ರಾಜ್ಯ ಬಿಟ್ಟು ಏಕೆ ಕಳಿಸ್ತೀರ, ರಾಜ್ಯದಲ್ಲೇ ಇರೋಣ ಅಂದ್ಕೊಂಡಿದ್ದೇನೆ: ಪರೋಕ್ಷವಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಕುಮಾರಸ್ವಾಮಿ

ಬಿಜೆಪಿಯ ಎನ್​ಡಿಎ ಕೂಟದಲ್ಲಿ ಜೆಡಿಎಸ್​ ವಿಲೀನವಾಗಿದೆ. ಜೆಡಿಎಸ್​ ವಿಲೀನದ ನಂತರ ಹಳೇ ಮೈಸೂರು ಭಾಗದಲ್ಲಿ ಟಿಕೆಟ್​ ಹಂಚಿಕೆ ವಿಚಾರವಾಗಿ ಭಾರಿ ಚರ್ಚೆ ಶುರುವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ, ಕೇಂದ್ರ ಮಂತ್ರಿಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈ ಮಾತುಗಳಿಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಫುಲ್​ಸ್ಟಾಪ್​ ಇಟ್ಟಿದ್ದಾರೆ.

ರಾಜ್ಯ ಬಿಟ್ಟು ಏಕೆ ಕಳಿಸ್ತೀರ, ರಾಜ್ಯದಲ್ಲೇ ಇರೋಣ ಅಂದ್ಕೊಂಡಿದ್ದೇನೆ: ಪರೋಕ್ಷವಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:Feb 12, 2024 | 12:51 PM

ಹಾಸನ, ಫೆಬ್ರವರಿ 12: ಲೋಕಸಭೆ ಚುನಾವಣೆ (Loka Sbha Election) ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ (BJP) ಮಿತ್ರಕೂಟದಲ್ಲಿ ಜೆಡಿಎಸ್​​ (JDS) ವಿಲೀನವಾದ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ, ಕೇಂದ್ರದಲ್ಲಿ ಮಂತ್ರಿ​ಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇದೀಗ ಹೆಚ್​ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. “ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಾನು ಯೋಚಿಸಿಲ್ಲ. ರಾಜ್ಯ ಬಿಟ್ಟು ಏಕೆ ಕಳಿಸುತ್ತೀರಿ, ರಾಜ್ಯದಲ್ಲೇ ಇರೋಣ ಅಂದುಕ್ಕೊಂಡಿದ್ದೇನೆ” ಎಂದರು.

ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಹಾಸನ ತಾಲೂಕಿನ ಚನ್ನಂಗಿಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಈಶ್ವರ ದೇಗುಲದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ನೀವು ಸ್ಪರ್ಧಿಸಿದರೆ ಗೆದ್ದು ಕೇಂದ್ರದಲ್ಲಿ ಮಂತ್ರಿ ಆಗುತ್ತೀರಿ. ರಾಜ್ಯಕ್ಕೆ ಒಳ್ಳೆಯದಾಗುತ್ತೆ ನೀವು ಲೋಕಸಭೆ ಚುನಾವಣೆಗೆ ನಿಲ್ಲಬೇಕು. ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದಲೂ ಸ್ಪರ್ಧಿಸಿ ಅಂತಿದ್ದಾರೆ. ಹಾಸನದಲ್ಲಿ ದೇವೇಗೌಡರು ನಿಲ್ಲದೆ ಇದ್ದರೆ ನೀವೇ ಬಂದುಬಿಡಿ ಅಂತಾರೆ. ಅಭಿಮಾನದಲ್ಲಿ ಮಾತನಾಡುತ್ತಾರೆ, ಎಲ್ಲಾ ಕಡೆ ನಾನೇ ನಿಲ್ಲಲು ಆಗುತ್ತಾ? ಏನೇನು ಮಾಡಬೇಕು ಅಂತಾ ಮುಂದೆ ನೋಡೋಣ. ಆದರೆ ನಾನು ಈ ಕ್ಷಣದವರೆಗೂ ಲೋಕಸಭೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸಿಲ್ಲ ಎಂದು ಹೇಳಿದರು.

ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು: ಕುಮಾರಸ್ವಾಮಿ

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುವುದನ್ನು ಯಾರೂ ತಪ್ಪಿಸಲು ಆಗಲ್ಲ. ಬಿಜೆಪಿ-ಜೆಡಿಎಸ್​ ಮೈತ್ರಿ ಸೀಟ್ ಹಂಚಿಕೆಯ ಬಗ್ಗೆ ಸಮಸ್ಯೆ ಇಲ್ಲ. ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಸಣ್ಣಪುಟ್ಟ ಸಮಸ್ಯೆಗಳಿವೆ, ಅದೆಲ್ಲವನ್ನೂ ಸರಿಪಡಿಸಿಕೊಳ್ಳುತ್ತೇವೆ. ಮಂಡ್ಯ ಜಿಲ್ಲೆಯ ಪ್ರತಿದಿನ ಒಂದು ಧಾರಾವಾಹಿ ಇರಲೇಬೇಕು. ಪಾಪ ನಿಖಿಲ್​ ಅಮಾಯಕ. ನಿಖಿಲ್​ನನ್ನು ರಾಜಕೀಯವಾಗಿ ಮುಗಿಸಲು ಯಾವ ರೀತಿ ಮಾಡಿದರು. ಒಂದು ತಿಂಗಳಿನಿಂದ ಧಾರಾವಾಹಿ ನಡೆಯುತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ಗೆ ಟಾಂಗ್​ ಕೊಟ್ಟರು.

ಇದನ್ನೂ ಓದಿ: ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗುವುದನ್ನು ಯಾರಿಂದಲೂ ತಡೆಯಲಾಗದು: ಹೆಚ್​ಡಿ ಕುಮಾರಸ್ವಾಮಿ

ಹಾಸನದಿಂದ ಪ್ರೀತಂಗೌಡನನ್ನೇ ನಿಲ್ಲಿಸೋಣ: ಕುಮಾರಸ್ವಾಮಿ

ಪ್ರೀತಂಗೌಡ ಯುವಕರಿದ್ದಾರೆ, ಉತ್ಸಾಹದಲ್ಲಿ ಏನೋ ಮಾತನಾಡುತ್ತಾರೆ. ಪ್ರೀತಂಗೌಡ ಅವರನ್ನೇ ನಿಲ್ಲಿಸೋದಾದರೆ, ನಾವೆಲ್ಲಾ ಚರ್ಚಿಸಿ ನಿಲ್ಲಿಸೋಣ. ಅವರೂ ನಾವು ಸಹೋದರರ ರೀತಿ ಹೋಗಬೇಕು ಅಲ್ವೆ. ಪಾಪ ಮಾತಿನ ಬಿರುಸಿನಲ್ಲಿ‌ ಮಾತಾಡುತ್ತಾರೆ ಸರಿ ಮಾಡೋಣ ಎಂದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಪಣ್ಣ ಕಮಿಷನ್​ ಆರೋಪ ವಿಚಾರವಾಗಿ ಮಾತನಾಡಿದ ಅವರು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಕ್ಕೆ ಸಾಕ್ಷಿ ಕೇಳುತ್ತಿದ್ದಾರೆ. ಇದೇ ಕೆಂಪಣ್ಣನ ಹೇಳಿಕೆ ಇಟ್ಕೊಂಡು ಪೇಸಿಎಂ ಎಂದು ಅಂಟಿಸಿದ್ದರು. ಹಾಸನದಲ್ಲಿ ಕಾಂಗ್ರೆಸ್​ನ ಮಾಜಿ ಸಚಿವರು ಬೆಳಗ್ಗೆ ಎದ್ದರೆ ಡಂಗುರ ಹೊಡೆಯುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೆಗೆದು ಹಾಕಬೇಕು. ರಾಜ್ಯದಲ್ಲಿ ಎನ್​ಡಿಎ ಮೈತ್ರಿಕೂಟ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಬೇಕು. ಎನ್​​ಡಿಆರ್​ಎಫ್​ನಿಂದ ಬಿಡಿಗಾಸು ಕೊಟ್ಟಿಲ್ಲ ಅಂತಾ ಆರೋಪ ಮಾಡುತ್ತಾರೆ. ವಿಶೇಷ ಅನುದಾನ ಕೆಲವು ಬಾರಿ ಕೊಟ್ಟಿದ್ದಾರೆ ಎಂದು ತಿರುಗೇಟು ನೀಡಿದರು.

ಸಹೋದರ ಹೆಚ್​​.ಡಿ.ರೇವಣ್ಣ ಸ್ವಲ್ಪ ದುಡುಕಿನ ಸ್ವಭಾವದವರು. ರೇವಣ್ಣ ತಮ್ಮ ದುಡುಕಿನ ಸ್ವಭಾವದಿಂದ ಜನರ ವಿರೋಧ ಕಟ್ಟಿಕೊಳ್ಳುತ್ತಾರೆ. ದೇವೇಗೌಡರಿಗೆ ಬೆನ್ನೆಲುಬಾಗಿ ನಿಂತು ರೇವಣ್ಣ ಬೆಳೆದಿದ್ದಾರೆ. ಆದರೆ ರೇವಣ್ಣ ಮಾಡಿರುವ ಅಭಿವೃದ್ಧಿ ಕೆಲಸಗಳು ಕಡಿಮೆ ಏನೂ ಅಲ್ಲ. ನಮ್ಮಿಂದ ಯಾರಿಗಾದರೂ ನೋವಾಗಿದ್ದರೆ ತಪ್ಪು ತಿದ್ದಿಕೊಳ್ಳುತ್ತೇವೆ. ಜಿಲ್ಲೆಯಲ್ಲಿ ಕಳೆದ 5 ವರ್ಷದಲ್ಲಿ ಕೆಲ ಘಟನೆಗಳು ನಡೆದಿವೆ. ಯಾವುದೇ ಅಪ ಪ್ರಚಾರಗಳಿಗೆ ಕಿವಿಗೊಡಬೇಡಿ. ರಾಜಕೀಯ ಜೀವನದಲ್ಲಿ ದೇವೇಗೌಡರಿಗೆ ಅಧಿಕಾರ ಸಿಕ್ಕಿದ್ದು ಕಡಿಮೆ. ದೇವೇಗೌಡರು ಅಧಿಕಾರ ನೋಡಿದ್ದು ಕೇವಲ 3-4 ವರ್ಷ. ಕನಿಷ್ಠ ಐದು ವರ್ಷ ಅವಕಾಶ ಸಿಕ್ಕಿದ್ದರೆ ಸಾಕಷ್ಟು ಅಭಿವೃದ್ಧಿ ಆಗುತ್ತಿತ್ತು ಎಂದು ತಿಳಿಸಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಕಲೆಕ್ಷನ್; ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಕೇಂದ್ರ ರಾಜ್ಯದ ನಡುವೆ ಸಂಘರ್ಷ ಶುರುವಾಗಿದೆ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಇಂದು ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಮಾತನಾಡಿದ್ದಾರೆ. ಬಜೆಟ್ ಕೂಡ ಮಂಡನೆಗೆ ದಿನಾಂಕ ನಿಗದಿ ಆಗಿದೆ. ಈಬಾರಿ ಹತ್ತು ದಿನವು ಸದನಕ್ಕೆ ಮೀಸಲಿಡಬೇಕು ಎಂದು ತೀರ್ಮಾನ ಮಾಡಿದ್ದೇನೆ. ಪ್ರತಿಭಟನೆ ಈಗ ಶುರುಮಾಡಿದ್ದಾರೆ. ಈ ರಾಜ್ಯದಲ್ಲಿ ದಾಖಲೆಯ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ಅನ್ಯಾಯ ಅಗಿದೆ ಎಂದು ಈಗ ಹೇಳುತ್ತಿದ್ದೀರಿ. ನಮ್ಮ ದೇಶದ ಸಂವಿಧಾನ ವ್ಯವಸ್ಥೆಯಲ್ಲಿ ಈ ಹಣಕಾಸು ಆಯೊಗ ಆರಂಭವಾಗಿದೆ ಎಂದು ಮಾಹಿತಿ ನೀಡಿದರು.

ಮೈತ್ರಿ ವಿಚಾರದಲ್ಲಿ ಏನೂ ಸಮಸ್ಯೆ ಇಲ್ಲ ನನಗೆ ಅದು ಮುಖ್ಯ ಅಲ್ಲ. ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಮಗೆ ಬೇಕಿರೋದು ಈ ಭ್ರಷ್ಟ ಸರ್ಕಾರ ತೆಗೆಯಬೇಕು. ರಾಜ್ಯದಲ್ಲಿ 28ಕ್ಕೆ 28 ಗೆಲ್ಲಬೇಕು. ಎನ್​ಡಿಎ ಅನ್ನು ಸಂಪೂರ್ಣವಾಗಿ ಗೆಲ್ಲಿಸುವುದು ನಮ್ಮ ಗುರಿ. ಇನ್ನೊಬ್ಬರಿಗೆ ತೊಂದರೆ ಕೊಟ್ಟು ಸೀಟ್ ಪಡೆಯುವ ಅವಶ್ಯಕತೆ ನಮಗೆ ಇಲ್ಲ. ಮಂಡ್ಯದಲ್ಲಿ ಹಾಲಿ ಸಂಸದರಿಗೆ ಟಿಕೇಟ್ ತಪ್ಪಿಸಿ ದೇವೇಗೌಡರ ಕುಟುಂಬಕ್ಕೆ ಟಿಕೆಟ್ ಪಡೆಯೊ ಯತ್ನ ನಡೆದಿದೆ ಎಂದು ನಿತ್ಯ ದಾರವಾಹಿ ನಡೆಯುತ್ತಿದೆ. ಆದರೆ ನಿಖಿಲ್ ಸ್ವತಃ ಹೇಳಿದಾನೆ, ನಾನು ಯು ಟರ್ನ್ ಆಗಲ್ಲ, ಚುನಾವಣೆಗೆ ನಿಲ್ಲುತ್ತೇನೆ ಅಂತ ನಾನು ಹೇಳಿಲ್ಲ ಎಂದು ನಿಖಿಲ್​ ಹೇಳಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Mon, 12 February 24

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ