AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.22 ರಂದು 3ನೇ ಪಟ್ಟಿ ಬಿಡುಗಡೆ, ಅಸಮಾಧನಿತರ ಬಗ್ಗೆ ಯಡಿಯೂರಪ್ಪ ಹೇಳಿದ್ದಿಷ್ಟು

Lok Sabha Election 2024: ಲೋಕಸಭೆ ಚುನಾವಣೆಗೆ ತಮಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ​. ಐದು ಕ್ಷೇತ್ರಗಳ ಟಿಕೆಟ್​ ಘೋಷಣೆ ಬಾಕಿ ಇದ್ದು, ಈ ಕುರಿತಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರ ತಿಳಿಸಿದ್ದಾರೆ.

ಮಾ.22 ರಂದು 3ನೇ ಪಟ್ಟಿ ಬಿಡುಗಡೆ, ಅಸಮಾಧನಿತರ ಬಗ್ಗೆ ಯಡಿಯೂರಪ್ಪ ಹೇಳಿದ್ದಿಷ್ಟು
ಬಿಎಸ್​ ಯಡಿಯೂರಪ್ಪ
TV9 Web
| Updated By: ವಿವೇಕ ಬಿರಾದಾರ|

Updated on:Mar 20, 2024 | 12:30 PM

Share

ನವದೆಹಲಿ/ಬೆಂಗಳೂರು, ಮಾರ್ಚ್​ 20: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬಾಕಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾರ್ಚ್​ 22 ರಂದು ಬಿಜೆಪಿ ಘೋಷಣೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ತಿಳಿಸಿದರು. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಮಿತ್ ಶಾ (Amith Shah), ಜೆ.ಪಿ ನಡ್ಡಾ (JP Nadda) ಅವರ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದು

ಜೆ.ಸಿ.ಮಾಧುಸ್ವಾಮಿ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ. ಕರಡಿ ಸಂಗಣ್ಣ ಜೊತೆಗೆ ಮಾತನಾಡಿದ್ದೇನೆ. ಅವರು ನಿಷ್ಠಾವಂತ ಮುಖಂಡರು. ಅವರು ಬೇರೆ ಯಾವ ನಿರ್ಧಾರ ತೆಗೆದುಕೊಳ್ಳಬಾರದು. ಮುಂದೆ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ, ಎತ್ತರಕ್ಕೆ ಬೆಳೆಸಿದ್ದಾರೋ ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ: ಈಶ್ವರಪ್ಪಗೆ ವಿಜಯೇಂದ್ರ ಟಾಂಗ್​

ಕಾಂಗ್ರೆಸ್​​ನವರಿಗೆ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಅದಕ್ಕೆ ಬಿಜೆಪಿ ಬಂಡಾಯ ನಾಯಕರನ್ನು ಸಂಪರ್ಕ ಮಾಡುತ್ತಿದ್ದಾರೆ. ಕಾಂಗ್ರೆಸ್​​ ಪಕ್ಷದಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ಅರ್ಹ ವ್ಯಕ್ತಿಯೇ ಇಲ್ಲ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಯಿಂದಾಗಿ ಅನುಕೂಲ ಆಗಿದೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಾಗುತ್ತೆ. ಅಮಿತ್​ ಶಾ, ಮೋದಿ ಜೊತೆಗೆ ಹೆಚ್​ಡಿ ದೇವೇಗೌಡರು ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಕೆ.ಎಸ್​.ಈಶ್ವರಪ್ಪ ಅವರ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಎಲ್ಲ ನಾಯಕರು ಈಶ್ವರಪ್ಪ ಅವರ ಜೊತೆ ಮಾತನಾಡಿದ್ದಾರೆ. ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ತಿಳಿಸಿದ್ದೇನೆ. ತಮ್ಮ ಮಗನಿಗೆ ಸೀಟ್ ಸಿಗದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಚುನಾವಣಾ ಸಮಿತಿಯಲ್ಲಿ ಎಲ್ಲ ನಿರ್ಧಾರ ಆಗುತ್ತೇವೆ. ಇದು ಬಿಎಸ್​ ಯಡಿಯೂರಪ್ಪ ಅವರ ವೈಯಕ್ತಿಕ ನಿರ್ಧಾರವಲ್ಲ. 2-3 ಮೂರು ದಿನಗಳಲ್ಲಿ ಅವರಿಗೆ ಅರ್ಥ ಆಗಲಿದೆ. ಆಮೇಲೆ ಅವರೇ ಬರುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:50 am, Wed, 20 March 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!