ಮನವೊಲಿಕೆಗೆ ಸಂಘ ಪರಿವಾರ ಕರೆ, ಚುನಾವಣೆಯಿಂದ ಹಿಂದೆ ಸರಿಯಲ್ಲ, ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಈಶ್ವರಪ್ಪ

ಪುತ್ರ ಕಾಂತೇಶ್​​ಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಮತ್ತು ಬಿಎಸ್​ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಬಂಡಾಯವನ್ನು ಶಮನಗೊಳಿಸಲು ಬಿಜೆಪಿ ಮತ್ತು ಸಂಘ ಪರಿವಾರದವರು ಕರೆ ಮಾಡಿ ಮನವೊಲಿಸಲು ಯತ್ನಿಸಿದ್ದಾರೆ.

ಮನವೊಲಿಕೆಗೆ ಸಂಘ ಪರಿವಾರ ಕರೆ, ಚುನಾವಣೆಯಿಂದ ಹಿಂದೆ ಸರಿಯಲ್ಲ, ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಈಶ್ವರಪ್ಪ
ಕೆಎಸ್​ ಈಶ್ವರಪ್ಪ
Follow us
TV9 Web
| Updated By: ವಿವೇಕ ಬಿರಾದಾರ

Updated on: Mar 18, 2024 | 11:08 AM

ಶಿವಮೊಗ್ಗ, ಮಾರ್ಚ್​ 18: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇಂದು (ಮಾ.18) ಪ್ರಧಾನಿ ನರೇಂದ್ರ ಮೋದಿಯ (Narendra Modi) ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾನು ಹೋಗಲ್ಲ ಎಂದು ಮಾಜಿ ಸಚಿವ ಕೆಎಸ್​​ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಶಿವಮೊಗ್ಗದ ಬೀಳಗಿಯ ರಾಚಟೇಶ್ವರ ಮಠದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೋರಾಟ ಕುಟುಂಬ ರಾಜಕಾರಣ ‌ವಿರುದ್ಧು. ಸಿಟಿ ರವಿ, ಬಸನಗೌಡ ಪಾಟೀಲ್​ ಯತ್ನಾಳ, ನಳೀನ ಕುಮಾರ ಕಟೀಲು ಅವರಿಗೆ ಟಿಕೆಟ್ ನೀಡಿಲ್ಲ. ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧ ಮಾಡಿದರು. ಆದರೆ ಕರ್ನಾಟಕದಲ್ಲಿ ಬಿ.ಎಸ್​​ ಯಡಿಯೂರಪ್ಪ ಅವರ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು.

ಹೀಗಾಗಿ ಪಕ್ಷೇತರ ಸ್ಪರ್ಧೆ ಮಾಡಿದ್ದೇನೆ. ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ. ಕೇಂದ್ರದ ನಾಯಕರು ದೂರವಾಣಿ ಸಂಪರ್ಕ ಮಾಡಿದರೂ, ಸ್ಪಷ್ಟ ನಿರ್ಧಾರ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ನಾಯಕರನ್ನು ಮನೆಯಲ್ಲಿ ಕೂರಿಸಿ ಹೊರ ಹೋದ ಈಶ್ವರಪ್ಪ: ಶಮನವಾಗದ ಬಂಡಾಯ

ಸಂಘ ಪರಿವಾರದಿಂದ ಕರೆ

ಕೆಎಸ್​ ಈಶ್ವರಪ್ಪ ಅವರಿಗೆ ಸಂಘ ಪರಿವಾರದ ಪ್ರಮುಖ ಗೋಪಾಲ್​​ ಅಯೋದ್ಯೆಯಿಂದ ಕರೆ ಮಾಡಿ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಕೆಎಸ್​ ಈಶ್ವರಪ್ಪ ಮಾತ್ರ ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ ಎಂದಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಮನವೊಲಿಸುವ ಪ್ರಯತ್ನ ಕೈ ಬಿಟ್ಟ ಬಿಜೆಪಿ

ಮನವೊಲಿಸಲು ಮನೆಗೆ ಹೋಗಿದ್ದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಬಳಿ ಬಿಎಸ್​ ಯಡಿಯೂರಪ್ಪ ಕುಟುಂಬದ ಬಗ್ಗೆ ಕೆಎಸ್​ ಈಶ್ವರಪ್ಪ ಗರಂ ಆಗಿದ್ದರು. ಈ ಕ್ಷಣ ನನ್ನ ಮಗನಿಗೆ ಟಿಕೆಟ್ ಘೋಷಣೆ ಮಾಡಿದರೂ ನಾನು ಹಿಂದೆ ಸರಿಯಲ್ಲ. ಇಷ್ಟು ದಿನ ಯಡಿಯೂರಪ್ಪ ಆಗಿದ್ದಾಯ್ತು, ಇನ್ಮುಂದೆ ವಿಜಯೇಂದ್ರಗೆ ಕೂಡಾ ಜೈಕಾರ ಹಾಕುತ್ತಿರಬೇಕಾ? ವಿಜಯೇಂದ್ರ ಮುಂದೆ ಮುಖ್ಯಮಂತ್ರಿ ಆಗೋದನ್ನು ನಾವು ನೋಡಿಕೊಂಡು ಕೂರಬೇಕಾ? ಎಂದು ಪ್ರಶ್ನಿಸಿದ್ದಾರೆ.

ದೆಹಲಿಯವರು ಮನವೊಲಿಸುವುದಾದರೆ ಒಲಿಸಲಿ, ನಾನು ಮಾತನಾಡುವುದಿಲ್ಲ ಎಂದು ಬಿಎಸ್​ ಯಡಿಯೂರಪ್ಪ ಈಗಾಗಲೆ ಹೇಳಿದ್ದಾರೆ. ಈ ಮಧ್ಯೆ ಜನರೇ ತೀರ್ಮಾನ ಮಾಡುತ್ತಾರೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಪುನರುಚ್ಛಾರ ಮಾಡಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಮತ್ತು ಹೈಕಮಾಂಡ್​ ಕೆಎಸ್​ ಈಶ್ವರಪ್ಪ ಮನವೊಲಿಕೆಯನ್ನು ಕೈ ಬಿಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್