AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ 2024: ಉತ್ತರ ಕನ್ನಡದಲ್ಲಿ ತೇಲಿ ಬಂತು ಮತ್ತೊಂದು ಹೆಸರು, ಚಕ್ರವರ್ತಿ ಸೂಲಿಬೆಲೆಗೆ ಟಿಕೆಟ್​ ಸಾಧ್ಯತೆ

ಯುವಾ ಬ್ರಿಗೇಡ್​ ಸ್ಥಾಪಕ, ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ. ಚಕ್ರವರ್ತಿ ಸೂಲಿಬೆಲೆ ಮೂಲತಃ ಉತ್ತರ ಕನ್ನಡ ಜಿಲ್ಲೆಯವರೇ ಆಗಿದ್ದು, ಬಲಪಂಥೀಯ ಚಿಂತಕರಾಗಿದ್ದಾರೆ. ಇಷ್ಟೇ ಅಲ್ಲದೆ ಬಿಜೆಪಿ ಹೈಕಮಾಂಡ್​​ ನಾಯಕರ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದಾರೆ.ಬಿಜೆಪಿ ಹೈಕಮಾಂಡ್ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚಕ್ರವರ್ತಿ ಸೂಲಿಬೇಲೆ ಹೆಸರು ಘೋಷಿಸುತ್ತಾ ಕಾದು ನೋಡಬೇಕಿದೆ.

ಲೋಕಸಭೆ ಚುನಾವಣೆ 2024: ಉತ್ತರ ಕನ್ನಡದಲ್ಲಿ ತೇಲಿ ಬಂತು ಮತ್ತೊಂದು ಹೆಸರು, ಚಕ್ರವರ್ತಿ ಸೂಲಿಬೆಲೆಗೆ ಟಿಕೆಟ್​ ಸಾಧ್ಯತೆ
ಚಕ್ರವರ್ತಿ ಸೂಲಿಬೆಲೆ
ಕಿರಣ್​ ಹನಿಯಡ್ಕ
| Edited By: |

Updated on:Mar 11, 2024 | 2:03 PM

Share

ಉತ್ತರ ಕನ್ನಡ, ಮಾರ್ಚ್​ 11: ಚುನಾವಣೆ ಹತ್ತಿರವಾಗುತ್ತಿದ್ದಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada Lok Sabha Constituency) ಬಿಜೆಪಿ (BJP) ಟಿಕೆಟ್​ಗಾಗಿ ಲಾಬಿ ಜೋರಾಗಿದೆ. ಟಿಕೆಟ್​ಗಾಗಿ ಸಂಸದ ಅನಂತಕುಮಾರ್​ ಹೆಗಡೆ (Anantkumar Hegde) ಮತ್ತು ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಅನಂತಕುಮಾರ್ ಹೆಗಡೆ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಯಾವುದೇ ಸರ್ಕಾರಿ, ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. ಮುಖ್ಯವಾಗಿ ವಿಧಾನಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಜಿಲ್ಲೆಗೆ ಬಂದಿದ್ದರೂ ಸಹ ಅನಂತಕುಮಾರ್ ಹೆಗಡೆ ಮಾತ್ರ ಸುಳಿದಿರಲಿಲ್ಲ. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೊಮ್ಮೆ ಟಿಕೆಟ್​ಗಾಗಿ ಮುನ್ನಲೆಗೆ ಬಂದಿದ್ದಾರೆ.

ಇನ್ನು ಅತ್ತ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ನಿರಾಶೆಯಲ್ಲಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಲೋಕಸಭೆ ಟಿಕೆಟ್​ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಇವರಿಬ್ಬರ ಹಗ್ಗ-ಜಗ್ಗಟಾದ ಮಧ್ಯೆ ಮತ್ತೊಂದು ಹೆಸರು ಮುನ್ನಲೆಗೆ ಬಂದಿದೆ. ಅದು ಯುವಾ ಬ್ರಿಗೇಡ್​ ಸ್ಥಾಪಕ, ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele). ಚಕ್ರವರ್ತಿ ಸೂಲಿಬೆಲೆ ಮೂಲತಃ ಉತ್ತರ ಕನ್ನಡ ಜಿಲ್ಲೆಯವರೇ ಆಗಿದ್ದು, ಬಲಪಂಥೀಯ ಚಿಂತಕರಾಗಿದ್ದಾರೆ. ಇಷ್ಟೇ ಅಲ್ಲದೆ ಬಿಜೆಪಿ ಹೈಕಮಾಂಡ್​​ ನಾಯಕರ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದಾರೆ. ಉತ್ತರ ಕನ್ನಡ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಅಭ್ಯರ್ಥಿಗಳ ರೇಸ್​ನಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ಹೆಸರೂ ಕೇಳಿಬಂದಿದೆ. ಅನಂತ ಕುಮಾರ್ ಹೆಗಡೆಗೆ ಟಿಕೆಟ್ ನೀಡದಿದ್ದಲ್ಲಿ ಹಿಂದುತ್ವದ ಆಧಾರದಲ್ಲೇ ಸೂಲಿಬೆಲೆಗೆ ಟಿಕೆಟ್ ನೀಡವ ಸಾಧ್ಯಾ ಸಾಧ್ಯತೆಗಳ ಬಗ್ಗೆ ಚರ್ಚೆ ಆಗಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಇದನ್ನೂ ಓದಿ: ಅನಂತಕುಮಾರ್​ ಹೆಗಡೆಯ ಸಂವಿಧಾನ ತಿದ್ದುಪಡಿ ಹೇಳಿಕೆ ವೈಯಕ್ತಿಕ: ಅಂತರ ಕಾಯ್ದುಕೊಂಡ ಬಿಜೆಪಿ

ಅನಂತ ಕುಮಾರ್ ಹೆಗಡೆಗೆ ಪರ್ಯಾಯವಾಗಿ ಸೂಲಿಬೆಲೆ ಎಷ್ಟು ಸೂಕ್ತ ಎಂದು ಬಿಜೆಪಿ ರಾಜ್ಯ ನಾಯಕರು ಅಭಿಪ್ರಾಯ ಹೇಳಿದ್ದಾರಂತೆ. ಚಕ್ರವರ್ತಿ ಸೂಲಿಬೆಲೆ ಕೆಲವು ದಿನಗಳ ಹಿಂದೆ ಆರ್​ಎಸ್​ಎಸ್ ಕಚೇರಿಗೆ ಭೇಟಿ ನೀಡಿದ್ದರಂತೆ. ಸೂಲಿಬೆಲೆಗೆ ಸಾಂಭವ್ಯ ಟಿಕೆಟ್ ಬಗ್ಗೆ ರಾಜ್ಯ ನಾಯಕರ ಮಧ್ಯೆ ಚರ್ಚೆ ನಡೆದಿದೆ.

ಅನಂತಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಿಸಲ್ಪಟ್ಟರೆ ಹಿಂದುತ್ವದ ಆಧಾರದಲ್ಲೇ ಬೇರೆಯವರಿಗೆ ಟಿಕೆಟ್ ನೀಡಬೇಕಾಗುತ್ತದೆ. ಹೀಗಾಗಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆಗೆ ಸೂಲಿಬೆಲೆ ಹೆಸರು ಚಾಲ್ತಿಗೆ ಬಂದಿದೆ. ಸೂಲಿಬೆಲೆಗೆ ಟಿಕೆಟ್ ನೀಡಿದರೆ ಹಿಂದೂ ಮತಗಳು ಚದುರುವುದಿಲ್ಲ ಎಂಬ ಭಾವನೆ ಹಿನ್ನೆಲೆಯಲ್ಲಿ ಟಿಕೆಟ್​ ನೀಡುವ ಚಿಂತನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚಕ್ರವರ್ತಿ ಸೂಲಿಬೇಲೆ ಹೆಸರು ಘೋಷಿಸುತ್ತಾ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:44 pm, Mon, 11 March 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು