ಶೆಟ್ಟರ್ ಬಿಜೆಪಿ ಸೇರಿದ ಬೆನ್ನಲ್ಲೇ ಲಕ್ಷ್ಮಣ್ ಸವದಿ ಅಚ್ಚರಿಯ ಹೇಳಿಕೆ! ಘರ್ ವಾಪ್ಸಿಯಾಗುತ್ತಾರಾ ಸವದಿ?

ಬಿಜೆಪಿಯಿಂದ ತಮ್ಮನ್ನು ಸೆಳೆಯಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ ಎಂಬುದನ್ನು ಲಕ್ಷ್ಮಣ ಸವದಿ ಬಹಿರಂಗಪಡಿಸಿದ್ದಾರೆ. ಆದರೆ, ಬೆಳಗಾವಿ ರಾಜಕಾರಣದಲ್ಲಿ ನನ್ನನ್ನು ಕಡೆಗಣಿಸಿಲ್ಲ. ಸಿಎಂ, ಡಿಸಿಎಂ ನನ್ನನ್ನು ಅತ್ಯಂತ ಗೌರವದಿಂದ ಕಾಣುತ್ತಾರೆ ಎಂದೂ ಹೇಳಿದ್ದಾರೆ.

ಶೆಟ್ಟರ್ ಬಿಜೆಪಿ ಸೇರಿದ ಬೆನ್ನಲ್ಲೇ ಲಕ್ಷ್ಮಣ್ ಸವದಿ ಅಚ್ಚರಿಯ ಹೇಳಿಕೆ! ಘರ್ ವಾಪ್ಸಿಯಾಗುತ್ತಾರಾ ಸವದಿ?
ಲಕ್ಷ್ಮಣ್ ಸವದಿ
Follow us
Sahadev Mane
| Updated By: Ganapathi Sharma

Updated on: Jan 26, 2024 | 10:20 AM

ಬೆಳಗಾವಿ, ಜನವರಿ 26: ಮಾಜಿ ಸಿಎಂ ಜಗದೀಶ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ (Congress) ಶಾಸಕ ಲಕ್ಷ್ಮಣ್ ಸವದಿ (Laxman Savadi) ಕೂಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಜೆಪಿಗೆ ಬರುವಂತೆ ನನಗೆ ಬಹಳಷ್ಟು ಒತ್ತಡ ಇದೆ. ತಿರುಗಿ ಮಗ ಮನೆಗೆ ಬರಬೇಕು ಎಂಬುದಾಗಿ ಬಿಜೆಪಿಯವರು ಬೇಡಿಕೆ ಇಟ್ಟಿದ್ದಾರೆ. ಕಹಿ ಘಟನೆಗಳನ್ನ ಮರೆಯಬೇಕು ಎಂದೂ ಹೇಳುತ್ತಿದ್ದಾರೆ ಎಂದು ಲಕ್ಷ್ಮಣ್ ಸವದಿ ಅಥಣಿಯಲ್ಲಿ ‘ಟಿವಿ9’ಗೆ ತಿಳಿಸಿದ್ದಾರೆ.

ಈ ಹೇಳಿಕೆಯ ಮೂಲಕ, ಬಿಜೆಪಿಯಿಂದ ತಮ್ಮನ್ನು ಸೆಳೆಯಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ ಎಂಬುದನ್ನು ಲಕ್ಷ್ಮಣ ಸವದಿ ಬಹಿರಂಗಪಡಿಸಿದ್ದಾರೆ.

ಬಿಜೆಪಿಯಿಂದ ಏನೇ ಒತ್ತಡ ಬಂದರೂ ನನ್ನ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದೇನೆ. ಕಾಂಗ್ರೆಸ್ ಚಿಹ್ನೆ ಮೇಲೆ ಜನ ನನ್ನ ಆಯ್ಕೆ ಮಾಡಿದ್ದಾರೆ. ಬಹಳ ದೊಡ್ಡ ಅಂತರದಲ್ಲಿ ಗೆದ್ದಿದ್ದೇನೆ. ನಾನು ಬಿಜೆಪಿಗೆ ಹೋಗುವ ಆಲೋಚನೆ ನನ್ನಲ್ಲಿ ಇಲ್ಲ. ಯಾರು ಒತ್ತಡ ಹಾಕುತ್ತಿದ್ದಾರೆ, ಸಂಪರ್ಕ ಮಾಡಿದ್ದಾರೆ ಎಂಬುದನ್ನು ಬಹಿರಂಗ ಪಡಿಸುವುದಿಲ್ಲ. ಅದನ್ನು ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ. ನನ್ನ ನಿಲುವು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ ಸವದಿ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಅಥಣಿಯಲ್ಲಿ ‘ಟಿವಿ9’ಗೆ ಪ್ರತಿಕ್ರಿಯಿಸಿದ ಸವದಿ, ಈ ಸಂದರ್ಭದಲ್ಲಿ ಚರ್ಚೆ ನಡೆಯುವುದು ಸಹಜ. ಶೆಟ್ಟರ್ ಅವರ ಜತೆ ನನ್ನನ್ನು ಯಾಕೆ ತಳಕು ಹಾಕ್ತಿದೀರಿ ಗೊತ್ತಾಗುತ್ತಿಲ್ಲ. ನಾನು ಹಾಗೂ ಅವರು ಕಾಂಗ್ರೆಸ್ ಪಕ್ಷಕ್ಕೆ ಒಟ್ಟಿಗೆ ಬಂದವರು ಅಲ್ಲ. ನಾನು ಮೊದಲು ಕಾಂಗ್ರೆಸ್ ಪಕ್ಷಕ್ಕೆ ಬಂದೆ, ಬಳಿಕ ಅವರು ಬಂದರು. ಶೆಟ್ಟರ್ ಅವರು ಕಾಂಗ್ರೆಸ್ ಬಿಟ್ಟು ಈಗಾಗಲೇ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಯಾಕೆ ಹೋದರು, ಯಾವ ಕಾರಣಕ್ಕೆ ಹೋದರು ಎಂಬುದನ್ನು ಅವರೇ ಹೇಳಬೇಕು.

ಸವದಿಗೆ ಸಚಿವ ಸ್ಥಾನ ನೀಡುತ್ತಿದ್ದಾರೆ ಎಂಬ ವಿಚಾರವಾಗಿ ಹಬ್ಬಿರುವ ಸುದ್ದಿಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸಂದರ್ಭದಲ್ಲಿ ಅದರ ಬಗ್ಗೆ ಚರ್ಚೆ ಮಾಡುವುದು ಸೂಕ್ತ ಅಲ್ಲ ಎಂದರು.

ಇದನ್ನೂ ಓದಿ: ಶೆಟ್ಟರ್​​ ಬಿಜೆಪಿಗೆ ಮರಳಿದ ಬೆನ್ನಲ್ಲೇ ಲಕ್ಷ್ಮಣ ಸವದಿ ಜತೆ ಮಾತುಕತೆ ನಡೆಸಿದ ಡಿಕೆ ಶಿವಕುಮಾರ್

ಬೆಳಗಾವಿ ರಾಜಕಾರಣದಲ್ಲಿ ನನ್ನನ್ನು ಕಡೆಗಣಿಸಿಲ್ಲ. ಸಿಎಂ, ಡಿಸಿಎಂ ನನ್ನನ್ನು ಅತ್ಯಂತ ಗೌರವದಿಂದ ಕಾಣುತ್ತಾರೆ. ಅದರಿಂದ ಯಾವುದೇ ಬೇಜಾರು, ಅಸಮಾಧಾನ ಇಲ್ಲ. ನಾನು ಹೋಗುವ ಪ್ರಯತ್ನ ಮಾಡಿದರೆ ಅವರು ನನ್ನ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ನಾನು ಹೋಗುತ್ತಿಲ್ಲ ಎಂದಾದರೆ ಸಿಎಂ, ಡಿಸಿಎಂ ಉಳಿಸಿಕೊಳ್ಳಲು ಪ್ರಯತ್ನ ಮಾಡುವ ವಿಚಾರ ಏನು ಬಂತು ಎಂದು ಅವರು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ