ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ

ಲೋಕಸಭೆ ಚುನಾವಣೆ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ದ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಅವರು ಹೇಳಿದರು.

ಪ್ರತಿಪಕ್ಷದ ನಾಯಕನ ಸ್ಥಾನ ಆಗಸ್ಟ್ 15 ರ ನಂತರ ತೀರ್ಮಾನ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Ganapathi Sharma

Updated on: Aug 10, 2023 | 7:10 PM

ಬೆಂಗಳೂರು, ಆಗಸ್ಟ್ 10: ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗುರುವಾರ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಅದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ ಎಂದರು.

ಲೋಕಸಭೆ ಚುನಾವಣೆ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವಿರುದ್ದ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಿದ್ದೇವೆ. ಶೀಘ್ರವೇ ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರತಿಪಕ್ಷ ನಾಯಕ ಸ್ಥಾನ ಕೊಡಿ ಅಂತ ಕೇಳಲು ಬಂದಿಲ್ಲವೆಂದ ಬಸವರಾಜ ಬೊಮ್ಮಾಯಿ; ಏನಂದ್ರು ಅಮಿತ್ ಶಾ?

ಆಗಸ್ಟ್ 8ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಬೊಮ್ಮಾಯಿ, ಪ್ರತಿಪಕ್ಷದ ನಾಯಕನ ಸ್ಥಾನ ನನಗೆ ಕೊಡಿ ಎಂದು ಕೇಳುವುದಕ್ಕಾಗಿ ಬಂದಿಲ್ಲ. ಆದರೆ, ಶೀಘ್ರದಲ್ಲೇ ಪ್ರತಿಪಕ್ಷ ನಾಯಕನನ್ನು ನೇಮಕ ಮಾಡದಿದ್ದರೆ ನಕಾರಾತ್ಮಕ ಅಭಿಪ್ರಾಯ ಮೂಡುತ್ತದೆ ಎಂದು ಹೇಳಿದ್ದರು ಎಂಬುದಾಗಿ ಮೂಲಗಳು ತಿಳಿಸಿದ್ದವು. ಕರ್ನಾಟಕದಲ್ಲಿ ಮೇ 13ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನ ಗಳಿಸಿ ಸರ್ಕಾರ ರಚನೆ ಮಾಡಿದೆ. ಅದಾಗಿ ಸುಮಾರು ಮೂರೂವರೆ ತಿಂಗಳಾದರೂ ಬಿಜೆಪಿಯು ಪ್ರತಿಪಕ್ಷ ನಾಯಕನ ನೇಮಕ ಮಾಡಿಲ್ಲ. ವಿಪಕ್ಷ ನಾಯಕನಿಲ್ಲದೇ ಬಜೆಟ್ ಅಧಿವೇಶನವೂ ನಡೆದಿದ್ದು ಬಿಜೆಪಿಯನ್ನು ಮುಜುಗರಕ್ಕೀಡುಮಾಡಿತ್ತು.

ರಾಜಕೀಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್