ಪ್ರತಿಪಕ್ಷ ನಾಯಕರ ಆಯ್ಕೆ ವಿಳಂಬ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಲೀಗಲ್ ನೋಟಿಸ್

ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ವಿಳಂಬ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಿಗೆ ವಕೀಲ ಎನ್.ಪಿ. ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ. ವಿರೋಧ ಪಕ್ಷದ ನಾಯಕನಿಲ್ಲದ್ದರಿಂದ ಹಲವು ನೇಮಕ ವಿಳಂಬವಾಗಿವೆ. ಜನರ ಪರವಾಗಿ ಸಮರ್ಥ ದನಿಯಾಗಲು ವಿರೋಧಪಕ್ಷದ ನಾಯಕನ ಅಗತ್ಯವಿದೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರತಿಪಕ್ಷ ನಾಯಕರ ಆಯ್ಕೆ ವಿಳಂಬ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಲೀಗಲ್ ನೋಟಿಸ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Sep 09, 2023 | 9:18 PM

ಬೆಂಗಳೂರು, ಸೆಪ್ಟೆಂಬರ್​ 9: ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ವಿಳಂಬ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ರಿಗೆ ವಕೀಲ ಎನ್.ಪಿ. ಅಮೃತೇಶ್ ಲೀಗಲ್ ನೋಟಿಸ್ ನೀಡಿದ್ದಾರೆ. ವಿರೋಧ ಪಕ್ಷದ ನಾಯಕನಿಲ್ಲದ್ದರಿಂದ ಹಲವು ನೇಮಕ ವಿಳಂಬವಾಗಿವೆ. ಮಾನವ ಹಕ್ಕುಗಳ ಆಯೋಗ, ಉಪಲೋಕಾಯುಕ್ತ, ಕೆಪಿಎಸ್ ಸಿ ಸೇರಿದಂತೆ ಹಲವು ನೇಮಕಗಳಾಗುತ್ತಿಲ್ಲ. ಕಾನೂನಿನಂತೆ ಕೆಲ ಮಹತ್ವದ ಹುದ್ದೆಗಳಿಗೆ ನೇಮಕ ಮಾಡಲು ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ, ಮುಖ್ಯ ನ್ಯಾಯಮೂರ್ತಿಗಳ ಸಮಾಲೋಚನೆಯ ಅಗತ್ಯವಿದೆ ಎಂದಿದ್ದಾರೆ.

ವಿರೋಧ ಪಕ್ಷದ ನಾಯಕನಿಲ್ಲದ್ದರಿಂದ ಈ ನೇಮಕಗಳು ನಡೆಯುತ್ತಿಲ್ಲ, ಅಲ್ಲದೇ ಸರ್ಕಾರ ಎಡವಿದಾಗ ಎಚ್ಚರಿಸಲು, ಜನರ ಪರವಾಗಿ ಸಮರ್ಥ ದನಿಯಾಗಲು ವಿರೋಧಪಕ್ಷದ ನಾಯಕನ ಅಗತ್ಯವಿದೆ. ಭಾರತದ ಪ್ರಜೆಯಾಗಿ, ಮತದಾರನಾಗಿ ವಿರೋಧಪಕ್ಷದ ನಾಯಕನನ್ನು ನೇಮಿಸುವಂತೆ ಕೋರಿಕೊಳ್ಳುವ ಹಕ್ಕು ನನಗಿದೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ. ಜೆ.ಪಿ. ನಡ್ಡಾ ಮಾತ್ರವಲ್ಲದೇ,‌ ನಳಿನ್ ಕುಮಾರ್ ಕಟೀಲ್, ಸ್ಪೀಕರ್, ರಾಜ್ಯಪಾಲರಿಗೂ ನೋಟಿಸ್​ನ ಪ್ರತಿಯನ್ನು ಕಳುಹಿಸಲಾಗಿದೆ.

ಇದನ್ನೂ ಓದಿ: ‘ವಿಪಕ್ಷ ನಾಯಕ ಯಾರು ಅಂತಾ ಕರ್ನಾಟಕದ ಜನತೆ ಕೇಳ್ತಾ ಇದಾರೆ’

ವಿಪಕ್ಷ ನಾಯಕರ ಆಯ್ಕೆ ವಿಳಂಬ ವಿಚಾರವಾಗಿ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವಿಪಕ್ಷ ನಾಯಕರ ಆಯ್ಕೆ ಏಕೆ ವಿಳಂಬ ಆಗುತ್ತಿದೆ ಅಂತಾ ಗೊತ್ತಿಲ್ಲ. ವಿಪಕ್ಷ ನಾಯಕರ, ರಾಜ್ಯಾಧ್ಯಕ್ಷರನ್ನು ಒಟ್ಟಿಗೆ ಆಯ್ಕೆ ಮಾಡಬಹುದು. ಈ ಕಾರಣಕ್ಕೆ ಸಮಯ ಹಿಡಿದಿರಬಹುದು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ಅದೇ ರೀತಿಯಾಗಿ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಸಹ ಇತ್ತೀಚೆಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದರು.

ವಿಪಕ್ಷ ನಾಯಕನ ಆಯ್ಕೆಗಾಗಿ ಹೈಕಮಾಂಡ್ ವೀಕ್ಷಕರ ನೇಮಕ

ರಾಜ್ಯ ರಾಜಕಾರಣದ ಇತಿಹಾಸದಲ್ಲಿ 30 ವರ್ಷದಲ್ಲಿ ಇದೇ ಮೊದಲ ಬಾರಿ ವಿಪಕ್ಷ ನಾಯಕನಿಲ್ಲದೇ ವಿಧಾನಸಭೆಯಲ್ಲಿ ಕಾರ್ಯಕಲಾಪಗಳು ನಡೆದಿವೆ. ವಿಪಕ್ಷ ನಾಯಕನ ಆಯ್ಕೆಗಾಗಿ ಹೈಕಮಾಂಡ್ ವೀಕ್ಷಕರು ಮಾಹಿತಿ ಕೂಡ ಸಂಗ್ರಹಿಸಿದ್ದರು. ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ ಶಾಸಕರು ಮತ್ತು ಪ್ರಮುಖ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದರು. ಇದಾದ ಬಳಿಕ ಬಿಜೆಪಿ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಡಾಲರ್ಸ್ ಕಾಲೋನಿ ನಿವಾಸಕ್ಕೆ ವೀಕ್ಷಕರು ಭೇಟಿ ನೀಡಿ ಚರ್ಚೆ ಸಹ ಮಾಡಿದ್ದರು.

ಇದನ್ನೂ ಓದಿ: ಹೆಚ್​ ಡಿ ಕುಮಾರಸ್ವಾಮಿಯೇ ಬಿಜೆಪಿ ವಿಪಕ್ಷ ನಾಯಕ ಎಂದ ಹೆಚ್ ವಿಶ್ವನಾಥ್​​​

ಬಿಜೆಪಿಗೆ ವಿಪಕ್ಷ ನಾಯಕ ಇಲ್ಲದಿರುವುದು ಕಾಂಗ್ರೆಸ್​​ ದಾಳವಾಗಿದ್ದು, ಟೀಕೆ ಮಾಡುತ್ತಿದೆ. ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕುಂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಬ್ಬನೇ ಒಬ್ಬ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ ಇಲ್ಲವೇ ಎಂದು ಇತ್ತೀಚೆಗೆ ಪ್ರಶ್ನೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:02 pm, Sat, 9 September 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ