AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಕೊಡ್ತಿನಿ ತನಿಖೆ ಮಾಡೋ ಧಮ್ ನಿಮ್ಗೆ ಇದ್ಯಾ; ಕಾಂಗ್ರೆಸ್​ ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲ್

ಕಾಂಗ್ರೆಸ್​ನವರ ಯೋಗ್ಯತೆಗೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಯಾವುದೇ ಒಂದೇ ಒಂದು ದಾಖಲೆ ನೀಡಿರಲಿಲ್ಲ. ನಾನು ದಾಖಲೆ ಕೊಡುತ್ತೇನೆ ತನಿಖೆ ಮಾಡೋ ಧಮ್ ನಿಮಗೆ ಇದೆಯಾ? ಎಂದು ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​ಗೆ ಸವಾಲ್​ ಹಾಕಿದ್ದಾರೆ.

ದಾಖಲೆ ಕೊಡ್ತಿನಿ ತನಿಖೆ ಮಾಡೋ ಧಮ್ ನಿಮ್ಗೆ ಇದ್ಯಾ; ಕಾಂಗ್ರೆಸ್​ ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲ್
ಹೆಚ್​ಡಿ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 04, 2023 | 2:58 PM

Share

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಹೆಚ್​ ಡಿ ಕುಮಾರಸ್ವಾಮಿ(HD Kumaraswamy) ಕಮಿಷನ್​ ಆರೋಪ ಕುರಿತು ದಾಖಲೆ ಕೊಟ್ಟು ಆರೋಪ ಮಾಡಲಿ ಎಂದು ಉಪ ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದರು. ಇದೀಗ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹೆಚ್.ಡಿ ಕುಮಾರಸ್ವಾಮಿ ‘ಕಾಂಗ್ರೆಸ್​ನವರ ಯೋಗ್ಯತೆಗೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಯಾವುದೇ ಒಂದೇ ಒಂದು ದಾಖಲೆ ನೀಡಿರಲಿಲ್ಲ ಎಂದಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ‘ಬಿಜೆಪಿ ಸರ್ಕಾರದ ವಿರುದ್ಧ 2 ವರ್ಷ ಆರೋಪ ಮಾಡಿ, ಪ್ರತಿದಿನ ತನಿಖೆ ತನಿಖೆ ಎಂದು ಗುಮ್ಮ ತೋರಿಸುತ್ತಿದ್ದರು ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ.

ದಾಖಲೆ ಕೊಡುತ್ತೇನೆ ತನಿಕೆ ಮಾಡೋ ಧಮ್ ನಿಮಗೆ ಇದೆಯಾ?

ನನ್ನ ಆರೋಪಕ್ಕೆ ದಾಖಲೆ ಕೇಳ್ತಿದ್ದಾರೆ ಕಾಂಗ್ರೆಸ್ ನಾಯಕರು. ಅವರ ಕನಸು ನಾನು ಈಡೇರಿಸುತ್ತೇನೆ. ನಾನು ದಾಖಲೆ ಕೊಟ್ಟರೆ ಯಾವ ಮಂತ್ರಿಯ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ಆ ಮಂತ್ರಿಯನ್ನು ವಜಾ ಮಾಡ್ತಿರಾ? ಆ ಮಂತ್ರಿಯನ್ನು ವಜಾ ಮಾಡುವ ತಾಕತ್ ಇವರಿಗೆ ಇದೆಯಾ? ನಾನು ನನ್ನ ಬಳಿ ಇರುವ ದಾಖಲೆಯನ್ನು ಸದನದಲ್ಲಿಯೇ ಇಡುತ್ತೇನೆ. ನಾನು ದಾಖಲೆ ಕೊಟ್ಟರೆ ಈ ಸರ್ಕಾರ ಎಲ್ಲಿರುತ್ತೊ ಗೊತ್ತಿಲ್ಲ. ಸುಮ್ಮನೆ ಸ್ವಲ್ಪ ದಿನ ಈ ಸರಕಾರ ನೆಮ್ಮದಿಯಾಗಿರಲಿ ಎಂದು ಬಿಟ್ಟಿದೀನಿ. ಸರಕಾರ ತಿದ್ದಿಕೊಂಡರೆ ಒಳ್ಳೆಯದು ಎಂದು ಬಿಟ್ಟಿದೀನಿ ಅಷ್ಟೇ ಎಂದರು.

ಇದನ್ನೂ ಓದಿ:ಚುನಾವಣೆಯಿಂದ ನಿವೃತ್ತಿ ಅಷ್ಟೇ. ರಾಜಕೀಯಯಿಂದ ನಿವೃತ್ತಿಯಾಗುವುದಿಲ್ಲ: ಸಿದ್ದರಾಮಯ್ಯ ಘೋಷಣೆ

ಹನಿಮೂನ್ ಪೀರಿಯಡ್ ನಲ್ಲೇ ಹೀಗಾದರೆ ಮುಂದಿನ ಪೀರಿಯಡ್ ಗಳ ಕಥೆ ಏನು ಎಂದು ಕುಟುಕಿದ ಕುಮಾರಸ್ವಾಮಿ

ಈ ಸರಕಾರ ಇನ್ನೂ ಹನಿಮೂನ್ ಪೀರಿಯಡ್ ನಲ್ಲಿ ಇದೆ ಎಂದು ಹೇಳುತ್ತಿದ್ದಾರೆ ಕಾಂಗ್ರೆಸ್‌ ನವರು. ಸರಕಾರಕ್ಕೆ ಐದು ಆರು ತಿಂಗಳಾದರೂ ಸಮಯ ಕೊಡಬೇಡವೇ ಎಂದು ಕೆಲವರು ಕೇಳುತ್ತಿದ್ದಾರೆ. ಹನಿಮೂನ್ ಪೀರಿಯಡ್ ನಲ್ಲಿದ್ದರೆ ಹಿಗೆಲ್ಲಾ ಮಾಡುತ್ತಾರೆಯೇ? ಹನಿಮೂನ್ ಪಿರಿಯಡ್ ನಲ್ಲೇ ಹೀಗಾದರೆ ಮುಂದಿರುವ ಪೀರಿಯಡ್ ಗಳ ಕಥೆ ಏನು? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಸುಳ್ಳು ದಾಖಲೆ ಹೇಳಿ ಅಧಿಕಾರಕ್ಕೆ ಬಂದಿದೀರಾ? ಎಂದು ಕಾಂಗ್ರೆಸ್​ಗೆ ಪ್ರಶ್ನಿಸಿದ ಕುಮಾರಸ್ವಾಮಿ

ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ಕೊನೆಪಕ್ಷ ಒಂದು ದಾಖಲೆಯನ್ನೂ ಬಿಡುಗಡೆ ಮಾಡಿಲ್ಲ. ಮಂತ್ರಿಯೊಬ್ಬರು ನಾನು ದಾಖಲೆ ಸಮೇತ ಆರೋಪ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಅದು ಯಾವ ದಾಖಲೆ ಕೊಟ್ಟಿದ್ದಾರೆ, ಯಾವ ತನಿಖೆ ನಡೆದಿದೆ ನಡೆದಿದೆ ಎನ್ನುವುದರ ಬಗ್ಗೆ ಮಾಹಿತಿ ಕೊಡಲಿ. ಚುನಾವಣೆ ಸಮಯದಲ್ಲಿ ಇವರು ಭ್ರಷ್ಟಾಚಾರದ ಬಗ್ಗೆ ಪುಟಗಟ್ಟಲೆ ಜಾಹಿರಾತು ಕೊಟ್ಟರು. ಆದರೆ, ಒಂದು ದಾಖಲೆಯನ್ನಾದರೂ ಬಿಡುಗಡೆ ಮಾಡಿದಾರಾ? ಸುಳ್ಳು ದಾಖಲೆ ಹೇಳಿ ಅಧಿಕಾರಕ್ಕೆ ಬಂದಿದೀರಾ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ:Budget Session: ಸದನದಲ್ಲಿ ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ನಡುವೆ ‘ಮೊಂಡಾಟದ’ ವಾಕ್ಸಮರ, ಪ್ರೇಕ್ಷಕರಾದ ಸ್ಪೀಕರ್!

ಕಾಂಗ್ರೆಸ್​ನವರು ವರ್ಗಾವಣೆ ದಂಧೆಗೆ ಹಣ ನಿಗದಿ

ಕಾಂಗ್ರೆಸ್ ನವರು ಹಗಲು ದರೋಡೆ ಗೆ ಇಳಿದಿದ್ದಾರೆ. ವರ್ಗಾವಣೆ ದಂಧೆಗೆ ಹಣ ನಿಗದಿ ಮಾಡಿದ್ದಾರೆಂದು ಗೊತ್ತು. ಪ್ರತಿ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದಾರೆ. ಸಮಯ ಬಂದಾಗ ದಾಖಲೆ ಕೊಟ್ಟೆ ಕೊಡುತ್ತೇನೆ. ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ ಎಂದರು. ಇನ್ನು ನನ್ನ ಅವಧಿಯಲ್ಲಿ ನಡೆದ ವರ್ಗಾವಣೆಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ನನ್ನ ಕಾಲದಲ್ಲಿ ನಡೆದ ವರ್ಗಾವಣೆಯನ್ನು ತನಿಖೆ ಮಾಡಲಿ. ಐದು ವರ್ಷ ಕಾಂಗ್ರೆಸ್ ಪಕ್ಷದ ಪೂರ್ಣ ಸರಕಾರ ಇತ್ತಲ್ಲ, ಆ ಸರಕಾರದ ಅವಧಿಯಲ್ಲಿ ನಡೆದ ವರ್ಗಾವಣೆಗಳ ಕುರಿತು ಕೂಡ ತನಿಖೆ ನಡೆಸಲಿ ಎಂದಿದ್ದಾರೆ.

ದಾಖಲೆ ಕೊಟ್ಟರೆ ಆರೋಪಿತ ಸಚಿವರನ್ನು ವಜಾ ಮಾಡುತ್ತೀರಾ?

ನಾನು ಕೊಡುವ ದಾಖಲೆ ನೋಡಿದ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ?, ಆರೋಪಿತ ಸಚಿವರನ್ನು ವಜಾ ಮಾಡುತ್ತೀರಾ. ಮೊದಲು ಅವರು ಈ ಪ್ರಶ್ನೆಗೆ ಉತ್ತರ ಕೊಡಲಿ ಎಂದ ಅವರು ‘ಕೆಲವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ, ಈಗಾಗಲೇ ಡಿಕೆ ಶಿವಕುಮಾರ್ ಅವರು ಟವೆಲ್ ಹಾಕಿದ್ದಾರೆ ಎಂದು ಟಾಂಗ್ ನೀಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:32 pm, Tue, 4 July 23

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ