AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ, ಕಾಂಗ್ರೆಸ್​ಗೆ ಜನರು ಉತ್ತರ ಕೊಡ್ತಾರೆ ಎಂದ ಪ್ರಲ್ಹಾದ್​ ಜೋಶಿ

ಕಾಂಗ್ರೆಸ್ಸಿಗರು ಹಿಂದೂಗಳ ಭಾವನೆ ವಿರೋಧಿಸುತ್ತಲೇ ಬಂದಿದ್ದಾರೆ. ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ. ರಾಜ್ಯದ ಜನರು ಕಾಂಗ್ರೆಸ್​ನವರಿಗೆ ಉತ್ತರ ಕೊಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದರು.

ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ, ಕಾಂಗ್ರೆಸ್​ಗೆ ಜನರು ಉತ್ತರ ಕೊಡ್ತಾರೆ ಎಂದ ಪ್ರಲ್ಹಾದ್​ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಗಂಗಾಧರ​ ಬ. ಸಾಬೋಜಿ
|

Updated on: Jun 03, 2023 | 7:49 PM

Share

ಹುಬ್ಬಳ್ಳಿ: ಕಾಂಗ್ರೆಸ್ಸಿಗರು ಹಿಂದೂಗಳ ಭಾವನೆ ವಿರೋಧಿಸುತ್ತಲೇ ಬಂದಿದ್ದಾರೆ. ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ. ರಾಜ್ಯದ ಜನರು ಕಾಂಗ್ರೆಸ್​ನವರಿಗೆ ಉತ್ತರ ಕೊಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಹೇಳಿದರು. ನಗರದಲ್ಲಿ ಮಧ್ಯಮದವರೊಂದಿಗೆ ಮಾತನಾಡಿದ ಅವರು, ಹಸು ಯಾಕೆ ಕಡಿಯಬಾರದು ಎಂದು ಪಶುಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿದರು. ನಮ್ಮ ಪಕ್ಷದಿಂದ ಏನು ಹೋರಾಟ ಮಾಡಬೇಕೋ ಮಾಡ್ತೀವಿ. ಇದು ಭಾವನಾತ್ಮಕ ಪ್ರಶ್ನೆ ಆಗುತ್ತೆ ಎಂದು ಹೇಳಿದ್ದಾರೆ.

ಗೋವಿನ ಬಗ್ಗೆ ಕೋಟ್ಯಂತರ ಜನರಿಗೆ ಭಾವನಾತ್ಮಕ ಸಂಬಂಧವಿದೆ. ಅದನ್ನು ಕಡಿತೀರಿ ಇದನ್ಯಾಕೆ ಕಡಿಯಲ್ಲ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು? ಸಚಿವ ಕೆ.ವೆಂಕಟೇಶ್​ ಪ್ರಶ್ನೆ

ಹುಬ್ಬಳ್ಳಿ ಧಾರವಾಡ ಬೈಪಾಸ್ ಕಾಮಗಾರಿ ವೀಕ್ಷಿಸಿದ ಜೋಶಿ

ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಬೈಪಾಸ್​ಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಪ್ರಲ್ಹಾದ್​ ಜೋಶಿ,  ಈ ಹಿಂದೆ ಇದು ಸಿಂಗಲ್ ಲೈನ್ ಭೈಪಾಸ್ ಆದಾಗ ಒಪ್ಪಂದ ಆಗಿತ್ತು. ಅದರ ಪ್ರಕಾರ 2025ರ ವರೆಗೆ ಏನು ಮಾಡಲಿಕೆ ಆಗಿರಲಿಲ್ಲ. ನಿತೀನ್ ಗಡ್ಕರಿ ಅವರಿಗೆ ನಾನು ಒತ್ತಾಯ ಮಾಡಿದ್ದರಿಂದ ಆಸಕ್ತಿ ತೆಗೆದುಕೊಂಡ್ರು. 2024 ರ ಒಳಗಾಗಿ ಕಾಮಗಾರಿ ಮುಗಿಸಬೇಕು ಎನ್ನುವ ತೀರ್ಮಾನ ಮಾಡಿದ್ದೇವೆ. ಹಾಗೆ ನೋಡಿದ್ರೆ 2025 ರ ವರೆಗೆ ನಾವು ಏನು ಮಾಡುವುದಕ್ಕೆ ಬರುವುದಿಲ್ಲ ಎಂದರು.

ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರಲಿದೆ ಕುತ್ತು; ಪರ್ಯಾಯ ನಾಯಕರ ಹುಡುಕಾಟದಲ್ಲಿ ಬಿಜೆಪಿ ಹೈಕಮಾಂಡ್

ಅಂದಿನ ರಾಜ್ಯ ಸರ್ಕಾರ ಈ ರೀತಿಯ ಒಪ್ಪಂದ ಮಾಡಿಕೊಂಡಿದ್ರು. ಆದ್ರೆ ನಾವು ಈಗಾಗಲೇ ಕೆಲಸ ಆರಂಭ ಮಾಡಿದ್ದೇವೆ. ಸುಮಾರು 580 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಆಗುತ್ತಿದೆ. ಹುಬ್ಬಳ್ಳಿಯಿಂದ ಧಾರವಾಡದ ವರೆಗಿನ ಬೈಪಾಸ್ ರಸ್ತೆ ಡಿಸೆಂಬರ್​ವರೆಗೆ ಮುಗಿಸುವ ಸೂಚನೆ ನೀಡಿದ್ದೇನೆ. ಒಟ್ಟು 31 ಕಿಲೋಮೀಟರ್​ನ ರಸ್ತೆ ಇದಾಗಿದೆ ಎಂದು ಹೇಳಿದರು.

ಹಸು ಏಕೆ ಕಡಿಯಬಾರದು ಎಂದ ಪಶುಸಂಗೋಪನಾ ಖಾತೆ ಸಚಿವ

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂದು ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್​ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ಕಷ್ಟ ಪಡಬೇಕಾಯಿತು. 25 ಜನ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ಮೂಲಕ ಹಸುವಿನ ಮೃತದೇಹ ಹೂಳಬೇಕಾಯಿತು. ಹಾಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಗೋಶಾಲೆಗಳನ್ನು ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ ಎಂದು ಸಚಿವ ವೆಂಕಟೇಶ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ