ಲೋಕಸಭೆ ಚುನಾವಣೆ 2024: ಮಾಧುಸ್ವಾಮಿ ಮನೆಗೆ ಕಾಂಗ್ರೆಸ್​ ಅಭ್ಯರ್ಥಿ ಭೇಟಿ, ತುಮಕೂರು ಬಿಜೆಪಿ ಘಟಕದಲ್ಲಿ ಸಂಚಲನ

ರಾಜ್ಯ ಬಿಜೆಪಿಯಲ್ಲಿ ಜೆಸಿ ಮಾಧುಸ್ವಾಮಿ ಚಿಂತಕರ ಚಾವಡಿಯ ಪ್ರಮುಖ ನಾಯಕರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಪಕ್ಷಗಳ ವಾಗ್ದಾಳಿಗೆ ಗುರಾಣಿಯಂತೆ ಬಳಕೆಯಾಗುತ್ತಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಜೆಸಿ ಮಾಧುಸ್ವಾಮಿ ಅವರು ರಾಜಕೀಯದಿಂದ ಸ್ವಲ್ಪ ದೂರ ಉಳಿದಿದ್ದರು. ಬಳಿಕ ಬಿಎಸ್​ ಯಡಿಯೂರಪ್ಪ ಅವರ ಒತ್ತಡ ಮೇರೆಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡರು. ಆದರೆ ಟಿಕೆಟ್​ ಕೈ ತಪ್ಪಿದ್ದರಿಂದ ಜೆಸಿ ಮಾಧುಸ್ವಾಮಿ ಅಸಮಾಧಾನಗೊಂಡಿದ್ದಾರೆ.

ಲೋಕಸಭೆ ಚುನಾವಣೆ 2024: ಮಾಧುಸ್ವಾಮಿ ಮನೆಗೆ ಕಾಂಗ್ರೆಸ್​ ಅಭ್ಯರ್ಥಿ ಭೇಟಿ, ತುಮಕೂರು ಬಿಜೆಪಿ ಘಟಕದಲ್ಲಿ ಸಂಚಲನ
ಮುದ್ದಹನುಮೇಗೌಡ, ಜೆಸಿ ಮಾಧುಸ್ವಾಮಿ
Follow us
ವಿವೇಕ ಬಿರಾದಾರ
|

Updated on:Apr 07, 2024 | 4:01 PM

ತುಮಕೂರು, ಏಪ್ರಿಲ್​ 07: ಲೋಕಸಭೆ ಚುನಾವಣೆಯಲ್ಲಿ (Lok Sabha Election) ತುಮಕೂರು ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಬಿಜೆಪಿ ಮುಖಂಡ ಜೆಸಿ ಮಾಧುಸ್ವಾಮಿ (JC Madhuswamy) ಅವರು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (B. S. Yediyurappa) ಮತ್ತು ಬಿಜೆಪಿ (BJP) ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ತುಮಕೂರು ಕ್ಷೇತ್ರದ ಟಿಕೆಟ್​ ವಿ.ಸೋಮಣ್ಣ (V Somanna) ಅವರಿಗೆ ನೀಡಿದ್ದರಿಂದ ಆಕ್ರೋಶಗೊಂಡಿರುವ ಜೆಸಿ ಮಾಧುಸ್ವಾಮಿ ಅವರು, “ವಿ. ಸೋಮಣ್ಣ ನಮ್ಮ ಮನೆಗೆ ಬರಬೇಡಿ, ನಾನು ಪರ ಪ್ರಚಾರ ಮಾಡುವುದಿಲ್ಲ” ಅಂತ ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಮಾಜಿ ಸಚಿವ ಮಾಧುಸ್ವಾಮಿ ಅವರ ಮನೆಗೆ ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ (S. P. Muddahanumegowda) ಭೇಟಿ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಮೂಲಕ ತುಮಕೂರು ಬಿಜೆಪಿ ಘಟಕದಲ್ಲಿನ ಭಿನ್ನಮತ ಶಮನವಾಗಿಲ್ಲವೆಂಬುವುದು ಎದ್ದು ಕಾಣುತ್ತಿದೆ.

ಇನ್ನು ಕಾಂಗ್ರೆಸ್​ ಅಭ್ಯರ್ಥಿ ಮುದ್ದಹನುಮೇಗೌಡ ತಮ್ಮ ಮನೆಗೆ ಭೇಟಿ ನೀಡಿದ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಧುಸ್ವಾಮಿ, ಮುದ್ದಹನುಮೇಗೌಡ ಒಬ್ಬ ಅಭ್ಯರ್ಥಿಯಾಗಿ ನಮ್ಮ ಮನೆಗೆ‌ ಬಂದಿದ್ದಾರೆ. ಮುದ್ದಹನುಮೇಗೌಡ, ನಾನು ಒಳ್ಳೆಯ ಸ್ನೇಹಿತರು. ಸ್ನೇಹಿತರು ಅಂತ ಮನೆಗೆ ಬಂದಾಗ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅಭ್ಯರ್ಥಿ ಆದವರು ಬೆಂಬಲ ಕೇಳಿದ್ದಾರೆ. ನಾವು ಬೇರೆ ಪಕ್ಷದಲ್ಲಿ ಇರುವವರು ಬೆಂಬಲ ಕೊಡುವುದಕ್ಕೆ ಆಗುತ್ತಾ? ಅದೆಲ್ಲಾ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಬಿಜೆಪಿ ಬಿಡಲ್ಲ, ಸೋಮಣ್ಣ ಪರ ಪ್ರಚಾರ ಮಾಡಲ್ಲ

ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಜೆಸಿ ಮಾಧುಸ್ವಾಮಿ ಅವರು ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ತುರುವೇಕೆರೆ ಹೊರವಲಯದಲ್ಲಿರುವ ಮಾಜಿ ಶಾಸಕ ಮಸಾಲ ಜಯರಾಂ ತೋಟದ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಾಧುಸ್ವಾಮಿ ಅವರನ್ನು ಸಮಾಧಾನಪಡಿಸಿದ್ದರು. ಇದರೊಂದಿಗೆ ಮಾಧುಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ತಡೆದಿದ್ದರು. ಆದರೆ ಮಾಧುಸ್ವಾಮಿ ಮುನಿಸು ಮಾತ್ರ ತಣ್ಣಗಾಗಿಲ್ಲ. ಹೌದು ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಬೆಂಬಲ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪಗೆ ಮೋದಿ ಫೋಟೊ ಬಳಕೆ ಮಾಡುವ ಅಧಿಕಾರವಿಲ್ಲ: ಆರ್. ಅಶೋಕ್

ರಾಜ್ಯ ಬಿಜೆಪಿಯಲ್ಲಿ ಜೆಸಿ ಮಾಧುಸ್ವಾಮಿ ಚಿಂತಕರ ಚಾವಡಿಯ ಪ್ರಮುಖ ನಾಯಕರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಪಕ್ಷಗಳ ವಾಗ್ದಾಳಿಗೆ ಗುರಾಣಿಯಂತೆ ಬಳಕೆಯಾಗುತ್ತಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಜೆಸಿ ಮಾಧುಸ್ವಾಮಿ ಅವರು ರಾಜಕೀಯದಿಂದ ಸ್ವಲ್ಪ ದೂರ ಉಳಿದಿದ್ದರು. ಬಳಿಕ ಬಿಎಸ್​ ಯಡಿಯೂರಪ್ಪ ಅವರ ಒತ್ತಡ ಮೇರೆಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡರು. ಆದರೆ ವಿ.ಸೋಮಣ್ಣ ಅವರು ಟಿಕೆಟ್​ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಸಹಜವಾಗಿಯೇ ಜೆಸಿ ಮಾಧುಸ್ವಾಮಿ ಅಸಮಾಧಾನಗೊಂಡಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಭಿನ್ನಮತ

ಚುನಾವಣೆ ಹತ್ತಿರ ಬರುತ್ತಿದ್ದಂತೆ ಎನ್​ಡಿಎ ಅಭ್ಯರ್ಥಿ ವಿ. ಸೋಮಣ್ಣ ಅವರಿಗೆ ತಲೆನೋವು ಶುರುವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ತುಮಕೂರು ಜಿಲ್ಲೆಯಲ್ಲಿ ಅಪಸ್ವರ ಕೇಳಿಬಂದಿದೆ. ವರಿಷ್ಠರ ಮಟ್ಟದಲ್ಲಿ ಸರಿ ಆದರೂ ಕೆಳಮಟ್ಟದಲ್ಲಿ ಹೊಂದಾಣಿಕೆ ಆಗಿಲ್ಲ. ಮಾಧುಸ್ಚಾಮಿ ಅಸಮಧಾನ ಬೆನ್ನಲ್ಲೇ ಜೆಡಿಎಸ್​ನಲ್ಲೂ ಭಿನ್ನಮತ ಶುರುವಾಗಿದೆ.

ಜಿ. ಪಂ ಸದಸ್ಯ, ಜೆಡಿಎಸ್ ಮುಖಂಡ ಕಲ್ಲೇಶ್ ಅವರು ಮೈತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ದೊಡ್ಡವರು ಹೋಗಿ ಮೈತ್ರಿ ಮಾಡಿಕೊಂಡು ಬರುತ್ತಾರೆ, ಆದರೆ ಕಾರ್ಯಕರ್ತರ ಗತಿ ಏನು? ಸಭೆ ನಡೆಸದೆ ಅಭಿಪ್ರಾಯ ಕೇಳದೆ ಮೈತ್ರಿ ಮಾಡಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯಲ್ಲಿ 1.5 ಲಕ್ಷ ಉಪ್ಪಾರ ಸಮಾಜವಿದೆ. ಶಾಸಕ ಸುರೇಶ್ ಬಾಬು ಕೂಡ ಸಭೆ ನಡೆಸಿ ಅಭಿಪ್ರಾಯ ಕೇಳಿಲ್ಲ. ನಮ್ಮ ಸಮುದಾಯವನ್ನ ಗಣನೆಗೆ‌ ತೆಗೆದುಕೊಂಡಿಲ್ಲ. ಕೆಳೆದ ಬಾರಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರು. ಈಗ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದಾರೆ.‌ ವಿ.ಸೋಮಣ್ಣ ಸಭೆ ನಡೆಸಿ ಕಾರ್ಯಕರ್ತರನ್ನು ಕರೆದಿಲ್ಲ ಎಂದು ಉಪ್ಪಾರ ಸಮಾಜದ ಮುಖಂಡ ಕಲ್ಲೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:57 pm, Sun, 7 April 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್