AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿಗೆ ಮುಳುವಾಗುತ್ತಾ ಕೋಲಾರ? ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು, ಪಟ್ಟು ಬಿಡದ ಜೆಡಿಎಸ್​​

Lok Sabha Election 2024: ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು ಹಾಕಿದೆ. ಎಸ್.ಸಿ. ಬಲಗೈ ಸಮುದಾಯಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕೋಲಾರ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧಿಸಿದ್ದಾರೆ. ಆದರೆ ಜೆಡಿಎಸ್ ಕೋಲಾರ ಲೋಕಸಭಾ ಕ್ಷೇತ್ರ ತಮಗೆ ಬೇಕೆ ಬೇಕು ಎಂದು ಪಟ್ಟು ಹಿಡಿದಿದೆ.

ಮೈತ್ರಿಗೆ ಮುಳುವಾಗುತ್ತಾ ಕೋಲಾರ? ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು, ಪಟ್ಟು ಬಿಡದ ಜೆಡಿಎಸ್​​
ಬಿಜೆಪಿ-ಜೆಡಿಎಸ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 18, 2024 | 8:41 AM

Share

ಲೋಕಸಭೆ ಚುನಾವಣೆಗೆ (Lok Sabha Election) ಮುಹೂರ್ತ ಫಿಕ್ಸ್ ಆಗಿದೆ. ಸರ್ವೆಗಳೂ ಸಹ ಬಿಜೆಪಿ-ಜೆಡಿಎಸ್ (BJP-JDS) ಕರ್ನಾಟಕದಲ್ಲಿ 23 ಸ್ಥಾನ ಗೆಲ್ಲುತ್ತೆಂಬ ಭವಿಷ್ಯ ನುಡಿತಿವೆ. ಹೀಗಾಗಿ ಹುಮ್ಮಸ್ಸಿನಲ್ಲಿರೋ ದೋಸ್ತಿಗಳು ಸೀಟು ಹಂಚಿಕೆ ಫೈನಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಶನಿವಾರ (ಮಾ.16) ರಂದು ದೆಹಲಿಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumarswamy) ಅವರು ಅಮಿತ್ ಶಾ ಭೇಟಿ ಮಾಡಿದ್ದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳ ಟಿಕೆಟ್​​ ತಮಗೆ ನೀಡುವಂತೆ ಕೇಳಿದ್ದಾರಂತೆ. ಆದರೆ ಬಿಜೆಪಿ ವರಿಷ್ಠರು ಕೋಲಾರ ಕ್ಷೇತ್ರ ಬಿಟ್ಟುಕೊಡಲು ಹಿಂದೇಟು ಹಾಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ದೊರೆತಿದೆ. ಅಷ್ಟಕ್ಕೂ ಬಿಜೆಪಿ ಹೈಕಮಾಂಡ್​ ನಾಯಕರು ಹಿಂದೇಟು ಹಾಕಿದ್ದೇಕೆ? ಇಲ್ಲಿದೆ ಓದಿ..

ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು ಹಾಕಿದೆ. ಎಸ್.ಸಿ. ಬಲಗೈ ಸಮುದಾಯಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕೋಲಾರ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧಿಸಿದ್ದಾರೆ. ಆದರೆ ಜೆಡಿಎಸ್ ಕೋಲಾರ ಲೋಕಸಭಾ ಕ್ಷೇತ್ರ ತಮಗೆ ಬೇಕೆ ಬೇಕು ಎಂದು ಪಟ್ಟು ಹಿಡಿದಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಬಿಜೆಪಿಗಿಂತ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಮತಗಳ ಕ್ರೂಡಿಕರಣವಾಗಿತ್ತು. ಅಲ್ಲದೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೂವರು ಜೆಡಿಎಸ್ ಶಾಸಕರಿದ್ದಾರೆ. (ಮುಳಬಾಗಿಲು, ಶ್ರೀನಿವಾಸಪುರ, ಶಿಡ್ಲಘಟ್ಟ). ಬಿಜೆಪಿಗೆ ಹೋಲಿಸಿದರೆ ಜೆಡಿಎಸ್​ ಒಳ್ಳೆಯ ಸಂಘಟನೆ ಇದೆ. ಗೆಲ್ಲುವ ಅವಕಾಶ ಹೆಚ್ಚು ಇರುವ ಕಾರಣಕ್ಕೆ ಜೆಡಿಎಸ್ ಕೋಲಾರ ಕ್ಷೇತ್ರ ಬಿಟ್ಟುಕೊಡುವಂತೆ ಪಟ್ಟು ಹಿಡಿದಿದೆ. ಈ ವಿಚಾರವಾಗಿ ಮೈತ್ರಿ ನಾಯಕರಲ್ಲಿ ಅಸಮಾಧಾನ ಮೂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮಂಡ್ಯ ಟಿಕೆಟ್ ಜೆಡಿಎಸ್​ಗೆ ಫಿಕ್ಸ್? ಸುಮಲತಾ ಮುಂದಿನ ನಡೆ ಏನು? ಇಲ್ಲಿದೆ ಓದಿ

ಈ ಗೊಂದಲದ ನಡುವೆಯೇ ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮ ಮಾಡುವ ಕುರಿತು ಹೆಚ್​ಡಿ ಕುಮಾರಸ್ವಾಮಿ ನಾಳೆ (ಮಾ.19) ರಂದು ಕೋಲಾರ ಮುಖಂಡರ ಸಭೆ ಕರೆದಿದ್ದಾರೆ. ಸಭೆ ಬಳಿಕ ಅಂತಿಮ ನಿರ್ಧಾರ ತಿಳಿಸಿದ್ದಾರೆ. ಕೋಲಾರದಲ್ಲಿ ಬಲಗೈ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಸಿದರೆ ಹೆಚ್ಚು ಅನುಕೂಲವಾಗಲಿದೆ. ಇನ್ನು ಜೆಡಿಎಸ್​ನಿಂದ‌ ಭೋವಿ ಜನಾಂಗದ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಭೋವಿ ಅಭ್ಯರ್ಥಿ ಕಣಕ್ಕಿಳಿಸಿದರೆ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲವಾಗುವ ಸಾಧ್ಯತೆ ಹೆಚ್ಚಾಗಿದೆ.

ಸದ್ಯ ಕೋಲಾರ ಲೋಕಸಭಾ ಕ್ಷೇತ್ರ ಮೈತ್ರಿ ಪಕ್ಷಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ ಕೇವಲ ಎರಡು ಕ್ಷೇತ್ರಕ್ಕಾಗಿ ಮೈತ್ರಿ ಬೇಕಿತ್ತಾ ಎಂದು ಕೆಲವು ಜೆಡಿಎಸ್ ಶಾಸಕರು ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಸದ್ಯ ಚುನಾವಣೆ ಹೊಸ್ತಿಲಲ್ಲಿ ದಳಪತಿಗಳು ಗೊಂದಲದಲ್ಲಿ ಸಿಲುಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ