ಬೆಂಬಲದ ಭಿಕ್ಷೆ ಬೇಡಿದವರು ಯಾರು?- ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ಪ್ರಶ್ನೆ

ಜೆಡಿಎಸ್​ನವರ ಮನೆ ಬಾಗಿಲಿಗೆ ಹೋಗಿಲ್ಲ ಎಂದು ಹೇಳುತ್ತೀರಿ. ಮಿಸ್ಟರ್ ಸಿದ್ದಸೂತ್ರಧಾರ ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟಿದ್ದೆವಾ? ನಮ್ಮ ಮನೆಗೆ ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು?

ಬೆಂಬಲದ ಭಿಕ್ಷೆ ಬೇಡಿದವರು ಯಾರು?- ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ಪ್ರಶ್ನೆ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
Updated By: sandhya thejappa

Updated on: Dec 13, 2021 | 8:37 AM

ಬೆಂಗಳೂರು: ನಾನು ಯಾವತ್ತೂ ಜೆಡಿಎಸ್ನವರ ಮನೆ ಬಾಗಿಲಿಗೆ ಹೋಗಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವೋದೊಂದೇ ಗೊತ್ತು ಕಟ್ಟುವುದು ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ, ನಮ್ಮ ಮನೆ ಬಾಗಿಲಿಗೆ ಬಂದವರು ಕಾಂಗ್ರೆಸ್ ನಾಯಕರು. ಸರ್ಕಾರದ ನೇತೃತ್ವ ವಹಿಸಿ ಎಂದು ಕಾಂಗ್ರೆಸ್ನವರು ಕೇಳಿದ್ದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧವಿಲ್ವಾ? ಅಂತ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.

ಜೆಡಿಎಸ್​ನವರ ಮನೆ ಬಾಗಿಲಿಗೆ ಹೋಗಿಲ್ಲ ಎಂದು ಹೇಳುತ್ತೀರಿ. ಮಿಸ್ಟರ್ ಸಿದ್ದಸೂತ್ರಧಾರ ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟಿದ್ದೆವಾ? ನಮ್ಮ ಮನೆಗೆ ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದರು. ಆಗ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು? ಇದೆಲ್ಲಾ ಮಾಡಿದ್ದು ಯಾರು ಮಿಸ್ಟರ್ ಟರ್ಮಿನೇಟರ್? ಅಂತ ಟ್ವೀಟ್ ಮೂಲಕ ಹೆಚ್ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬಂಡೆಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿದವಱರು? ಪರಮಪಾತಕ ಪರಾಕಾಷ್ಠೆ ಯಾವುದು ಅಂತ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ, ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ಬ್ರೂಟಸ್ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ವಿಷ. ಆ ವಿಷವೇ ನಿಮಗೆ ಮುಳುವು ಅಂತ ಹೆಚ್ಡುಕೆ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ

ಶಾಲೆ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕುಡಿದ ಮತ್ತಿನಲ್ಲಿ ಸ್ನೇಹಿತರೇ ಕೊಲೆ ಮಾಡಿರುವ ಶಂಕೆ

Women Health: ಹೆರಿಗೆಯ ನಂತರ ತಲೆ ಕೂದಲು ಉದುರುವ ಸಮಸ್ಯೆ ಎದುರಾಗಿದೆಯೇ; ಇಲ್ಲಿದೆ ಸೂಕ್ತ ಪರಿಹಾರ