AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೈ’ ಸರ್ಕಾರದಲ್ಲಿ ರಾಮನ ಹೆಸರಿಗೂ ಇಲ್ಲ ಗ್ಯಾರಂಟಿ: ಸಿದ್ದರಾಮಯ್ಯ ಅಲ್ಪಾವಧಿ ಸಿಎಂ ಅಂತ ಪರೋಕ್ಷವಾಗಿ ಹೇಳಿದ ಕುಮಾರಸ್ವಾಮಿ

ಡಿಕೆ ಶಿವಕುಮಾರ್ ವಿರುದ್ಧ ಡುಪ್ಲಿಕೇಟ್ ಸಿಎಂ ಎನ್ನುತಲೇ ವಾಗ್ದಾಳಿ ನಡೆಸುತ್ತಿರುವ ಹೆಚ್​ಡಿ ಕುಮಾರಸ್ವಾಮಿ, ಇದೀಗ ಟ್ವೀಟ್ ಮೂಲಕ ಗುಡುಗಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರಕಾರದಲ್ಲಿ 'ರಾಮ'ನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದು ಹೇಳುವ ಮೂಲಕ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಐದು ವರ್ಷಗಳ ಕಾಲ ಮುಂದುವರಿಯುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

‘ಕೈ’ ಸರ್ಕಾರದಲ್ಲಿ ರಾಮನ ಹೆಸರಿಗೂ ಇಲ್ಲ ಗ್ಯಾರಂಟಿ: ಸಿದ್ದರಾಮಯ್ಯ ಅಲ್ಪಾವಧಿ ಸಿಎಂ ಅಂತ ಪರೋಕ್ಷವಾಗಿ ಹೇಳಿದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
Sunil MH
| Edited By: |

Updated on:Nov 13, 2023 | 8:39 PM

Share

ಬೆಂಗಳೂರು, ನ.13: ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಡುಪ್ಲಿಕೇಟ್ ಸಿಎಂ ಎನ್ನುತಲೇ ವಾಗ್ದಾಳಿ ನಡೆಸುತ್ತಿರುವ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಇದೀಗ ಟ್ವೀಟ್ ಮೂಲಕ ಗುಡುಗಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರಕಾರದಲ್ಲಿ ‘ರಾಮ’ನ ಹೆಸರಿಗೂ ಗ್ಯಾರಂಟಿ ಇಲ್ಲ ಎಂದು ಹೇಳುವ ಮೂಲಕ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಸ್ಥಾನದಲ್ಲಿ ಐದು ವರ್ಷಗಳ ಕಾಲ ಮುಂದುವರಿಯುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

“ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ” ಎಂದು ಟ್ವೀಟ್​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿರುವುದು ಡುಪ್ಲಿಕೇಟ್ ಸಿಎಂ, ಹೈಕಮಾಂಡ್​ಗೆ ಹಣಕೊಟ್ಟರೇ ಮಾತ್ರ ಮಂತ್ರಿ ಸ್ಥಾನ: ಕುಮಾರಸ್ವಾಮಿ

“ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್‌ ಗಿಮಿಕ್‌ ಮಾಡಲೇಬೇಕು ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ” ಎಂದಿದ್ದಾರೆ.

ಎಷ್ಟು ಜನರಿಗೆ ಗ್ಯಾರಂಟಿ ಫಲ ಸಿಕ್ಕಿದೆ?

“ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ” ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಇದನ್ನೂ ಓದಿ: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

“ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ʼಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ?” ಎಂದು ಟ್ವೀಟ್​ನಲ್ಲಿ ಕುಮಾರಸ್ವಾಮಿ ಕೇಳಿದ್ದಾರೆ.

“ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ʼರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ಕಾಂಗ್ರೆಸ್ ಸರಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ” ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿ ಐದು ವರ್ಷಗಳನ್ನು ಪೂರೈಸುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Mon, 13 November 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ