ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ: ಪ್ರಹ್ಲಾದ್​ ಜೋಶಿ

ಉಹಾಪೋಹಗಳಿಗೆ ನಾನು ಉತ್ತರಿಸಲ್ಲ. ಎರಡು ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ. ಎಂಟು ಸಲ ಗೆದ್ದವರಿಗೂ ಟಿಕೆಟ್ ಕೊಡಲಾಗಿದೆ. ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ: ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Mar 10, 2024 | 12:45 PM

ಹುಬ್ಬಳ್ಳಿ, ಮಾರ್ಚ್​ 10: ಲೋಕಸಭೆ ಚುನಾವಣೆ (Lok Sabha Election) ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್​​ ಮೈಸೂರಿನಲ್ಲಿ (Mysore) ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್​ ಸಿಂಹ (Pratap Simha) ಅವರಿಗೆ ಟಿಕೆಟ್​ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಮಾತನಾಡಿ, ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ ಎಂದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ​ಉಹಾಪೋಹಗಳಿಗೆ ನಾನು ಉತ್ತರಿಸಲ್ಲ. ಎರಡು ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ. ಎಂಟು ಸಲ ಗೆದ್ದವರಿಗೂ ಟಿಕೆಟ್ ಕೊಡಲಾಗಿದೆ. ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ ಎಂದರು.

ಬಿಸಿ ಪಾಟೀಲ್ ಟಿಕೆಟ್​ಗಾಗಿ ಪಟ್ಟು ಹಿಡಿದ ವಿಚಾರವಾಗಿ ಮಾತನಾಡಿದ ಅವರು, ಇದನ್ನು ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಎಲ್ಲರ ಜೊತೆ ಮಾತನಾಡುತ್ತಾರೆ. ನಮ್ಮ ರಾಷ್ಟ್ರೀಯ ನಾಯಕರು ಟಿಕೆಟ್ ತೀರ್ಮಾನ ಆದ ಮೇಲೆ ಸಮಾಧಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು ಬಿಎಸ್​ ಯಡಿಯೂರಪ್ಪ ನಾವು (ಪ್ರಹ್ಲಾದ್​ ಜೋಶಿ) ದೆಹಲಿಗೆ ಹೋಗಬೇಕಿತ್ತು. ಎಲೆಕ್ಷನ್ ಕಮೀಟಿ ಮೀಟಿಂಗ್ ಮುಂದಕ್ಕೆ ಹೋಗಿದೆ ಎಂದರು.

ಇದನ್ನೂ ಓದಿ: ಮೈಸೂರು ಸಂಸದ ಪ್ರತಾಪ್​ ಸಿಂಹಗೆ ಟಿಕೆಟ್​ ಮಿಸ್​?: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಚ್ಚರಿ ಹೇಳಿಕೆ

ಹುಬ್ಬಳ್ಳಿಯಲ್ಲಿ ವಿಕಸಿತ ಭಾರತ ಅಭಿಯಾನಕ್ಕೆ‌ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಮಗೆ ಇನ್ನೊಂದು ಟರ್ಮಿನಲ್ ಅವಶ್ಯಕತೆ ಇತ್ತು. ಹೀಗಾಗಿ ನಾನು ಪ್ರಧಾನಿ ಮೋದಿಯವರಿಗೆ, ಜೋತಿರಾಧ್ಯ ಸಿಂಧ್ಯಾ ಅವರಿಗೆ ವಿನಂತಿ ಮಾಡಿದ್ದೆ. ಇವತ್ತು ಟರ್ಮಿನಲ್​ಗೆ ಶಂಕು ಸ್ಥಾಪನೆ ಆಗಿದೆ. ಬೆಂಗಳೂರಿನಂತೆ ಇಲ್ಲೂ ಕೂಡಾ ಟರ್ಮಿನಲ್ ನಿರ್ಮಾಣ ಮಾಡಲಾಗತ್ತೆ. ಇನ್ನೂ ಹೆಚ್ಚು ಏರಲೈನ್ಸ್ ಸರ್ವಿಸ್ ಸೇರಲಿವೆ ಎಂದು ತಿಳಿಸಿದರು.

ವಿಕಸಿತ ಭಾರತದ ಕಲ್ಪನೆಯಿಂದ ಎಲ್​ಇಡಿ ವೀಡಿಯೋ ವಾಹನಗಳು ಎಲ್ಲೆಡೆ ಸಂಚರಿಸುತ್ತಿವೆ. ಮೋದಿಯವರ ಕಾರ್ಯಗಳನ್ನು ದೇಶದ ಜನತೆಗೆ ತಿಳಿಸುತ್ತಿದ್ದೇವೆ. ಭಾರತ ಅಭಿವೃದ್ದಿ ಶೀಲ ದೇಶ ಎಂದು ಮನವರಿಕೆ ಮಾಡುವ ಉದ್ದೇಶದಿಂದ ಈ‌ ವಾಹನಗಳು‌ ಸಂಚರಿಸುತ್ತಿವೆ. ದೇಶಾದ್ಯಂತ ಮೋದಿಯವರ ಸಾಧನೆಗಳನ್ನು ತಿಳಿಯಪಡಿಸಲಾಗುತ್ತಿದೆ ಎಂದರು.

ವಿಕಸಿತ ಭಾರತ ಅಭಿಯಾನ ಚಾಲನೆ ಕಾರ್ಯಕ್ರಮದಲ್ಲಿ‌ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್ ಅವರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ