ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ

ಜೆಡಿಎಸ್​ ಕಾರ್ಯಕರ್ತರು ತಾಲೂಕು, ಹೋಬಳಿ ಮತ್ತು ಗ್ರಾಮ ಮಟ್ಟದ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿದರೆ ಮೋದಿ ಸರ್ಕಾರದಲ್ಲಿ ಅವರು ಕೇಂದ್ರ ಸಚಿವರಾಗುತ್ತಾರೆ ಎಂದು ಹೇಳುತ್ತಿದ್ದಾರೆ.

ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ
ಹೆಚ್​ಡಿ ಕುಮಾರಸ್ವಾಮಿ
Follow us
| Updated By: ವಿವೇಕ ಬಿರಾದಾರ

Updated on:Apr 05, 2024 | 8:41 AM

ಮಂಡ್ಯ, ಏಪ್ರಿಲ್​ 05: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರುತ್ತಿರುವ ಹಾಗೆ ಲೋಕಸಭೆ ಚುನಾವಣೆಯ (Lok Sabha Election 2024) ಕಾವು ಹೆಚ್ಚಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, 28 ಲೋಕಸಭಾ ಕ್ಷೇತ್ರಗಳಿಗೆ 183 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಏಪ್ರಿಲ್​ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತದೆ. ಇಂದಿನಿಂದ ಪ್ರಚಾರದ ಭರಾಟೆ ಜೋರಾಗುತ್ತದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್​ (JDS) ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಪರವಾಗಿ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ತಾಲೂಕು, ಹೋಬಳಿ ಮತ್ತು ಗ್ರಾಮಗಳಲ್ಲಿ ಮಟ್ಟದಲ್ಲಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿದರೆ ಮೋದಿ ಸರ್ಕಾರದಲ್ಲಿ ಅವರು ಕೇಂದ್ರ ಸಚಿವರಾಗುತ್ತಾರೆ. ಅದೆ ಸ್ಟಾರ್​ ಚಂದ್ರು ಅವರಿಗೆ ಮತ ಹಾಕಿದರೆ ಕೇವಲ ಸಂಸದರಾಗಿರುತ್ತಾರೆ ಎಂದು ಪ್ರಚಾರ ಮಾಡುತ್ತಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಕೃಷಿ ಖಾತೆ ನೀಡುವುದು ಪಕ್ಕಾ. ಕೇಂದ್ರ ಸಚಿವರಾದರೆ ಮಂಡ್ಯ ಸಾಕಷ್ಟು ಅಭಿವೃದ್ಧಿಯಾಗುತ್ತದೆ. ಮಂಡ್ಯ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಕಾವೇರಿ ಸಮಸ್ಯೆಗೂ ಪರಿಹಾರ ಸಿಗುತ್ತದೆ. ಹೀಗಾಗಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿ ಎಂದು ಬಿಜೆಪಿ ಮತ್ತು ಜೆಡಿಎಸ್​ ಎರಡೂ ಪಕ್ಷದ ಕಾರ್ಯಕರ್ತರು ಜನರಿಗೆ ಹೇಳುತ್ತಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಮತ ಸೆಳೆಯಲು ದೋಸ್ತಿಗಳ ಮೆಗಾ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಕಣದಲ್ಲಿದ್ದಾರೆ 10 ಕೋಟ್ಯಧಿಪತಿಗಳು, ವಿವರ ಇಲ್ಲಿದೆ

ಸಿಎಂ ಮಾಡುವಂತೆ ಪ್ರಚಾರ ನಡೆಸಿದ್ದ ಹೆಚ್​ಡಿಕೆ ಬೆಂಬಲಿಗರು

2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಗೆದ್ದರೆ ಮುಖ್ಯಮಂತ್ರಿಯಾಗುತ್ತಾರೆ. ಅವರು ಮುಖ್ಯಮಂತ್ರಿಯಾಗಲು ಪೂರ್ಣ ಬಹುಮತದ ಅವಶ್ಯಕತೆ ಇದೆ. ಹೀಗಾಗಿ ನೀವು ಜೆಡಿಎಸ್​ ಪಕ್ಷಕ್ಕೆ ಮತ ಹಾಕಬೇಕು ಎಂದು ಕಾರ್ಯಕರ್ತರು ಮತದಾರರ ಬಳಿ ಮತಯಾಚಿಸಿದ್ದರು. ಇದರಿಂದ 2018 ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್​ ಅಭ್ಯರ್ಥಿಗಳು ಗೆದ್ದಿದ್ದರು. ನಂತರ ಜೆಡಿಎಸ್​-ಕಾಂಗ್ರೆಸ್​ ಮೈತ್ರಿಯಾಗಿ, ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ಇವರ ಕುರ್ಚಿ ಐದು ವರ್ಷ ಪೂರೈಸಲಿಲ್ಲ. ಕೇವಲ ಒಂದು ವರ್ಷದಲ್ಲಿ ಅಧಿಕಾರ ಕಳೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Fri, 5 April 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!