Lok Sabha Elections: ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕತ್ವ ಪಟ್ಟು

ಲೋಕಸಭೆ ಚುನಾವಣೆ 2024: ಮುಂಬರುವ ಲೋಕಸಭೆ ಚುನಾವಣೆಗೆ ಘಟಾನುಘಟಿ ನಾಯಕರನ್ನೇ ಬಿಜೆಪಿ ವಿರುದ್ಧ ಕಣಕ್ಕಿಳಿಸಲು ಕಾಂಗ್ರೆಸ್ ರಾಜ್ಯ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶಾಸಕರ, ಪ್ರಮುಖ ನಾಯಕರ ಅಭಿಪ್ರಾಯ ಪಡೆಯುವ ಕೆಲಸವನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ. ‘ಟಿವಿ9’ಗೆ ದೊರೆತ ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಅಭ್ಯರ್ಥಿಗಳ ವಿವರ ಇಲ್ಲಿದೆ.

Lok Sabha Elections: ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕತ್ವ ಪಟ್ಟು
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Feb 09, 2024 | 8:18 AM

ಬೆಂಗಳೂರು, ಫೆಬ್ರವರಿ 9: ಲೋಕಸಭಾ ಚುನಾವಣೆಗೆ (Lok Sabha Election) ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ (Congress) ನಾಯಕತ್ವ ಪಟ್ಟು ಹಿಡಿದಿದೆ. ಬಿಜೆಪಿಗೆ ಠಕ್ಕರ್ ಕೊಡಬಲ್ಲ ಸಚಿವರು ಹಾಗೂ ಅನುಭವಿ ನಾಯಕರಿಗೇ ಮೊದಲ ಆದ್ಯತೆ ಎಂದು ರಾಜ್ಯ ನಾಯಕತ್ವ ಹೇಳಿದ್ದು, ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೆರಿಗೆ ಹೋರಾಟದ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಜಿಲ್ಲಾವಾರು ಶಾಸಕರು ಹಾಗೂ ಸ್ಥಳೀಯ ನಾಯಕರ ಜೊತೆ ಚರ್ಚಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಶಾಸಕರ ಅಭಿಪ್ರಾಯವನ್ನೂ ಸಂಗ್ರಹಿಸಿ ಪಟ್ಟಿ ಸಿದ್ಧಪಡಿಸುತ್ತಿರುವ ಡಿಕೆ ಶಿವಕುಮಾರ್, ಶತಾಯಗತಾಯ ಗೆಲುವಿನ ಕುದುರೆಗೇ ಪಟ್ಟ ಕಟ್ಟಲೇಬೇಕೆಂದು ಪಣ ತೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಸಚಿವರಿಗೆ ಹೆಚ್ಚಿನ ಮಣೆ ಹಾಕುತ್ತಿದ್ದಾರೆ ಎನ್ನಲಾಗಿದೆ.

‘ಟಿವಿ9’ಗೆ ದೊರೆತ ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಅಭ್ಯರ್ಥಿಗಳ ವಿವರ

  • ಬೆಳಗಾವಿ – ಸತೀಶ್ ಜಾರಕಿಹೊಳಿ ಅಥವಾ ಜಾರಕಿಹೊಳಿ ಪುತ್ರಿ
  • ಚಿಕ್ಕೋಡಿ – ಲಕ್ಷ್ಮಣ್ ಸವದಿ ಪುತ್ರ ಅಥವಾ ಗಣೇಶ್ ಹುಕ್ಕೇರಿ ಶಿಫಾರಸ್ಸು ಸಾಧ್ಯತೆ
  • ಹಾವೇರಿ – ಹೆಚ್​ಕೆ ಪಾಟೀಲ್ ಪರ ಒಲವು
  • ಮಂಗಳೂರು – ಯುಟಿ ಖಾದರ್ ಹೆಸರು ಅಚ್ಚರಿಯ ರೀತಿಯಲ್ಲಿ ಎಂಟ್ರಿ. ಹಿಂದೂ ಮತಗಳನ್ನ ಸೆಳಯಬಲ್ಲ ಸಾಮರ್ಥ್ಯದ ಹಿನ್ನಲೆ ಹಾಲಿ ವಿಧಾನಸಭಾ ಸ್ಪೀಕರ್ ಕಣಕ್ಕೆ ಕೆಪಿಸಿಸಿ ಮಟ್ಟದಲ್ಲಿ ಚಿಂತನೆ
  • ಬಾಗಲಕೋಟೆ – ಸರ್ ನಾಯಕ್, ವೀಣಾ ಕಾಶಪ್ಪನವರ್ ಅಥವಾ ಸಂಯುಕ್ತ ಶಿವಾನಂದ ಪಾಟೀಲ್
  • ಕಲಬುರ್ಗಿ – ಮಲ್ಲಿಕಾರ್ಜುನ್ ಖರ್ಗೆ ಅಳಿಯ, ರಾಧಾಕೃಷ್ಣ ಹೆಸರು ಮುಂಚೂಣಿಯಲ್ಲಿ
  • ಉತ್ತರಕನ್ನಡ – ಆರ್​ವಿ ದೇಶಪಾಂಡೆ ಪರ ಸ್ಥಳೀಯ ಶಾಸಕರೂ ಸಹ ಬ್ಯಾಟಿಂಗ್
  • ಮೈಸೂರು – ಲಕ್ಷ್ಮಣ್ ಹಾಗೂ ಶುಶ್ರುತ್ ಗೌಡ ಫೈಟಿಂಗ್
  • ಬಳ್ಳಾರಿ – ಸೌಪರ್ಣಿಕಾ ತುಕಾರಾಂ ಹೆಸರು ಮುನ್ನಲೆಗೆ
  • ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸಚಿವ ಕೃಷ್ಣಭೈರೇಗೌಡ ಹೆಸರು ತೇಲಿ ಬಿಟ್ಟಿರುವ ಕೆಪಿಸಿಸಿ
  • ಬೆಂಗಳೂರು ದಕ್ಷಿಣ – ಪ್ರಿಯಾಕೃಷ್ಣಗೆ ನೀಡುವ ಬಗ್ಗೆ ಚರ್ಚೆ
  • ಕುತೂಹಲ ಮೂಡಿಸಿರುವ ರಾಜ್ಯ ಕಾಂಗ್ರೆಸ್ ನ ಲೋಕಸಭಾ ಅಭ್ಯರ್ಥಿ ಆಯ್ಕೆ

ಇದನ್ನೂ ಓದಿ: ಪ್ರಧಾನಿ ಮೋದಿ ಸಾಮಾನ್ಯ ವರ್ಗಕ್ಕೆ ಸೇರಿದವರು, ಅವರು ಜಾತಿಯ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ

ಮತ್ತೊಂದಡೆ ಬಿಜೆಪಿ ಸಹ ಲೋಕಸಭಾ ಚುನಾವಣೆ ತಯಾರಿ ತೀವ್ರಗೊಳಿಸಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರೇ ಖುದ್ದು ಅಖಾಡಕ್ಕಿಳಿದಿದ್ದಾರೆ. ಫೆಬ್ರವರಿ 10ರಂದು ಅವರು ರಾಜ್ಯಕ್ಕ ಭೇಟಿ ನೀಡಲಿದ್ದು, ಇಲ್ಲಿನ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು