ಕಾನೂನು ಬಾಹಿರವಾಗಿ ಭೂಮಿ ಇದ್ರೆ ವಶಪಡಿಸಿಕೊಳ್ಳಿ, ಹಾಗೇ ನನ್ನ ಜಮೀನು ಹುಡುಕಿಕೊಡಿ: ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ

| Updated By: ವಿವೇಕ ಬಿರಾದಾರ

Updated on: Mar 18, 2025 | 12:11 PM

ಹೆಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ವಿರುದ್ಧದ ಭೂ ಒತ್ತುವರಿ ಆರೋಪಗಳಿಗೆ ಸ್ಪಷ್ಟನೆ ನೀಡುವ ಪತ್ರವನ್ನು ಭೂ ದಾಖಲೆಗಳ ಇಲಾಖೆಗೆ ಬರೆದಿದ್ದಾರೆ. ಅವರು ತಮ್ಮ ಹೆಸರಿನಲ್ಲಿರುವ ಜಮೀನಿನ ವಿವರಗಳನ್ನು ನೀಡಿ, ಅತಿಕ್ರಮಣವಾದ ಭೂಮಿಯನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳನ್ನು ವಿನಂತಿಸಿದ್ದಾರೆ. ಪತ್ರದಲ್ಲಿ ಜಮೀನು ಖರೀದಿಗೆ ಸಂಬಂಧಿಸಿದ ದಾಖಲೆಗಳನ್ನೂ ಉಲ್ಲೇಖಿಸಿದ್ದಾರೆ.

ಕಾನೂನು ಬಾಹಿರವಾಗಿ ಭೂಮಿ ಇದ್ರೆ ವಶಪಡಿಸಿಕೊಳ್ಳಿ, ಹಾಗೇ ನನ್ನ ಜಮೀನು ಹುಡುಕಿಕೊಡಿ: ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ
ಹೆಚ್​ಡಿ ಕುಮಾರಸ್ವಾಮಿ
Follow us on

ರಾಮನಗರ, ಮಾರ್ಚ್ 18: ತಮ್ಮ ಕುಟುಂಬದ ವಿರುದ್ಧ ಕೇಳಿ ಬಂದಿರುವ ಭೂ ಒತ್ತುವರಿ (Land Encroachment) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಭೂ ದಾಖಲೆಗಳ ಇಲಾಖೆಗೆ ಬರೆದ ಪತ್ರ ಟಿವಿ9ಗೆ ಲಭ್ಯವಾಗಿದೆ. “ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಿ ಎಂದು ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

“ಬಿಡದಿಯ ಕೇತಗಾನಹಳ್ಳಿ ಸರ್ವೆ ನಂಬರ್ 7ರಲ್ಲಿ 5 ಎಕರೆ 20 ಗುಂಟೆ ಜಮೀನು ಖರೀದಿಸಿದ್ದೇನೆ. ಈ ಪೈಕಿ 1.25 ಎಕರೆ ಜಮೀನಿನಲ್ಲಿ ಮಾತ್ರ ಅನುಭವದಲ್ಲಿರುತ್ತೇನೆ. ಉಳಿದ ಜಮೀನನ್ನು ಗುರುತಿಸಿ ಹುಡುಕಿಕೊಡುವಂತೆ” ಸರ್ಕಾರಕ್ಕೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಪತ್ರದಲ್ಲಿ ಏನಿದೆ?

“ರಾಮನಗರ ತಾಲೂಕು ಬಿಡದಿ ಹೋಬಳಿಯ ಕೀತಿಗಾನಹಳ್ಳಿ ಗ್ರಾಮದ ಸರ್ವೇ ನಂ. 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿ ಆಗಿದ್ದರೆ ಸರ್ವೇ ನಡೆಸಿ ವರದಿ ನೀಡುವಂತೆ ರಾಜ್ಯ ಗೌರವಾನ್ವಿತ ಹೈಕೋರ್ಟ್ ನಿರ್ದೇಶನ ನೀಡಿರುವುದು ಸರಿಯಷ್ಟೇ.

ಇದನ್ನೂ ಓದಿ
ನಾನು ಮತ್ತು ದೇವೇಗೌಡರು ಮಾಡಿದ ಅನ್ಯಾಯವಾದರೂ ಏನು? ಕುಮಾರಸ್ವಾಮಿ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಡಿನೋಟಿಫಿಕೇಷನ್‌ ಪ್ರಕರಣ: ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ

ಘನ ನ್ಯಾಯಾಲಯದ ಸೂಚನೆಯಂತೆ ತಮ್ಮ ಸಮೀಕ್ಷಾ ತಂಡ ದಿನಾಂಕ 18-02-2025ರ ಮಂಗಳವಾರ ಮೇಲ್ಕಂಡ ಎಲ್ಲಾ ಸರ್ವೇ ನಂ.ಗಳು ಸೇರಿದಂತೆ ನಾನು ಅನುಭವದಲ್ಲಿರುವ ಸರ್ವೇ ನಂ. 7-8ರಲ್ಲಿಯೂ ಸರ್ವೇ ನಡೆಸಲಾಗಿದೆ. ಸರ್ವೇ ನಂ.7-8ರಲ್ಲಿ ಮಾತ್ರ ನಾನು ಪಹಣಿ ದಾಖಲೆ ಹೊಂದಿದ್ದು, ಸರ್ವೇ ನಂ.7ರಲ್ಲಿ 5.20 ಎ/ಗುಂಟೆ ಜಮೀನನ್ನು ಕೇತಿಗಾನಹಳ್ಳಿ ಗ್ರಾಮದ ಕಂವೀರಯ್ಯ, ದೇವರಾಜು, ದೊಡ್ಡಯ್ಯ, ಸಾವಿತ್ರಮ್ಮ ಕೋಮ್ ಹನುಮೇಗೌಡ, ದೇವರಾಜು ಅವರಿಂದ ಖರೀದಿ ಮಾಡಿದ್ದು, ಆ ಪೈಕಿ ಕೇವಲ 1.15 ಎ/ಗುಂಟೆ ಜಮೀನಿನಲ್ಲಿ ಮಾತ್ರ ಅನುಭವದಲ್ಲಿರುತ್ತೇನೆ. ಉಳಿದ ಜಮೀನನ್ನು ತಾವುಗಳು ಹುಡುಕಿಕೊಡಬೇಕಾಗಿ ವಿನಂತಿ ಮಾಡುತ್ತೇನೆ.

ಕೇತಿಗಾನಹಳ್ಳಿ ಗ್ರಾಮದ ಸರ್ವೇ ನಂ. 8ರಲ್ಲಿ ಗೇರುವಪ್ಪ ಬಿನ್ ಕವನಯ್ಯ ಹಾಗೂ ಇತರರು, ಸಾವಿತ್ರಮ್ಮ ಹನುಮೇಗೌಡ, ದೊಡ್ಡಯ್ಯ ಬಿನ್ ಕೆಂಚಪ್ಪ ಗಂಗಪ್ಪ ಬಿನ್ ಬಸಪ್ಪ, ಗೋವಿಂದಯ್ಯ ಅವರುಗಳಿಂದ 8.17 ಎ/ಗುಂಟೆ ಜಮೀನನ್ನು ಖರೀದಿ ಮಾಡಿರುತ್ತೇನೆ. ಪಹಣಿ ದಾಖಲೆ ಪ್ರಕಾರವೂ 8.17 ಎ/ಗುಂಟೆ ಜಮೀನು ನನ್ನ ಅನುಭವದಲ್ಲಿದ್ದು, ನನಗೆ ಆ ಜಮೀನಿನ ಹಕ್ಕು ಕ್ರಯ ಮತ್ತು ದಾನದ ಮೂಲಕ ದೊರೆತಿರುತ್ತದೆ. ಅಂದಿನಿಂದಲೂ ಸದರಿ ಜಮೀನಿನಲ್ಲಿ ಸ್ವತಃ ನಾನೇ ಅನುಭವದಲ್ಲಿರುತ್ತೇನೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ಆರಂಭಿಸುವುದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ: ಕುಮಾರಸ್ವಾಮಿ

ಇದಿಷ್ಟು ಜಮೀನನ್ನು ಮೀರಿ ಯಾವುದೇ ಹೆಚ್ಚುವರಿ ಜಮೀನು ಕಾನೂನುಬಾಹಿರವಾಗಿ ನನ್ನ ಅನುಭವದಲ್ಲಿದ್ದರೆ ಅದನ್ನು ನೀವು ಕಾನೂನು ಪ್ರಕಾರ ವಶಕ್ಕೆ ತೆಗೆದುಕೊಳ್ಳಬಹುದು” ಎಂದು ಪತ್ರ ಬರೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ