ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನು​ ಗೆಲ್ಲಿಸುವ ಹೊಣೆ ಜಾರಕಿಹೊಳಿಗೆ, ಪ್ರಿಯಾಂಕಾರನ್ನ ಗೆಲ್ಲಿಸುವ ಜವಾಬ್ದಾರಿ ಹೆಬ್ಬಾಳ್ಕರ್​ಗೆ !

| Updated By: ವಿವೇಕ ಬಿರಾದಾರ

Updated on: Mar 24, 2024 | 10:38 AM

ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಗೆಲ್ಲಿಸುವ ಹೊಣೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಇದೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ​ಪುತ್ರ ಮೃಣಾಲ್‌ ಹೆಬ್ಬಾಳ್ಕರ್​ ಅವರನ್ನು ಗೆಲ್ಲಿಸುವ ಜವಾಬ್ದಾರಿ ಸಚಿವ ಸತೀಶ್​ ಜಾರಕಿಹೊಳಿ ಹೆಗಲ ಮೇಲಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನನ್ನು​ ಗೆಲ್ಲಿಸುವ ಹೊಣೆ ಜಾರಕಿಹೊಳಿಗೆ, ಪ್ರಿಯಾಂಕಾರನ್ನ ಗೆಲ್ಲಿಸುವ ಜವಾಬ್ದಾರಿ ಹೆಬ್ಬಾಳ್ಕರ್​ಗೆ !
ಸತೀಶ್​ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​
Follow us on

ಬೆಳಗಾವಿ, ಮಾರ್ಚ್​​ 24: ಬೆಳಗಾವಿ ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗಿದೆ. ಬೆಳಗಾವಿ (Belagavi) ಜಿಲ್ಲೆಯಲ್ಲಿ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ಕುಟುಂಬ ಮಧ್ಯದ ಸಮರ ಗೌಪ್ಯವಾಗಿಯಂತು ಉಳಿದಿಲ್ಲ. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್​​ ಜಾರಕಿಹೊಳಿ (Satish Jarkiholi) ​ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)​​ ನಡುವೆ ಕಳೆದ ವರ್ಷ ವಾಗ್ಯುದ್ದ ನಡೆದಿದ್ದು, ಕಾಂಗ್ರೆಸ್ ವರಿಷ್ಠರ ಮಧ್ಯ ಪ್ರವೇಶದಿಂದ ಇಬ್ಬರು ತಣ್ಣಗಾಗಿದ್ದಾರೆ. ಪ್ರತಿಷ್ಠೆಯ ಗುದ್ದಾಟದಲ್ಲಿರುವ ಇಬ್ಬರಿಗೆ ಇದೀಗ ಸವಾಲೊಂದು ಎದುರಾಗಿದೆ.

ಲೋಕಸಭೆ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳು ಸ್ಪರ್ಧಿಸುತ್ತಿದ್ದಾರೆ. ಆದರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹೊಣೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೊತ್ತಿದ್ದಾರೆ. ಇನ್ನು ಬೆಳಗಾವಿ ಕ್ಷೇತ್ರದಿಂದ ಕಾಂಗ್ರೆಸ್ ‌ಅಭ್ಯರ್ಥಿಯಾಗಿ ಸಚಿವೆ ಲಕ್ಷ್ಮೀ ಪುತ್ರ ಮೃಣಾಲ್‌ ಹೆಬ್ಬಾಳ್ಕರ್​ ಕಣಕ್ಕೆ ಇಳಿದಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹೊಣೆಯನ್ನು ಸಚಿವ ಸತೀಶ್​ ಜಾರಕಿಹೊಳಿ ಹೊತ್ತಿದ್ದಾರೆ.

ಈ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಗೆಲ್ಲಿಸುವ ಹೊಣೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಇದೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ​ಪುತ್ರ ಮೃಣಾಲ್‌ ಹೆಬ್ಬಾಳ್ಕರ್​ ಅವರನ್ನು ಗೆಲ್ಲಿಸುವ ಜವಾಬ್ದಾರಿ ಸಚಿವ ಸತೀಶ್​ ಜಾರಕಿಹೊಳಿ ಹೆಗಲ ಮೇಲಿದೆ. ಆದರೆ ಸಚಿವರಿಬ್ಬರು ರಾಜಕೀಯವಾಗಿ ಕಿತ್ತಾಡುತ್ತಿದ್ದು, ಮಕ್ಕಳ್ಳನ್ನು ಗೆಲ್ಲಿಸುತ್ತಾ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಅಲ್ಲದೆ ಇದು ಇದು ರಾಜ್ಯ ಕಾಂಗ್ರೆಸ್​ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ​

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್​ ಗೆಲ್ಲಬೇಕೆಂದರೇ ಮೊದಲು ಸಚಿವ ಸತೀಶ ಜಾರಿಕಿಹೊಳಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅಲ್ಲದೆ ಬಿಜೆಪಿಯಲ್ಲಿ ಇರುವ ಜಾರಕಿಹೊಳಿ ಬ್ರದರ್ಸ್ ಸವಾಲ್​ನ್ನೂ ಎದುರಿಸಬೇಕು. ಇನ್ನು ಯಾರೇ ಅಭ್ಯರ್ಥಿಯಾದರೂ ಬಿಜೆಪಿ ಗೆಲ್ಲಬೇಕು ಎಂದು ಜಾರಕಿಹೊಳಿ‌ ಬ್ರದರ್ಸ್ ತಂತ್ರ ಹೆಣೆಯುತ್ತಿದ್ದಾರೆ. ಜಾರಕಿಹೊಳಿ ಬ್ರದರ್ಸ್​ ಈಗಾಗಲೆ ಗೋಕಾಕ್, ಅರಬಾವಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಜಾರಕಿಹೊಳಿ ಬ್ರದರ್ಸ್​ ಈ ಬಾರಿ ಹೆಬ್ಬಾಳ್ಕರ್ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪುತ್ರಿ ಪ್ರಿಯಾಂಕಾ ಹೆಸರು ಚರ್ಚೆ; ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಇನ್ನು ಚಿಕ್ಕೋಡಿಯಲ್ಲಿ ಲಿಂಗಾಯತ ನಾಯಕರನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಒಗ್ಗೂಡಿಸುತ್ತಿದ್ದಾರೆ. ಪ್ರಕಾಶ್ ಹುಕ್ಕೇರಿ, ಲಕ್ಷ್ಮಣ್ ಸವದಿ ಹಾಗೂ ರಾಜು ಕಾಗೆ ಲಿಂಗಾಯತ ನಾಯಕರನ್ನು ವಿಶ್ವಾಸಕ್ಕೆ ಪಡೆದರೆ ಮಾತ್ರ ಪ್ರಿಯಾಂಕಾ​​ ಜಾರಕಿಹೊಳಿಗೆ ಗೆಲುವು ಸುಲಭವಾಗಲಿದೆ. ಮಕ್ಕಳನ್ನು ಗೆಲ್ಲಿಸಲು ಸಚಿವರಾದ ಜಾರಕಿಹೊಳಿ, ಹೆಬ್ಬಾಳ್ಕರ್ ತಂತ್ರ ಪ್ರತಿತಂತ್ರ ಹೆಣೆಯುತ್ತಿದ್ದಾರೆ.

ಒಂದು ವೇಳೆ ಬೆಳಗಾವಿಯಲ್ಲಿ ಮೃಣಾಲ್​ ಹೆಬ್ಬಾಳ್ಕರ್​ಗೆ ಹಿನ್ನಡೆಯಾದರೆ ಚಿಕ್ಕೋಡಿಯಲ್ಲಿ ಒಳ ಏಟು ಬೀಳಲಿದೆ. ಅಥವಾ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿಗೆ ಹಿನ್ನಡೆಯಾದರೆ ಬೆಳಗಾವಿಯಲ್ಲಿ ಒಳೇಟು ಬೀಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಸಚಿವರಾದ ಸತೀಶ್​​ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್​ ಪರಸ್ಪರ ಧ್ವೇಷ ಮರೆತು ಮಕ್ಕಳನ್ನು ಗೆಲ್ಲಿಸುತ್ತಾರಾ ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ