ಬೆಂಗಳೂರಿಗೆ ಬಿಜೆಪಿ ಚಾಣಕ್ಯ: ಕುಮಾರಸ್ವಾಮಿ ನಿವಾಸಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ನಾಯಕತ್ವ ಹಾಗೂ ಸೀಟು ಹಂಚಿಕೆ ಚರ್ಚೆ ನಡೆಯುತ್ತಿದೆ. ಇತ್ತೀಚೆಗಷ್ಟೇ, ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎನ್​ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಆಹ್ವಾನಿಸಿದ್ದರು. ಇದೀಗ, ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ ಅವರನ್ನು ಕುಮಾರಸ್ವಾಮಿ ಆಹ್ವಾನಿಸಿದ್ದಾರೆ.

ಬೆಂಗಳೂರಿಗೆ ಬಿಜೆಪಿ ಚಾಣಕ್ಯ: ಕುಮಾರಸ್ವಾಮಿ ನಿವಾಸಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ
Follow us
Sunil MH
| Updated By: Rakesh Nayak Manchi

Updated on: Feb 09, 2024 | 8:17 AM

ಬೆಂಗಳೂರು, ಫೆ.9: ಇತ್ತೀಚೆಗಷ್ಟೇ, ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಎನ್​ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿಗೆ (HD Kumaraswamy) ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಆಹ್ವಾನಿಸಿದ್ದರು. ಅದರಂತೆ ಉಭಯ ನಾಯಕರು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ, ಅಮಿತ್ ಶಾ ಅವರನ್ನು ಕುಮಾರಸ್ವಾಮಿ ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದರು. ಸದ್ಯದಲ್ಲೇ ಬೆಂಗಳೂರಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮಿಸಲಿದ್ದು, ತಮ್ಮ ನಿವಾಸಕ್ಕೆ ಕುಮಾರಸ್ವಾಮಿ ಆಹ್ವಾನಿಸುವ ಸಾಧ್ಯತೆ ಇದೆ.

ನಾಳೆ, ಅಂದರೆ ಫೆಬ್ರವರಿ 10 ರಂದು ಅಮಿತ್ ಶಾ ಅವರನ್ನು ಕುಮಾರಸ್ವಾಮಿ ತನ್ನ ನಿವಾಸಕ್ಕೆ ಉಪಹಾರ ಅಥವಾ ರಾತ್ರಿ ಭೋಜನಕ್ಕೆ ಆಹ್ವಾನಿಸುವ ಸಾಧ್ಯತೆ ಇದೆ. ಈ ವೇಳೆ ರಾಜ್ಯ ರಾಜಕೀಯದ ಬಗ್ಗೆಯೂ ಚರ್ಚೆ ನಡೆಯಲಿದೆ.

ಈ ಭೇಟಿ ಮೂಲಕ ರಾಜಕೀಯವಾಗಿಯೂ ಸ್ಪಷ್ಟ ಸಂದೇಶ ರವಾನೆಯಾಗಲಿದೆ. ಅಲ್ಲದೆ, ಹಳೇ ಮೈಸೂರು ಭಾಗದ ಕಾರ್ಯಕರ್ತರ ಮನೋಬಲಕ್ಕೆ ಪುಷ್ಠಿ ಸಿಗುವ ನಿರೀಕ್ಷೆ ಇದೆ. ಅಲ್ಲದೆ, ಬಿಜೆಪಿ ಹಾಗೂ ಜೆಡಿಎಸ್ ಸ್ಥಳಿಯ ಕಾರ್ಯಕರ್ತರಿಗೆ ಹೊಂದಾಣಿಕೆ ನಾಯಕರ ಭೇಟಿ ಸಹಕಾರಿಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ದೆಹಲಿ ಪ್ರತಿಭಟನೆಗೆ ಕೇರಳ ಉದಾಹರಣೆ ಕೊಟ್ಟು ಕಾಂಗ್ರೆಸ್​ಗೆ ಭರ್ಜರಿ ತಿರುಗೇಟು ಕೊಟ್ಟ ಕುಮಾರಸ್ವಾಮಿ

ಮುಂದಿನ ದಿನಗಳಲ್ಲಿ ಪ್ರಚಾರ ಕಾರ್ಯದಲ್ಲೂ ಈ ಭೇಟಿ ನೆರವಾಗುವ ನಿರೀಕ್ಷೆ ಇದ್ದು, ಒಕ್ಕಲಿಗ ಮತ ಬ್ಯಾಂಕ್ ಧ್ರುವಿಕರಣಕ್ಕೆ ಅಮಿತ್ ಶಾ – ದೊಡ್ಡ ಗೌಡರ ಕುಟುಂಬದ ಭೇಟಿ ಸಹಾಯವಾಗಲಿದೆ ಎಂಬ ಲೆಕ್ಕಾಚಾರ ಹೊಂದಲಾಗಿದೆ.

ಇತ್ತೀಚೆಗೆ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಈ ವೇಳೆ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎನ್​ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಕುಮಾರಸ್ವಾಮಿ ಅವರಲ್ಲಿ ಅಮಿತ್ ಶಾ ಕೋರಿದ್ದರು. ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರ ಜತೆ ಸಮನ್ವಯ ಸಾಧಿಸಲು ಕುಮಾರಸ್ವಾಮಿ ನೇತೃತ್ವ ವಹಿಸಲಿ ಎಂಬ ಅಭಿಪ್ರಾಯವನ್ನು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಕ್ಷೇತ್ರ ಹಂಚಿಕೆಯ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಜೆಡಿಎಸ್ ಗೆಲ್ಲಲು ಅವಕಾಶ ಇರುವ ಮೂರು ಕ್ಷೇತ್ರಗಳನ್ನು ಕುಮಾರಸ್ವಾಮಿ ಕೇಳಿದ್ದಾರೆ. ಇದರ ಜೊತೆಗೆ ರಾಜ್ಯಸಭಾ ಸ್ಥಾನ ಅಥವಾ ಮಂತ್ರಿಸ್ಥಾನ ನೀಡುವ ಭರವಸೆಯನ್ನೂ ಕುಮಾರಸ್ವಾಮಿ ಅವರಿಗೆ ಅಮಿತ್ ಶಾ ನೀಡಿದ್ದಾರೆ ಎನ್ನಲಾಗಿದೆ. ಆದರೆ, ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್​ ಹೆಚ್ಚು ಸ್ಥಾನ ಗೆಲ್ಲಿಸುವ ಕೆಲಸ ಮಾಡುತ್ತೇವೆ. ಸದ್ಯಕ್ಕೆ ಕೇಂದ್ರ ಮಂತ್ರಿ ಸ್ಥಾನ ಬೇಡ ಎಂದು ಕುಮಾರಸ್ವಾಮಿ ಹೇಳಿರುವುದಾಗಿ ಮೂಲಗಳು ತಿಳಿಸಿದ್ದವು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್