ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಟಿಕೆಟ್ಗಾಗಿ ಲಾಬಿ ಶುರುವಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಬಿಜೆಪಿಯ ಬಿಸಿ ಪಾಟೀಲ್, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂತೇಶ್ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

ಶಿವಮೊಗ್ಗ, ಮಾರ್ಚ್ 10: ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ಇಂದು (ಮಾ.10) ಬೆಳ್ಳಂ ಬೆಳಿಗ್ಗೆ ಈಶ್ವರಪ್ಪ ಅಭಿಮಾನಿಗಳು ಮತ್ತು ಕುರುಬ ಸಮಾಜದ ಮುಖಂಡರು ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ, ಕಾಂತೇಶ್ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಶನಿವಾರ (ಮಾ.09) ರಂದು ಅವರ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕಳುಹಿಸಿದ್ದೆ. ದೆಹಲಿಯಲ್ಲಿ ಅಮಿತ್ ಶಾ (Amit Shah) ಅವರ ಜೊತೆ ಚರ್ಚಿಸಲು ನನ್ನ ಜೊತೆ ಈಶ್ವರಪ್ಪ ಬರಲಿ ಎಂದರು.
ನಾನು ಬೇರೆ ಅಲ್ಲ ಈಶ್ವರಪ್ಪ ಬೇರೆ ಅಲ್ಲ. ನಾನೇ ಖುದ್ದಾಗಿ ಅವರ ಜೊತೆಗೆ ನಿಲ್ಲುತ್ತೇನೆ. ಕಾಂತೇಶ್ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು: ಅನಂತ್ ಕುಮಾರ್ ಹೆಗಡೆ
ಇನ್ನು ಇಂದು ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ಮುಂದೂಡಲಾಗಿದ್ದು, ಈ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಸಮಿತಿ ನಾಳೆ ಮತ್ತೆ ಸಭೆಯನ್ನ ಕರೆಯಬಹುದು. ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಬಹುದು. ಹಾಗಾಗಿ ಒಂದು ದಿನ ಮುಂದೂಡಿದ್ದಾರೆ ಎಂದು ತಿಳಿಸಿದರು.
ಹಾವೇರಿಗಾಗಿ ಪೈಪೋಟಿ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಟಿಕೆಟ್ಗಾಗಿ ಲಾಬಿ ಶುರುವಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಬಿಜೆಪಿಯ ಬಿಸಿ ಪಾಟೀಲ್, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಇನ್ನು ಮಾಜಿ ಸಚಿವ ಬಿಸಿ ಪಾಟೀಲ್ ಟಿಕೆಟ್ ನನಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:44 am, Sun, 10 March 24




