ಮೋದಿ ಹತ್ಯೆ ಮಾಡಿ ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

| Updated By: Rakesh Nayak Manchi

Updated on: Dec 13, 2022 | 8:21 AM

ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾರನ್ನು ಪೊಲೀಸರು ಬಂಧಿಸಿದ್ದಾರೆ.

ಮೋದಿ ಹತ್ಯೆ ಮಾಡಿ ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ
ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ
Follow us on

ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಟೀಕಾ ಪ್ರಹಾರ ನಡೆಸುವ ಭರದಲ್ಲಿ ಹತ್ಯೆಗೆ ಪ್ರಚೋದನೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ (Raja Pateria) ಅವರನ್ನು ಪೊಲೀಸರಿ ಬಂಧಿಸಿದ್ದಾರೆ. ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜಾ ಪಟೇರಿಯಾ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ಅವರಲ್ಲಿ ಮನವಿ ಮಾಡಿದ್ದರು. ಗೃಹಸಚಿವರು ಹೇಳಿಕೆ ಸಂಬಂಧ ಎಫ್‌ಐಆರ್‌ ದಾಖಲಿಸಲು ಪನ್ನಾ ಪೊಲೀಸ್ ಠಾಣೆಗೆ ಆದೇಶಿಸಿದ್ದರು. ಅದರಂತೆ ಮಧ್ಯಪ್ರದೇಶ ಪನ್ನಾ ಜಿಲ್ಲೆ ಪವಯಿ ಠಾಣೆ ಪೊಲೀಸರು ಎಫ್​ಐಆರ್ (FIR) ದಾಖಲಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಜಾತಿ, ಧರ್ಮ, ಭಾಷೆ ಆಧಾರದಲ್ಲಿ ವಿಭಜನೆ ಮಾಡುತ್ತಿದ್ದಾರೆ. ದಲಿತ, ಆದಿವಾಸಿ, ಅಲ್ಪಸಂಖ್ಯಾತರಿಗೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಅವರ ಆಡಳಿತದಲ್ಲಿ ದಲಿತರು ಆತಂಕವನ್ನು ಎದುರಿಸುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ ಬದುಕುವುದಕ್ಕೂ ಆಗುತ್ತಿಲ್ಲ. ಹೀಗಾಗಿ ಮೋದಿ ಹತ್ಯೆಗೆ ಸಿದ್ಧವಾಗಿರಬೇಕು ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಬಿಜೆಪಿಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘ಸಂವಿಧಾನ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ’; ಕೈ ನಾಯಕ ಪಟೇರಿಯಾ ವಿವಾದಾತ್ಮಕ ಹೇಳಿಕೆ

ಹೇಳಿಕೆ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಜಾ ಪಟೇರಿಯಾ ಅವರು ತೇಪೆ ಹಚ್ಚುವ ಕೆಲಸ ಮಾಡಿದ್ದರು. ನಾನು ಗಾಂಧಿಯನ್ನು ನಂಬುವ ಮನುಷ್ಯನಾಗಿದ್ದು, ಆ ರೀತಿ ಮಾಡಲಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಮೋದಿ ಅವರನ್ನು ಸೋಲಿಸುವ ಅರ್ಥದಲ್ಲಿ ಕೊಲ್ಲಿ ಎಂದು ಹೇಳಿದ್ದೇನೆ. ದಲಿತರು, ಆದಿವಾಸಿಗಳ ರಕ್ಷಣೆ ಮತ್ತು ನಿರುದ್ಯೋಗವನ್ನು ತೊಡೆದುಹಾಕಲು ಮೋದಿಯನ್ನು ಸೋಲಿಸುವುದು ಅವಶ್ಯಕ ಎಂದು ಹೇಳಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Tue, 13 December 22