Lok Sabha Election 2024: ಶೀಘ್ರದಲ್ಲೇ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆ, 28 ಕ್ಷೇತ್ರ ಟಾರ್ಗೆಟ್
ಬಿಜೆಪಿಯ ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್ ವಿಲೀನವಾಗಿ. ಈ ಬಾರಿಯ 2024ರ ಲೋಕಸಭಾ ಚುನಾವಣೆಯನ್ನು ಜಂಟಿಯಾಗಿ ಎದುರಿಸಲು ಎರಡು ಪಕ್ಷಗಳು ಸಿದ್ದವಾಗುತ್ತಿವೆ. ಈಗಾಗಲೆ ಎರಡು ಪಕ್ಷಗಳ ಮಧ್ಯೆ ಟಿಕೆಟ್ ಹಂಚಿಕೆ ವಿಚಾರದವರೆಗೆ ಮಾತುಕತೆಗಳು ನಡೆದಿವೆ. ಆದರೆ ಎರಡೂ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಲ್ಲಿ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಸಮನ್ವಯ ಸಮಿತಿ ರಚಿಸಲು ಮುಂದಾಗಿವೆ.
ಬೆಂಗಳೂರು, ಫೆಬ್ರವರಿ 10: ಲೋಕಸಭೆ ಚುನಾವಣೆಗೆ (Lok Sabha Election) ಅಖಾಡ ಸಿದ್ದವಾಗುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ದವಾಗುತ್ತಿವೆ. ಈ ಬಾರಿಯ ಲೋಕಸಭೆ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದ್ದು, ಶತಾಯಗತಾಯ ಬಿಜೆಪಿಯನ್ನು ಸೊಲಿಸಬೇಕು ಎಂದು ಪ್ರತಿಪಕ್ಷಗಳು ಒಂದಾಗಿವೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ vs ಬಿಜೆಪಿ, ಜೆಡಿಎಸ್ ಆಗಿದೆ. ಬಿಜೆಪಿಯ ಎನ್‌ಡಿಎ ಮೈತ್ರಿಕೂಟದಲ್ಲಿ ಜೆಡಿಎಸ್ ಸೇರಿದ್ದು, ಜಂಟಿಯಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಎರಡೂ ಪಕ್ಷಗಳು ಸಜ್ಜಾಗಿವೆ. ಚುನಾವಣೆಗೆ ಇನ್ನೂ 2-3 ತಿಂಗಳು ಬಾಕಿ ಇದ್ದು, ಈಗಲೆ ಜೆಡಿಎಸ್ (JDS) ಮತ್ತು ಬಿಜೆಪಿ (BJP) ರಾಜ್ಯದಲ್ಲಿ ವೇದಿಕೆ ಸಜ್ಜು ಮಾಡುತ್ತಿವೆ.
28 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಮನ್ವಯ ಸಮಿತಿ ರಚಿಸಲು ನಾಯಕರು ತಯಾರಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ, ಜೆಡಿಎಸ್ನ 10ಕ್ಕೂ ನಾಯಕರನ್ನು ಸೇರಿಸಿ ಸಮನ್ವಯ ಸಮಿತಿ ರಚನೆಯಾಗಲಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ: ಮಂಡ್ಯವನ್ನು ಜೆಡಿಎಸ್ಗೆ ಬಿಟ್ಟು ಕೊಡದಂತೆ ಬಿಗಿ ಪಟ್ಟು: ಬಿಜೆಪಿ ನಾಯಕರು ಹೇಳಿದ್ದೇನು?
ಬಿಜೆಪಿ ಹೈಕಮಾಂಡ್ ಸೂಚನೆಯಂತೆ ರಾಜ್ಯದಲ್ಲಿ ಸಮನ್ವಯ ಸಮಿತಿ ರಚನೆಯಾಗುತ್ತಿದೆ. ಈ ಸಮಿತಿ ಮೂಲಕ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ಲ್ಯಾನ್ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರುಸಮನ್ವಯ ಸಮಿತಿ ಅಧ್ಯಕ್ಷರಾಗುವ ಸಾಧ್ಯತೆ ಇದೆ. ನಾಯಕರ ಮಾತುಕತೆ ವೇಳೆ ಬಿಜೆಪಿ ಹೈಕಮಾಂಡ್ ಹೆಚ್ಡಿ ಕುಮಾರಸ್ವಾಮಿ ಅವರಿಗೆ ರಾಜ್ಯ ಎನ್‌ಡಿಎ ಸಂಚಾಲಕ ಹುದ್ದೆ ವಹಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಹೀಗಾಗಿ ಶ್ರೀಘದಲ್ಲೇ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಮಿತಿ ರಚನೆಯಾಗಲಿದೆ.
ಬಿಜೆಪಿ, ಜೆಡಿಎಸ್ ಹೊಂದಾಣಿಕೆಯಿಂದ 28 ಸ್ಥಾನಗಳು ಗೆಲ್ಲಬೇಕು: ಜಿಟಿಡಿ
ಬಿಜೆಪಿ, ಜೆಡಿಎಸ್ ಹೊಂದಾಣಿಕೆಯಿಂದ 28 ಸ್ಥಾನಗಳು ಗೆಲ್ಲಬೇಕು. ಬಿಜೆಪಿ ಅಭ್ಯರ್ಥಿ ಇರುವ ಕಡೆ ಜೆಡಿಎಸ್ ಬೆಂಬಲ ಕೊಡಬೇಕು. ಜೆಡಿಎಸ್ ಅಭ್ಯರ್ಥಿ ಇರುವ ಕಡೆ ಬಿಜೆಪಿ ಬೆಂಬಲ ಕೊಡಬೇಕು ಆಗ ಮಾತ್ರ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಅದಕ್ಕಿಂತ ಮೊದಲು ಬಿಜೆಪಿ, ಜೆಡಿಎಸ್ ನಾಯಕರ ನಡುವೆ ಸಮನ್ವಯ ಸಮಿತಿ ಆಗಬೇಕು. ಹೆಚ್. ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ. ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ಆಗಬೇಕು. ಖಂಡಿತ ಸಮನ್ವಯ ಸಮಿತಿ ಮಾಡುತ್ತೇವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ