AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ, ಡಿಸಿಎಂ ಮುಂದೆ ಮುನಿಯಪ್ಪರ ದಲಿತ ಎಡಗೈ-ಬಲಗೈ ಸಮುದಾಯದ ಪ್ರಾತಿನಿಧ್ಯದ ವಾದ

Lok Sabha Election 2024: ಈಗಾಗಲೇ ಐದು ಮೀಸಲು ಕ್ಷೇತ್ರಗಳ ಪೈಕಿ ಮೂರು ದಲಿತ ಬಲ ಸಮುದಾಯಕ್ಕೆ ನೀಡಲಾಗಿದೆ. ಚಿತ್ರದುರ್ಗದಲ್ಲಿ ಮಾತ್ರ ದಲಿತ ಎಡ ಸಮುದಾಯಕ್ಕೆ ಟಿಕೇಟ್ ನೀಡಲಾಗಿದೆ. ಅಕಸ್ಮಾತ್ ಕೋಲಾರ ತಮ್ಮ ಕುಟುಂಬಕ್ಕೆ ನೀಡದೆ ಇದ್ದರೇ ದಲಿತ ಎಡ ಸಮುದಾಯದ ಮತಗಳ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸಚಿವ ಕೆಹೆಚ್​ ಮಹದೇವಪ್ಪ ಸಿಎಂ ಮತ್ತು ಡಿಸಿಎಂ ಮುಂದೆ ಹೇಳಿದ್ದಾರೆ.

ಸಿಎಂ, ಡಿಸಿಎಂ ಮುಂದೆ ಮುನಿಯಪ್ಪರ ದಲಿತ ಎಡಗೈ-ಬಲಗೈ ಸಮುದಾಯದ ಪ್ರಾತಿನಿಧ್ಯದ ವಾದ
ಕೆಹೆಚ್​ ಮುನಿಯಪ್ಪ
TV9 Web
| Edited By: |

Updated on:Mar 29, 2024 | 12:28 PM

Share

ಕೋಲಾರ, ಮಾರ್ಚ್​ 29: ರಾಜ್ಯದ ಐದು ಪರಿಶಿಷ್ಟ ಜಾತಿಯ ಲೋಕಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದಡಿ ಕೋಲಾರ ಕ್ಷೇತ್ರ ಕೂಡ ಒಂದು. ಕಾಂಗ್ರೆಸ್ (Congress)​ ಮೊದಲಿನಿಂದಲೂ ಎರಡು ಕ್ಷೇತ್ರದ ಟಿಕೆಟ್​ ದಲಿತ ಬಲಗೈ, ಎರಡು ಕ್ಷೇತ್ರ ಎಡಗೈ ಹಾಗೂ ಒಂದು ಭೋವಿ ಅಥವಾ ಲಂಬಾಣಿ ಸಮುದಾಯಕ್ಕೆ ನೀಡುತ್ತಾ ಬಂದಿದೆ. ಆದರೆ ಕಾಂಗ್ರೆಸ್ ಈ ಬಾರಿ ​ವಿಜಯಪುರ, ಕಲಬುರಗಿ ಕ್ಷೇತ್ರದ ಟಿಕೆಟ್​ ಅನ್ನು ಬಲಗೂ ಸಮುದಾಯವರಿಗೆ ನೀಡಿದೆ. ಇನ್ನು ಚಾಮರಾಜನಗರದಲ್ಲೂ ಬಲಗೈ ಸಮುದಾಯದ ಡಾ.ಹೆಚ್​.ಸಿ ಮಹದೇವಪ್ಪ ಪುತ್ರ ಸುನಿಲ್​ ಬೋಸ್​ಗೆ ನೀಡುವುದು ಬಹುತೇಕ ಪಕ್ಕಾ ಆಗಿದೆ.

ಕಾಂಗ್ರೆಸ್​ ಚಿತ್ರದುರ್ಗ ಕ್ಷೇತ್ರ ಒಂದನ್ನೂ ಮಾತ್ರ ಎಡಗೈ ಸಮುದಾಯಕ್ಕೆ (ಬಿ.ಎನ್​. ಚಂದ್ರಪ್ಪ) ಟಿಕೆಟ್​ ನೀಡಿದೆ. ಇದೀಗ ಕೋಲಾರದಲ್ಲೂ ಎಡಗೈ ಸಮುದಾಯಕ್ಕೆ ಟಿಕೆಟ್​ ನೀಡಿದರೇ 3 ಬಲ + 2 ಎಡ ಅಭ್ಯರ್ಥಿಗಳಿಗೆ ಟಿಕೆಟ್​ ಸಿಕ್ಕಂತಾಗುತ್ತದೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಪಟ್ಟು ಹಿಡಿದಿದ್ದಾರೆ.

ಹೀಗಾಗಿ ಕೆ ಎಚ್ ಮುನಿಯಪ್ಪ ನಿನ್ನೆ (ಮಾ.28) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು. ಈ ವೇಳೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೂಡ ಹಾಜರಿದ್ದರು.

ಇದನ್ನೂ ಓದಿ: ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ: ಹಾಗಾದ್ರೆ ಲೋಕಸಭೆ ಟಿಕೆಟ್ ಯಾರಿಗೆ..?

ದಲಿತ ಎಡ-ಬಲ ಸಮುದಾಯದ ಪ್ರಾತಿನಿಧ್ಯದ ವಾದ

ಈಗಾಗಲೇ ಐದು ಮೀಸಲು ಕ್ಷೇತ್ರಗಳ ಪೈಕಿ ಮೂರು ದಲಿತ ಬಲ ಸಮುದಾಯಕ್ಕೆ ನೀಡಲಾಗಿದೆ. ಚಿತ್ರದುರ್ಗದಲ್ಲಿ ಮಾತ್ರ ದಲಿತ ಎಡ ಸಮುದಾಯಕ್ಕೆ ಟಿಕೇಟ್ ನೀಡಲಾಗಿದೆ. ಅಕಸ್ಮಾತ್ ಕೋಲಾರ ತಮ್ಮ ಕುಟುಂಬಕ್ಕೆ ನೀಡದೆ ಇದ್ದರೇ ದಲಿತ ಎಡ ಸಮುದಾಯದ ಮತಗಳ ಮೇಲೆ ನೇರ ಪರಿಣಾಮ ಬೀರುತ್ತದೆ.

ಉಳಿದ ಮೀಸಲು ಕ್ಷೇತ್ರಗಳಲ್ಲೂ ದಲಿತ ಎಡ ಸಮುದಾಯದ ಪರಿಣಾಮ ಉಲ್ಟಾ ಆಗುವ ಸಾಧ್ಯತೆ ಇದೆ. ದಲಿತ ಎಡ ವರ್ಗಕ್ಕೆ ಟಿಕೇಟ್ ನೀಡದೇ ಇದ್ದರೆ ಎಲ್ಲ ಮೀಸಲು ಕ್ಷೇತ್ರದ ಮೇಲೂ ದುಷ್ಪರಿಣಾಮ ಬೀಳಬಹುದೆಂದು ಎಚ್ಚರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Fri, 29 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ