AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election 2024: 3 ಮಾಜಿ ಸಿಎಂ ಸ್ಪರ್ಧೆ ಬಗ್ಗೆ ಚರ್ಚೆ, ಸದಾನಂದ ಗೌಡರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ; ಆರ್​ ಅಶೋಕ್​

Lok Sabha Election 2024: ಕೆಎಸ್​​​ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಬೇಕು ಅಂತ ಚರ್ಚೆಯಂತೂ ಆಗಿದೆ. ಬಸವರಾಜ ಬೊಮ್ಮಾಯಿ ಕೂಡಾ ಈಶ್ವರಪ್ಪ ಮಗನಿಗೆ ಟಿಕೆಟ್ ಕೊಡುವ ಬಗ್ಗೆ ಹೇಳಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೊಡಲೂಬಹುದು ಅಥವಾ ಹೊಸಬರನ್ನು ಕಣಕ್ಕಿಳಿಸಲೂಬಹುದು ಎಂದು ವಿಪಕ್ಷ ನಾಯಕ ಆರ್ ಅಶೋಕ್​ ಹೇಳಿದರು.

Lok Sabha Election 2024: 3 ಮಾಜಿ ಸಿಎಂ ಸ್ಪರ್ಧೆ ಬಗ್ಗೆ ಚರ್ಚೆ, ಸದಾನಂದ ಗೌಡರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ; ಆರ್​ ಅಶೋಕ್​
ಆರ್​. ಅಶೋಕ್​
TV9 Web
| Edited By: |

Updated on:Mar 13, 2024 | 6:22 PM

Share

ಬೆಂಗಳೂರು, ಮಾರ್ಚ್​ 13: ಲೋಕಸಭೆ ಚುನಾವಣೆಗೆ (Lok Sbha Election) ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ಎಲ್ಲ ರಾಜಕೀಯ ಪಕ್ಷಗಳು ತಯಾರಿ ಜೋರಾಗಿಯೇ ನಡೆಸಿವೆ. ಇನ್ನು ಭಾರತೀಯ ಜನತಾ ಪಾರ್ಟಿಗೆ (BJP) ಕರ್ನಾಟಕದಲ್ಲಿ ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಈ ಸಂಬಂಧ ಸೋಮವಾರ (ಮಾ.11) ತಡರಾತ್ರಿವರೆಗೂ ದೆಹಲಿ ಸಭೆ ನಡೆದಿದ್ದು, ಪ್ರಸ್ತುತ 12 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್​ ಆಗಿವೆ ಎನ್ನಲಾಗುತ್ತಿವೆ. ಇನ್ನು ಸಭೆಯಲ್ಲಿ ಸಾಕಷ್ಟು ಚರ್ಚೆಯಲ್ಲಿರುವ ಉಡುಪಿ-ಚಿಕ್ಕಮಗಳೂರು, ಮೈಸೂರು-ಕೊಡಗು, ಹಾವೇರಿ, ಬೆಂಗಳೂರು ಉತ್ತರ ಮತ್ತು ಮಂಡ್ಯ ಕ್ಷೇತ್ರಗಳ ಬಗ್ಗೆಯೂ ಚರ್ಚೆಯಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್​ ಅಶೋಕ್​ ಮಾತನಾಡಿ ಮೂವರು ಮಾಜಿ ಮುಖ್ಯಮಂತ್ರಿಗಳ ಸ್ಪರ್ಧೆ ಬಗ್ಗೆಯೂ ಚರ್ಚೆಯಾಗಿದೆ. ಎಷ್ಟು ಜನರಿಗೆ ಟಿಕೆಟ್ ಕೊಡುತ್ತಾರೆ ಗೊತ್ತಿಲ್ಲ ಎಂದರು.

ಇನ್ನೂ ಸದಾನಂದ ಗೌಡರಿಗೆ ಟಿಕೆಟ್ ಕೊಡಬೇಕು ಅಂತ ನಾವೆಲ್ಲರೂ ಹೇಳಿದ್ದೇವೆ. ಸದಾನಂದ ಗೌಡರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಪ್ರತಾಪ್​ ಸಿಂಹ ಧೃತಿ ಕೆಳೆದುಕೊಳ್ಳುವುದು ಬೇಡ. ಇನ್ನೂ ಘೋಷಣೆ ಅಗಿಲ್ಲ, ಚರ್ಚೆ ನಡೆಯುತ್ತಿದೆ. ಮೈಸೂರು ಮಹಾರಾಜರಿಗೆ ಟಿಕೆಟ್ ಕೊಡುತ್ತಾರೆ ಅಂತ ನನಗೆ ಗೊತ್ತಿಲ್ಲ. ನಾನಂತೂ ಅವರನ್ನು ಸಂಪರ್ಕ ಮಾಡಿಲ್ಲ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾಧ್ಯಕ್ಷರು ಹೇಳಿದ್ದಾರೆ. ಪ್ರತಾಪ್​ ಸಿಂಹ ಕೂಡ ಅದೇ ಮಾತು ಹೇಳಿದ್ದಾರೆ. ತಾಳ್ಮೆಯಿಂದ ಕಾಯುವುದು ಒಳ್ಳೆಯದು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕೊನೆಯವರೆಗೂ ಕಾಯುವುದು ಒಳ್ಳೆಯದು ಎಂದರು.

ಕೆಎಸ್​​​ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಬೇಕು ಅಂತ ಚರ್ಚೆಯಂತೂ ಆಗಿದೆ. ಬಸವರಾಜ ಬೊಮ್ಮಾಯಿ ಕೂಡಾ ಈಶ್ವರಪ್ಪ ಮಗನಿಗೆ ಟಿಕೆಟ್ ಕೊಡುವ ಬಗ್ಗೆ ಹೇಳಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೊಡಲೂಬಹುದು ಅಥವಾ ಹೊಸಬರನ್ನು ಕಣಕ್ಕಿಳಿಸಲೂಬಹುದು. ದಕ್ಷಿಣ ಕನ್ನಡದಲ್ಲಿ ಎರಡೂ ಅವಕಾವಿದೆ. ಸ್ಥಳೀಯ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ ಒಕ್ಕಲಿಗರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಘೋಷಣೆ ಆದ ಮೇಲೆ ಸಾಮಾಜಿಕ ನ್ಯಾಯ ಏನು ಅಂತಾ ಗೊತ್ತಾಗುತ್ತದೆ. ಎಲ್ಲವನ್ನೂ ಪರಿಗಣಿಸಿ ಟಿಕೆಟ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ 2ನೇ ಪಟ್ಟಿ ಪ್ರಕಟ; ಕಮಲನಾಥ್, ಅಶೋಕ್ ಗೆಹ್ಲೋಟ್ ಪುತ್ರರಿಗೆ ಸ್ಥಾನ 

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಚರ್ಚೆ ಮುಗಿದಿದ್ದು, ಘೋಷಣೆ ಮಾತ್ರ ಬಾಕಿ ಇದೆ. ಐದಾರು ರಾಜ್ಯಗಳ ಪಟ್ಟಿ ಕೂಡ ಇರುವ ಕಾರಣ ನಮ್ಮ ರಾಜ್ಯದ್ದೂ ಸೇರಿಸಿ ಬಿಡುಗಡೆ ಆಗಬಹುದು. ಬಹುತೇಕ ಎರಡು ಹಂತದಲ್ಲಿ ಬಿಡುಗಡೆ ಆಗಬಹುದು. ಆಕಾಂಕ್ಷಿಗಳ ಪರ, ವಿರೋಧ ಗಮನಕ್ಕೆ ಬಂದಿದೆ. ಚುನಾವಣಾ ಅಲೆಯಲ್ಲಿ ಗೆಲ್ಲಬೇಕು ಅಂತ ಎಲ್ಲರಿಗೂ ಇದ್ದೇ ಇರುತ್ತದೆ. ಯಾರೂ ಕೂಡಾ ಧೃತಿಗೆಡುವುದು ಬೇಡ, ಕೊನೆಯ ಕ್ಷಣದವರೆಗೂ ನಿಮ್ಮ ಪ್ರಯತ್ನ ಮುಂದುವರಿಸಿ. ಗೆಲ್ಲುವ ಮಾನದಂಡ ಮತ್ತು ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಭರವಸೆ ನೀಡಿದರು.

ಬಿಜೆಪಿಗೆ ಕಗ್ಗಂಟಾದ ನಾಲ್ಕು ಕ್ಷೇತ್ರಗಳು

ಉಡುಪಿ-ಚಿಕ್ಕಮಗಳೂರು, ಮೈಸೂರು-ಕೊಡಗು, ಹಾವೇರಿ, ಬೆಂಗಳೂರು ಉತ್ತರ ಮತ್ತು ಮಂಡ್ಯ ಕ್ಷೇತ್ರದ ಟಿಕೆಟ್​ ಹಂಚಿಕೆ ಬಿಜೆಪಿ ವರಿಷ್ಠರಿಗೆ ತಲೆನೋವಾಗಿದೆ. ಈ ನಾಲ್ಕು ಕ್ಷೇತ್ರದಲ್ಲಿ ಟಿಕೆಟ್​ ವಿಚಾರವಾಗಿ ಸಾಕಷ್ಟು ಹಗ್ಗ-ಜಗ್ಗಾಟ ನಡೆದಿದೆ. ಬೆಂಗಳೂರು ಉತ್ತರದಿಂದ ಹಾಲಿ ಸಂಸದರಾದ ಶೋಭಾ ಕರಂದ್ಲಾಜೆ, ಸದಾನಂದಗೌಡ, ಮಂಡ್ಯದಿಂದ ಹಾಲಿ ಸಂಸದೆ ಸುಮಲತಾ ಅಂಬರೀಶ್​ ಮತ್ತು ಬಿಜೆಪಿ ಮಿತ್ರ ಪಕ್ಷ ಜೆಡಿಎಸ್​ ಟಿಕೆಟ್​ಗಾಗಿ ಪಟ್ಟು ಹಿಡಿದಿದೆ.

ಇನ್ನು ಹಾವೇರಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್​, ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​, ಮಾಜಿ ಸಚಿವ ಬಿಸಿ ಪಾಟೀಲ್​ ಹೆಸರು ಮುನ್ನಲೆಯಲ್ಲಿವೆ. ಆದರೆ ಬಸವರಾಜ ಬೊಮ್ಮಾಯಿ ಹೆಸರು ಫೈನಲ್​ ಆಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಮೈಸೂರಿನಲ್ಲಿ ಹಾಲಿ ಸಂಸದ ಪ್ರತಾಪ್​ ಸಿಂಹಗೆ ಟಿಕೆಟ್​ ಕೈ ತಪ್ಪುವ ಸಾಧ್ಯತೆ ಇದ್ದು, ರಾಜವಂಶಸ್ಥ ರಾಜ ಯದುವೀರ್​ ಒಡೆಯರ್​ ಅವರಿಗೆ ಟಿಕೆಟ ಸಿಗುವುದು ಪಕ್ಕಾ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:18 pm, Wed, 13 March 24

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ