಣೆ ಸಮೀಪದಲ್ಲಿರುವಾಗಲೇ ಹಿಂದೂ ಫೈರ್ ಬ್ರಾಂಡ್ ಎಂದು ಹೆಸರಾಗಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದಾರೆ.

KS Eshwarappa: ಚುನಾವಣಾ ರಾಜಕೀಯಕ್ಕೆ ಹಿಂದೂ ಫೈರ್ ಬ್ರಾಂಡ್ ಗುಡ್ ​ಬೈ: ಕೆಎಸ್ ಈಶ್ವರಪ್ಪ ರಿಯಾಕ್ಷನ್ ಹೀಗಿದೆ
ಕೆಎಸ್ ಈಶ್ವರಪ್ಪ
Follow us
Rakesh Nayak Manchi
|

Updated on:Apr 11, 2023 | 5:30 PM

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪದಲ್ಲಿರುವಾಗಲೇ ಹಿಂದೂ ಫೈರ್ ಬ್ರಾಂಡ್ ಎಂದು ಹೆಸರಾಗಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದ ಬಿಎಸ್ ಯಡಿಯೂರಪ್ಪ (BS Yediyurappa) ಅವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದಾರೆ. ಹಿರಿಯರಿಗೆ ಟಿಕೆಟ್ ನಿರಾಕರಣೆ ಬಗ್ಗೆ ಮಾಹಿತಿ ಲಭ್ಯವಾದ ಹಾಗೂ ಪುತ್ರ ಕಾಂತೇಶ್ ರಾಜಕೀಯ ಭವಿಷ್ಯಕ್ಕೆ ಅನುಕೂಲವಾಗಲು ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದಕ್ಕೂ ಮುನ್ನ ಈಶ್ವರಪ್ಪ ಅವರು ಸಮುದಾಯದ ಸ್ವಾಮೀಜಿಗಳು ಹಾಗೂ ಸಂಘ ಪರಿವಾರದ ಮುಖಂಡರ ಜತೆಗೂ ಚರ್ಚಿಸಿ ನಿವೃತ್ತಿ ನಿರ್ಣಯ ಕೈಗೊಂಡು ಬಳಿಕ ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ (JP Nadda) ಪತ್ರ ಕಳುಹಿಸಿದ್ದಾರೆ.

ಚುನಾವಣಾ ರಾಜಕೀಯದಿಂದ ಹಿಂದೆಸರಿದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಈಶ್ವರಪ್ಪ, ರಾಜ್ಯ ಚುನಾವಣಾ ಸಮಿತಿಯ ಗಮನಕ್ಕೆ ತಂದಿದ್ದೆ. ಆದರೆ ನನ್ನ ಮಾತಿಗೆ ಯಾರು ಗಮನ ಕೊಡಲಿಲ್ಲ. ಹೀಗಾಗಿ ಇವತ್ತು ಬೆಳಿಗ್ಗೆ ರಾಷ್ಟ್ರೀಯ ಅದ್ಯಕ್ಷರಿಗೆ ಪತ್ರ ಬರೆದಿದ್ದೇನೆ. ಸ್ವ  ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ. ಕೇಂದ್ರದ ನಾಯಕರು ನನ್ನ ಮನವಿ ಪರಿಗಣಿಸುವ ವಿಶ್ವಾಸವಿದೆ ಎಂದರು.

ಇದನ್ನೂ ಓದಿ: KS Eshwarappa: ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ; ಬಿಜೆಪಿ ಹೈಕಮಾಂಡ್​ಗೆ ಟಿಕೆಟ್ ನೀಡಬೇಡಿ ಎಂದು ಮನವಿ

ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ನಿವೃತ್ತಿ ಹೊಂದುವಂತೆ ನನಗೆ ಯಾರ ಒತ್ತಡವೂ ಇರಲಿಲ್ಲ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ರಾಜ್ಯದಲ್ಲಿ ಸಂಘಟನೆಗೆ ಶಕ್ತಿ ತುಂಬಬೇಕು. ರಾಜ್ಯದಲ್ಲಿ ಬಿಜೆಪಿ ಒಮ್ಮೆಯೂ ಬಹುಮತದಿಂದ ಸರ್ಕಾರ ರಚಿಸಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ಬರಬೇಕು. ಇದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಈಶ್ವರಪ್ಪ ಚುನಾವಣೆ ನಿವೃತ್ತಿ ನಿರ್ಧಾರಕ್ಕೆ ಕಾರ್ಯಕರ್ತರ ಆಕ್ರೋಶ

ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದನ್ನು ಖಂಡಿಸಿರುವ ಕಾರ್ಯಕರ್ತರು, ಬೆಂಬಲಿಗರು ಈಶ್ವರಪ್ಪ ನಿವಾಸದ ಎದುರು ಜಮಾಯಿಸಿ ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಈಶ್ವರಪ್ಪಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟು ಹಿಡಿದರು. ಮಾತ್ರವಲ್ಲದೆ, ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರನ್ನು ಹೊತ್ತು ಮೆರೆಸಿದರು. ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗುತ್ತಿದ್ದಾರೆ.

ಪಕ್ಷದ ಯಾವ ಕಾರ್ಯಕರ್ತರು ಕೂಡ ಬೇಸರವಾಗಬಾರದು: ಕಾಂತೇಶ್

ಚುನಾವಣಾ ರಾಜಕೀಯಕ್ಕೆ ನನ್ನ ತಂದೆ ನಿವೃತ್ತಿ ಘೋಷಣೆ ಮಾಡಿರುವುದು ನಿಜ. ಈ ಬಗ್ಗೆ ಯಾವುದೇ ಒತ್ತಡ ಇರಲಿಲ್ಲ. ಯೋಚನೆ ಮಾಡಿಯೇ ನಮ್ಮ ತಂದೆ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಬೇಸರವಾಗಬಾರದು ಎಂದು ಈಶ್ವರಪ್ಪ ಪುತ್ರ ಕಾಂತೇಶ್ ಮನವಿ ಮಾಡಿದ್ದಾರೆ.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Tue, 11 April 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ