Sumalatha Ambareesh: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಎಂದು ಸಂಸದೆ ಸುಮಲತಾ ಅಂಬರೀಶ್​ ಉತ್ತರಿಸಿದ್ದಾರೆ.

Sumalatha Ambareesh: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ
ಸಂಸದೆ ಸುಮಲತಾ ಅಂಬರೀಶ್​
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 03, 2024 | 1:19 PM

ಮಂಡ್ಯ, ಏಪ್ರಿಲ್​ 03: ನಾನು ಈ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ (BJP) ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ​ ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು.

ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ. ಜಿಲ್ಲೆ ಅಭಿವೃದ್ಧಿ ಮಾಡುವುದಷ್ಟೇ ನನ್ನ ಮನಸ್ಸಿನಲ್ಲಿದ್ದಿದ್ದು. ಕೆಆರ್​ಎಸ್​ ಡ್ಯಾಂ ಸಂರಕ್ಷಣೆ, ಅಕ್ರಮ ಗಣಿಗಾರಿಕೆ ವಿರುದ್ಧ ಯುದ್ಧವನ್ನೇ ಮಾಡಿದ್ದೇನೆ. ಮೈಷುಗರ್​ ಕಾರ್ಖಾನೆಗಾಗಿ ಎರಡು ವರ್ಷ ಹೋರಾಡಿದ್ದೇನೆ ಎಂದು ತಿಳಿಸಿದರು.

2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ನಿಂತುಕೊಳ್ಳೊಲು ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್​ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರು, ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದರು.

ಇದನ್ನೂ ಓದಿ: ಸುಮಲತಾಗೋಸ್ಕರ ಕೈ ಸರ್ಜರಿ ಮುಂದೂಡಿಕೊಂಡ ದರ್ಶನ್

ಸುಮಲತಾ ಅವಶ್ಯಕತೆ ನಮಗೆ ಬೇಕಿಲ್ಲ ಅಂತ ಕಾಂಗ್ರೆಸ್​​ನ ಪ್ರಮುಖ ನಾಯಕರು ಹೇಳಿದರು. ನನಗೆ ಗೌರವ ಇಲ್ಲದ ಕಡೆ ಹೋಗಿ ಎಂದು ಒತ್ತಾಯಿಸಬೇಡಿ. ನಾನು ಕಾಂಗ್ರೆಸ್​ಗೆ ಹೋಗಲ್ಲ. ಕಾಂಗ್ರೆಸ್​ನವರು ಬೇಡ ಎಂದಿದ್ದಾರೆ, ನಾನು ಹೋಗಲ್ಲ. ಕೇಂದ್ರ ಸರ್ಕಾರ ನಾಲ್ಕು ಸಾವಿರ ಕೋಟಿ ಅನುದಾನ ನೀಡಿದೆ. ಪ್ರತಿ ವಿಷಯದಲ್ಲೂ ನನ್ನನ್ನು ವಿಶ್ವಾಸಕ್ಕೆ ಪಡೆಯುತ್ತಿದ್ದರು. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು ಎಂದು ತಿಳಿಸಿದ್ದಾರೆ.

ಸಂಸದೆ ಸ್ಥಾನ ಶಾಶ್ವತವಲ್ಲ. ಮತ್ತೊಬ್ಬರು ಸಂಸದರಾಗಿ ಬರುತ್ತಾರೆ. ಆದರೆ ನಾನು ಮಂಡ್ಯದ ಸೊಸೆಯಾಗಿ ಕೊನೆಯವರೆಗೂ ಉಳಿಯುತ್ತೇನೆ. ಬದಲಾದ ಪರಿಸ್ಥಿತಿ, ಸನ್ನಿವೇಶವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಹಠ ಸಾಧನೆ ಮಾಡುವ ಉದ್ದೇಶ ಇದ್ದರೇ ಪಕ್ಷೇತರ ಸ್ಪರ್ಧೆ ಮಾಡಬಹುದು. ಅದರಿಂದ ಯಾರಿಗೆ ಲಾಭ? ನನ್ನ ಸ್ವಾರ್ಥ ಏನು ಇಲ್ಲ, ಲಾಭಕ್ಕಾಗಿ ಯೋಚಿಸಿದರೇ ಬೇರೆ ಕ್ಷೇತ್ರ ಆಯ್ಕೆ ಮಾಡಬಹುದಿತ್ತು. ಬಂದ ಅವಕಾಶಗಳನ್ನು ಮಂಡ್ಯಕ್ಕಾಗಿ ಬಿಟ್ಟಿದ್ದೇನೆ. ರಾಜಕೀಯ ಮಾಡಿದರೇ ಮಂಡ್ಯದಲ್ಲಿ ಮಾತ್ರ ಅಂತ ನಿರ್ಧಾರ ಮಾಡಿದ್ದೇನೆ. ಅಸಂಖ್ಯಾತ ಅಂಬರೀಶ್ ಅಭಿಮಾನಿಗಳನ್ನ ಬಿಟ್ಟು ಹೋದರೆ ಮಂಡ್ಯ ಸೊಸೆ ಅನಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Wed, 3 April 24

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್