AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​? ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್​ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್​ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್​ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗವ ಸಾಧ್ಯತೆ ಇದೆ.

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​? ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ
ಬಿಜೆಪಿ, ಜೆಡಿಎಸ್​
TV9 Web
| Edited By: |

Updated on: May 11, 2024 | 9:07 AM

Share

ಬೆಂಗಳೂರು, ಮೇ 10: ಹಾಸನ ಸಂಸಂದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ಎನ್​ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್​ (NDA) ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್​ ರೇವಣ್ಣ ಅವರ ಪೆನ್​ಡ್ರೈವ್​ ಪ್ರಕರಣ ಮೈತ್ರಿಕೂಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ದೋಸ್ತಿ ಮುಂದುವರೆಯುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ, ಇದು ಹುಸಿಯಾಗಿದ್ದು ಮೈತ್ರಿ ಮುಂದುವರೆಸಲು ಉಭಯ ಪಕ್ಷಗಳು ಒಲವು ಹೊಂದಿವೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯನ್ನೂ ಕೂಡ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಎದುರಿಸಲಿವೆ.

ಹೌದು ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್​ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್​ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್​​ನ ಆರು ಸ್ಥಾನಗಳ ಪೈಕಿ ನಾಲ್ಕು ಸ್ಥಾ‌ನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದರೇ, ಎರಡು ಸ್ಥಾ‌ನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ವಿಧಾನಪರಿಷತ್​​ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರವಿವಾರ (ಮೇ 11) ಪ್ರಕಟವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ, ಹೇಳಿದ್ದೇನು?

ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಶಿಕ್ಷಕರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಬಹುದು. ಸೀಟು ಹಂಚಿಕೆ ವಿಚಾರವಾಗಿ ಶೀಘ್ರದಲ್ಲಿಯೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಒಮ್ಮತ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ರವಿವಾರ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಈಗಾಗಲೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೇ 16 ಕೊನೆಯ ದಿನವಾಗಿದೆ. ಜೂನ್ 3 ರಂದು ಮತದಾನ ನಡೆಯಲಿದೆ.

ದೆಹಲಿಯತ್ತ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ ಮತ್ತು ವಿಧಾನ ಪರಿಷತ್​ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಹೋರಾಟ ಮಾಡಲು ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ. ಹಾಗೇ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾನಾಯಕನ ಕೆಲ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಸಾಧ್ಯತೆ ಇದೆ. ದೆಹಲಿಗೆ ಬರುವ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಈಗಾಗಲೆ ಬಿಜೆಪಿ ವರಿಷ್ಠರ ಜೊತೆ ಚರ್ಚೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ