ರಾಮನಗರ: ಕೋವಿಡ್ ಇದ್ದಾಗ ಬರಲಿಲ್ಲ, ಪ್ರವಾಹ ಬಂದಾಗ ಬರಲಿಲ್ಲ. ಈಗ ಮಾತ್ರ ಕರ್ನಾಟಕದ ಬಗ್ಗೆ ಪ್ರೀತಿ ಉಕ್ಕಿ ಹರಿಯುತ್ತಿದೆ. ಕೇವಲ ಬರುತ್ತಾರೆ, ಹೋಗುತ್ತಾರೆ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (Kumaraswamy) ಕಿಡಿಕಾರಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ ವಿಚಾರವಾಗಿ ರಾಮನಗರ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಾಸಕರು, ಸಚಿವರು ಮಾಡುವ ಉದ್ಘಾಟನೆಗೆ ಮೋದಿ ಕರೆಸುತ್ತಿದ್ದಾರೆ. ಮೋದಿ ಬಂದು ಶಂಕುಸ್ಥಾಪನೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ವಾಗ್ದಾಳಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡದೇ ತಂತ್ರಗಾರಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನ ಯಾರು ಕಟ್ಟಾಕೊಕಾಗಲ್ಲ. ಜನ ಫ್ರೀ ಬಿಡುತ್ತಾರೆ ಎಂದು ಹೇಳಿದರು.
ಚನ್ನಪಟ್ಟಣದ ಕಾರ್ಯಕರ್ತರು ನನಗೆ ರಾಜ್ಯ ಕಟ್ಟುವ ಕೆಲಸ ಕೊಟ್ಟಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಜನರು ನನ್ನ ಮನೆ ಮಗನಂತೆ ನೋಡುತ್ತಿದ್ದಾರೆ. ಯಾರು ಏನೇ ಅಪಪ್ರಚಾರ ಮಾಡಿದರು ಜನ ಕಿವಿಕೊಡಲ್ಲ. ಜನರೇ ನನಗೆ ರಕ್ಷಣೆ ನೀಡುತ್ತಾರೆ. ಎಲ್ಲವನ್ನೂ ಜನರಿಗೆ ಬಿಟ್ಟು ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಕಾಂಗ್ರೆಸ್ನಿಂದ ಯಾರೇ ನಿಂತರೂ ತಲೆಕೆಡಿಸಿಕೊಳ್ಳಲ್ಲ ಎಂದರು.
ಇದನ್ನೂ ಓದಿ: Congress Candidates List: ಕಾಂಗ್ರೆಸ್ ಮೊದಲ ಪಟ್ಟಿ; 9 ಪ್ರಮುಖ ಅಂಶಗಳುವ ಇಲ್ಲಿವೆ ನೋಡಿ
ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ರದ್ದು ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಇಂತಹ ತೀರ್ಮಾನ ಕೇಂದ್ರ ಸರ್ಕಾರ ಮತ್ತು ಲೋಕಸಭೆಯಲ್ಲಿ ತೆಗೆದುಕೊಂಡಿರುವುದು. ನಿಜಕ್ಕೂ ಇದು ಸಂವಿಧಾನಕ್ಕೆ ಅತ್ಯಂತ ಧಕ್ಕೆ ತಂದಿರುವುದು. ಯಾವುದೇ ಪಕ್ಷಗಳು ಇರಲಿ, ಇವತ್ತು ಆ ಕುಟುಂಬದಲ್ಲೂ ಅವರ ಅಜ್ಜಿ, ಅವರ ತಂದೆ ದೇಶದಲ್ಲಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಾಗ ಹತ್ಯೆಗೆ ಒಳಗಾದ ಕುಟುಂಬ ದೇಶಕ್ಕೆ ಅವರದ್ದೇ ಆದಾ ಕೊಡುಗೆ ಇದೆ.
ಇಲ್ಲಿ ನಮ್ಮ ರಾಜ್ಯದಲ್ಲಿ ಯಾವ ರೀತಿ ಪದ ಬಳಿಕೆ ಮಾಡಿದ್ದಾರೆ. ಉರಿಗೌಡ ಮತ್ತು ನಂಜೇಗೌಡ ಟಿಪ್ಪುನ ಯಾವ ರೀತಿ ಕೊಂದ್ದರು ಆ ರೀತಿ ಸಿದ್ದರಾಮಯ್ಯರನ್ನ ಕೊಲ್ಲಬೇಕು ಅಂತ ಹೇಳಿದ ಮಂತ್ರಿ ಇದ್ದಾರೆ. ಅವರ ಮೇಲೆ ಯಾವುದೇ ಕ್ರಮ ಇಲ್ಲ ಎಂದು ಹೇಳಿದರು.
ರಾಮನಗರ ಕ್ಷೇತ್ರದಲ್ಲಿ ಡಿ.ಕೆ ಸುರೇಶ್ ಹೆಸರು ಪ್ರಸ್ತಾಪಿಸಿ ಇಕ್ಬಾಲ್ ಹುಸೇನ್ ಟಿಕೆಟ್ ಘೋಷಣೆ ವಿಚಾರವಾಗಿ
ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಅದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ವಿರುದ್ಧ ಯಾರೇ ಅಭ್ಯರ್ಥಿಯಾಗಿದ್ದರು ಕಣಕ್ಕಿಳಿಯಲು ತಯಾರಿದ್ದೇವೆ ಎಂದು ಹೇಳಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಫೈನಲ್ ಮಾಡದೇ ಕಾಂಗ್ರೆಸ್ ತಂತ್ರಗಾರಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಕಟ್ಟಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಜಿಲ್ಲೆಯ ಜನತೆ ದೇವೇಗೌಡರ ಮೇಲೆ ಇಟ್ಟಿರುವ ಗೌರವ ಯಾರಿಂದಲೂ ಕಟ್ಟಿಹಾಕಲು ಆಗಲ್ಲ.
ಇದನ್ನೂ ಓದಿ: Congress Candidates First List: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಸಿದ್ಧರಾಮಯ್ಯಗೆ ವರುಣಾ ಫೈನಲ್
ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು ಸಹ ಉತ್ಸಾಹಕರಾಗಿ ಸಜ್ಜಾಗಿದ್ದಾರೆ. ಇತಿಹಾಸದಲ್ಲಿ ಚನ್ನಪಟ್ಟಣಕ್ಕೆ ಒಂದೂವರೆ ಸಾವಿರ ಕೋಟಿ ಅನುದಾನ ಯಾರೂ ತಂದಿರಲಿಲ್ಲ. ಕುಮಾರಸ್ವಾಮಿ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ನಮಗೆ ಆಶೀರ್ವಾದ ಮಾಡುತ್ತಾರೆ. ನಾಳೆ ಪಂಚರತ್ನಯಾತ್ರೆಯ ಸಮಾರೋಪ ಸಭೆ ವಿಚಾರವಾಗಿ ಸುಮಾರು ಹತ್ತು ಲಕ್ಷ ಜನ ಸೇರುವ ಸಭೆ ನಾಳೆ ಮೈಸೂರಿನಲ್ಲಿ ನಡೆಯಲಿದೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:06 pm, Sat, 25 March 23