Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತರು, ವೀರಶೈವರು ಯಾವುದೇ ಕಾರಣಕ್ಕೂ ಕಾಂಗ್ರೆಸ್​ನ್ನು ನಂಬಬಾರದು: ಪ್ರಧಾನಿ ಮೋದಿ

ಲಿಂಗಾಯತರು, ವೀರಶೈವರು ಯಾವುದೇ ಕಾರಣಕ್ಕೂ ಕಾಂಗ್ರೆಸ್​ನ್ನು ನಂಬಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಖಾರವಾಗಿ ಕಿಡಿಕಾರಿದ್ದಾರೆ.

ಲಿಂಗಾಯತರು, ವೀರಶೈವರು ಯಾವುದೇ ಕಾರಣಕ್ಕೂ ಕಾಂಗ್ರೆಸ್​ನ್ನು ನಂಬಬಾರದು: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 12, 2023 | 7:49 PM

ಹುಬ್ಬಳ್ಳಿ: ಲಿಂಗಾಯತರು, ವೀರಶೈವರು ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಅನ್ನು (Congress) ನಂಬಬಾರದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕಿಡಿಕಾರಿದ್ದಾರೆ. ಇಂದು ಧಾರವಾಡದ ಐಐಟಿ ಕ್ಯಾಂಪಸ್, ಸಿದ್ದರೂಡ ಸ್ವಾಮೀಜಿ ರೈಲು ಪ್ಲಾಟ್‌ಫಾರ್ಮ್ ಸೇರಿದಂತೆ ಹಲವು ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಭಾರತ ಪ್ರಜಾಪ್ರಭುತ್ವದ ತಾಯಿಯಿದ್ದಂತೆ. ಕೆಲ ವರ್ಷಗಳ ಹಿಂದೆ ಲಂಡನ್​ನಲ್ಲಿ ಬಸವಣ್ಣರವರ ಮೂರ್ತಿ ಅನಾವರಣಗೊಳಿಸುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ಆದರೆ ಇಂದು ಬಸವೇಶ್ವರರಿಗೆ ಕೆಲವೊಬ್ಬರು ಅಪಮಾನ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮಾಡಿದರು. ಲಂಡನ್​ನಲ್ಲಿ ಭಾರತವನ್ನು ಟೀಕಿಸಿದ್ದವರಿಗೆ ನೀವು ಬೆಂಬಲಿಸಬೇಡಿ ಎಂದು ಹೇಳುವ ಮೂಲಕ ಲಿಂಗಾಯತರು ಮತ್ತು ವೀರಶೈವರಿಗೆ ಪ್ರಧಾನಿ ಮೋದಿ ಸೂಕ್ಷ್ಮವಾಗಿ ಎರಡನೇ ಬಾರಿ ಸಂದೇಶ ರವಾನಿಸಿದಂತಿದೆ. ಈ ಮುಂಚೆ ಶಿವಮೊಗ್ಗದಲ್ಲಿ ಕೂಡ ಹೀಗೆ ಹೇಳಿದ್ದರು.

ಅನುಭವ ಮಂಟಪದ ಬಗ್ಗೆ ಪ್ರಸ್ತಾಪಿಸಿದ ಮೋದಿ

ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದು, ಈ ದೇಶದ ವಿರುದ್ಧ ಮಾತನಾಡುತ್ತಿದ್ದಾರೆ. ಅನುಭವ ಮಂಟಪದ ಬಗ್ಗೆ ಪ್ರಸ್ತಾಪಿಸಿದ ಮೋದಿ, ಈ ಭೂಮಿ 12ನೇ ಶತಮಾನದಲ್ಲೇ ಸಂಸತ್ ಭವನದ ಪರಿಕಲ್ಪನೆ ನೀಡಿದೆ. ಅನುಭವ ಮಂಟಪ ಎಲ್ಲ ವರ್ಗದ ಜನರನ್ನು ಒಳಗೊಂಡಿತ್ತು. ಆದರೆ ಈಗ ಕೆಲವರು ವಿದೇಶದಲ್ಲಿ ನಿಂತು ಭಾರತಕ್ಕೆ ಅಪಮಾನ ಮಾಡುತ್ತಾರೆ. ಅಂತಹವರ ಬಗ್ಗೆ ಕರ್ನಾಟಕದ ಜನರು ಎಚ್ಚರದಿಂದ ಇರಬೇಕು ಎಂದಿದ್ದಾರೆ.

ಇದನ್ನೂ ಓದಿ: ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆಗಳು ಎದ್ದಿರುವುದು ದುರದೃಷ್ಟಕರ; ರಾಹುಲ್ ವಿರುದ್ಧ ಮೋದಿ ವಾಗ್ದಾಳಿ

ಸದ್ಯ ಪ್ರಧಾನಿ ನರೇಂದ್ರ ಮೋದಿಯ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದ್ದು, ಈ ರೀತಿಯ ಹೇಳಿಕೆಗಳ ಮೂಲಕ ಚುನಾವಣೆಯ ಸಮಯದಲ್ಲಿ ಲಿಂಗಾಯತರು ಮತ್ತು ಕಾಂಗ್ರೆಸ್ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರಾ ಮೋದಿ ಎನ್ನುವ ಮಾತುಗಳು ಸಹ ಕೇಳಿಬರುತ್ತಿವೆ.

ಇನ್ನು ಇತ್ತೀಚೆಗೆ ಶಿವಮೊಗ್ಗದ ಸೋಗಾನೆಯ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಬಳಿಕ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪರನ್ನು ಸನ್ಮಾನಿ, ನಮಸ್ಕರಿಸುವ ಮೂಲಕ ನಾವು ಲಿಂಗಾಯತರನ್ನು ಗೌರವಿಸುತ್ತೇವೆ ಎಂಬ ಸಂದೇಶ ಸಾರಿದ್ದರು.

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ

ರಾಹುಲ್ ಗಾಂಧಿಯವರ ಇತ್ತೀಚಿನ ಯುಕೆ ಪ್ರವಾಸವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ  ಕಾರಣವಾಗಿದೆ. ರಾಹುಲ್ ಗಾಂಧಿ ಅವರು ತಮ್ಮ ಕೇಂಬ್ರಿಡ್ಜ್ ಭಾಷಣದಲ್ಲಿ ಪಿಎಂ ಮೋದಿ, ‘ಪ್ರಜಾಪ್ರಭುತ್ವದ ದಾಳಿ’, ಚೀನಾ ಸಮಸ್ಯೆ ಇತ್ಯಾದಿಗಳ ಬಗ್ಗೆ ಮಾತನಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯ ಅಗತ್ಯವನ್ನು ವಿವರಿಸಿದ ರಾಹುಲ್, ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಮತ್ತು ವಿರೋಧ ಪಕ್ಷದ ನಾಯಕರಿಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶವಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: IIT Dharwad Inauguration: ಪ್ರತಿಯೊಬ್ಬ ವಿದ್ಯಾರ್ಥಿಯೂ ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು: ನರೇಂದ್ರ ಮೋದಿ

ಪ್ರಧಾನಿ ಮೋದಿ ಅವರು ಭಾರತದ ವಾಸ್ತುಶಿಲ್ಪವನ್ನು ನಾಶಪಡಿಸುತ್ತಿದ್ದಾರೆ ಮತ್ತು ಭಾರತವು ಅರಗಿಸಿಕೊಳ್ಳಲು ಸಾಧ್ಯವಾಗದಂತಹದನ್ನು ಹೇರುತ್ತಿದ್ದಾರೆ ಎಂದಿದ್ದರು ರಾಹುಲ್, ಈ ಹೇಳಿಕೆಗಳು ಭಾರಿ ಚರ್ಚೆಗೆ ಗ್ರಾಸವಾಗಿದ್ದರೂ, ರಾಹುಲ್ ಗಾಂಧಿ ಅವರು ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿಲ್ಲ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:18 pm, Sun, 12 March 23