AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್​ ಆಯ್ತು ನಿಗಮ ಮಂಡಳಿಗೆ ನೇಮಕವಾಗುವ ಹೆಸರು; 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ? ಇಲ್ಲಿದೆ ಪಟ್ಟಿ

ಕೊನೆಗೂ ನಿಗಮ ಮಂಡಳಿ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ಸುದೀರ್ಘ ಸಭೆ ನಡೆಸಿ, ಮೊದಲ ಹಂತದಲ್ಲಿ 25 ನಿಗಮ ಮಂಡಳಿ ಭರ್ತಿಗೆ ನಿರ್ಧರಿಸಿದ್ದಾರೆ. 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ ಹಾಕಲು ಸಿಎಂ ಮತ್ತು ಡಿಸಿಎಂ ತೀರ್ಮಾನಿಸಿದ್ದಾರೆ. ಹಾಗಿದ್ದಾರೆ ಮೊದಲ ಹಂತದಲ್ಲಿ ಯಾರು ಯಾರು ನೇಮಕವಾಗುತ್ತಾರೆ ಇಲ್ಲಿದೆ ನಿಗಮ ಮಂಡಳಿ ಪಟ್ಟಿ ಫುಲ್ ಡಿಟೇಲ್ಸ್..

ಫೈನಲ್​ ಆಯ್ತು ನಿಗಮ ಮಂಡಳಿಗೆ ನೇಮಕವಾಗುವ ಹೆಸರು; 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ? ಇಲ್ಲಿದೆ ಪಟ್ಟಿ
ವಿಧಾನಸೌಧ
TV9 Web
| Updated By: ವಿವೇಕ ಬಿರಾದಾರ

Updated on:Oct 28, 2023 | 1:07 PM

Share

ಬೆಂಗಳೂರು ಅ.28: ರಾಜ್ಯ ಕಾಂಗ್ರೆಸ್​ ಸರ್ಕಾರದಲ್ಲಿ (Congress Government) ಸಚಿವ ಸಂಪುಟ ಸಂಪೂರ್ಣ ಭರ್ತಿಯಾಗಿದ್ದು, ಉಳಿದ ಶಾಸಕರಿಗೆ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಅಸಮಾಧಾನಗೊಂಡಿದ್ದು, ಕೊನೆಪಕ್ಷ ನಿಗಮ ಮಂಡಳಿ (Board Corporation) ಅಧ್ಯಕ್ಷರನ್ನಾಗಿಯಾದರೂ ಆಯ್ಕೆ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ನಿಗಮ, ಮಂಡಳಿಗೆ ಶಾಸಕರನ್ನು ನೇಮಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದರು. ಸಭೆಯಲ್ಲಿ 20 ಶಾಸಕರಿಗೆ ಆಯಕಟ್ಟಿನ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಉಭಯ ನಾಯಕರು ಒಮ್ಮತಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಯಾರು ಯಾರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷಗಿರಿ ಸಿಕ್ಕಿದೆ ? ಇಲ್ಲಿದೆ ಪಟ್ಟಿ

ನಿಗಮ ಮಂಡಳಿಗೆ ನೇಮಕವಾಗುವ ನಾಯಕರು

ಬಸವರಾಜ ರಾಯರೆಡ್ಡಿ, ನರೇಂದ್ರಸ್ವಾಮಿ, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಬಂಗಾರಪೇಟೆ ನಾರಾಯಣಸ್ವಾಮಿ, ಕೋಲಾರ ನಂಜೇಗೌಡ, ಬಿ.ಕೆ.ಸಂಗಮೇಶ್,ಬಿ.ಆರ್. ಪಾಟೀಲ್,ಎಂ.ವೈ.ಪಾಟೀಲ್, ಬಿ.ಜಿ ಗೋವಿಂದಪ್ಪ, ರಾಘವೇಂದ್ರ ಹಿಟ್ನಾಳ್, ಪ್ರಸಾದ್ ಅಬ್ಬಯ್ಯ, ಎ.ಆರ್. ಕೃಷ್ಣಮೂರ್ತಿ, ಶಿವಲಿಂಗೇಗೌಡ, ರೂಪ ಶಶಿಧರ್, ರಾಜೇಗೌಡ, ರಘುಮೂರ್ತಿ, ಗಣೇಶ್ ಹುಕ್ಕೇರಿ, ಅನಿಲ್ ಚಿಕ್ಕಮಾದು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ  ನೇಮಕಗೊಳ್ಳುತ್ತಾರೆ.

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಾತನಾಡಿ ನಿಗಮ ಮಂಡಳಿ ನೇಮಕ ಬಗ್ಗೆ ಶುಕ್ರವಾರ ಒಂದು ಸುತ್ತಿನ ಚರ್ಚೆ ಆಗಿದೆ. ಮೊದಲು ಯಾರು ಯಾರಿಗೆ ಕೊಡಬೇಕೆಂದು ನಾವು ಪಟ್ಟಿ ಮಾಡಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಡಬೇಕಿದೆ. ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳು ಕರ್ನಾಟಕಕ್ಕೆ ಬಂದಾಗ ನಿಗಮ ಮಂಡಳಿ ಪಟ್ಟಿ ಬಿಡುಗಡೆ ಆಗುತ್ತೆ ಎಂದು ತಿಳಿಸಿದರು.

ಇದನ್ನೂ ಓದಿ:  ಈ ವಾರದಲ್ಲೇ ನಿಗಮ ಮಂಡಳಿಗೆ ನೇಮಕಾತಿ ಸಾಧ್ಯತೆ: ಮೊದಲ ಪಟ್ಟಿಯಲ್ಲಿ 20 ರಿಂದ 30 ಶಾಸಕರಿಗೆ ಅವಕಾಶ

ಬಹಿರಂಗ ಹೇಳಿಕೆ ನೀಡಿದರೆ ಪಕ್ಷದಿಂದ ನೋಟಿಸ್ ನೀಡಲಾಗುತ್ತೆ

ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ. ಡಿ.ಕೆ.ಶಿವಕುಮಾರ್​ ಸಿಎಂ ಆಗುತ್ತಾರೆಂಬ ಕೆಲ ಶಾಸಕರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಇನ್ಮುಂದೆ ಪಕ್ಷದ ವಿಚಾರವಾಗಿ ಯಾರೂ ಕೂಡ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ವಿಚಾರ, ಅಧಿಕಾರದ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ಶಾಸಕರು ಯಾರೂ ಕೂಡ ಬಹಿರಂಗ ಹೇಳಿಕೆ ನೀಡಬಾರದು. ಪಕ್ಷದ ಅಧ್ಯಕ್ಷನಾಗಿ ಇದು ನನ್ನ ಕೊನೆಯ ಎಚ್ಚರಿಕೆ. ಮತ್ತೆ ಬಹಿರಂಗ ಹೇಳಿಕೆ ನೀಡಿದರೆ ಪಕ್ಷದಿಂದ ನೋಟಿಸ್ ನೀಡಲಾಗುತ್ತೆ. ಏನೇ ಸಮಸ್ಯೆ, ವಿಚಾರ ಇದ್ದರೂ ಪಕ್ಷ ನಾಯಕರ ಜೊತೆ ಚರ್ಚಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ನೀಡಿದರು.

ಬಿಜೆಪಿಯಿಂದ ಕಾಂಗ್ರೆಸ್​ ಶಾಸಕರಿಗೆ ಹಣದ ಆಫರ್​ ನೀಡಿದ್ದಾರೆಂಬ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದರ ಹಿಂದೆ ಭಾರಿ ಷಡ್ಯಂತ್ರ ನಡೆದಿದೆ, ಇದ್ಯಾವುದೂ ಫಲ ನೀಡಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ಷಡ್ಯಂತ್ರ ನಡೆಸಲು ಕೆಲ ದೊಡ್ಡವರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಅವರ ಯಾವ ಪ್ರಯತ್ನಗಳು ಫಲ ನೀಡಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 25 ಶಾಸಕರ ಪಟ್ಟಿ ಸಿದ್ದಪಡಿಸಿಸಿದ್ದಾರೆ. ಹೈಕಮಾಂಡ್​ಗೆ ಪಟ್ಟಿ ಸಲ್ಲಿಸಿ ಮುಂದಿನ ವಾರಾಂತ್ಯದೊಳಗೆ ನೇಮಕಾತಿ ಆಗಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Sat, 28 October 23

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್