ಬಿಜೆಪಿ-ಜೆಡಿಎಸ್​ ದೋಸ್ತಿ: ಜನತಾದಳದಿಂದ ದೂರ ಉಳಿಯಲು ಮುಸ್ಲಿಂ ಮುಖಂಡರ ನಿರ್ಧಾರ

ಬಿಜೆಪಿ ಜೊತೆ ಜೆಡಿಎಸ್​​ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ದಳದಿಂದ ದೂರ ಉಳಿಯಲು ಮುಸ್ಲಿಂ ಮುಖಂಡರ ನಿರ್ಧರಿಸಿದ್ದಾರೆ. ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ರಾಜ್ಯ ಕಚೇರಿ ಉಸ್ತುವಾರಿ ಸೈಯದ್ ಶಫಿಉಲ್ಲ ಸಾಹೇಬ್ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್​ ದೋಸ್ತಿ: ಜನತಾದಳದಿಂದ ದೂರ ಉಳಿಯಲು ಮುಸ್ಲಿಂ ಮುಖಂಡರ ನಿರ್ಧಾರ
ಬಿಜೆಪಿ-ಜೆಡಿಎಸ್
Follow us
Sunil MH
| Updated By: ವಿವೇಕ ಬಿರಾದಾರ

Updated on:Sep 23, 2023 | 7:12 AM

ಬೆಂಗಳೂರು ಸೆ.23: ಕಳೆದ ಹಲವು ದಿನಗಳಿಂದ ರಾಜ್ಯದ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೊಳಗಾಗಿದ್ದ ಬಿಜೆಪಿ (BJP)-ಜೆಡಿಎಸ್‌ (JDS) ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷವು ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರ್ಪಡೆಯಾಗಿದೆ. ಇದರಿಂದ ಜೆಡಿಎಸ್‌ ಪಕ್ಷಕ್ಕೆ ಸಂಕಷ್ಟವೊಂದು ಎದುರಾಗಿದೆ. ಜೆಡಿಎಸ್‌ನಿಂದ ದೂರ ಉಳಿಯಲು ಮುಸ್ಲಿಂ (Muslim) ಮುಖಂಡರ ನಿರ್ಧರಿಸಿದ್ದಾರೆ. ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ರಾಜ್ಯ ಕಚೇರಿ ಉಸ್ತುವಾರಿ ಸೈಯದ್ ಶಫಿಉಲ್ಲ ಸಾಹೇಬ್, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ. ಶಫಿಉಲ್ಲ ರಾಜೀನಾಮೆ ಸಲ್ಲಿಕೆ ಬೆನ್ನಲ್ಲೇ ಮುಸ್ಲಿಂ ಮುಖಂಡರ ಸಭೆ ನಡೆಸಿದ್ದು, ಪಕ್ಷ ತೊರೆಯಲು ನಿರ್ಧರಿಸಿದ್ದಾರೆ.

ಐದು ಕ್ಷೇತ್ರಗಳಿಗೆ ಜೆಡಿಎಸ್ ಒಲವು

ಮೈತ್ರಿ ಬಳಿಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ಪಕ್ಷವು ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿದೆ. ಹಳೆ ಮೈಸೂರು ಭಾಗದ ಹಾಸನ, ಮಂಡ್ಯ, ಕೋಲಾರ, ತುಮಕೂರು ಲೋಕಸಭಾ ಕ್ಷೇತ್ರಗಳ ಜತೆಗೆ ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಕ್ಷೇತ್ರದ ಬಗ್ಗೆ ಆಸಕ್ತಿ ತೋರಿದೆ. ಈ ಬಗ್ಗೆ ಸಾಂಕೇತಿಕವಾಗಿ ಹೆಚ್​​.ಡಿ ಕುಮಾರಸ್ವಾಮಿ ಅವರು ಅಭಿಪ್ರಾಯವನ್ನೂ ಬಿಜೆಪಿ ವರಿಷ್ಠರ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ವೇಳೆ ಏನೇನು ಚರ್ಚೆ ನಡೆಸಿದ್ರು ಹೆಚ್​​ಡಿಕೆ, ಅಮಿತ್ ಶಾ? ಇಲ್ಲಿದೆ ವಿವರ

ಆದರೆ, ಈ ಪೈಕಿ ಕೋಲಾರ, ತುಮಕೂರುಹಾಗೂ ರಾಯಚೂರು ಬಿಜೆಪಿ ಹಾಲಿ ಸಂಸದರಿದ್ದಾರೆ. ಜತೆಗೆ ಮಂಡ್ಯದ ಕ್ಷೇತ್ರಗಳಲ್ಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರೂ ಈಗ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.ಹೀಗಾಗಿ, ಯಾವಕ್ಷೇತ್ರಗಳನ್ನು ಬಿಜೆಪಿಯು ಜೆಡಿಎಸ್‌ ಬಿಟ್ಟುಕೊಡಲು ಮುಂದಾಗಲಿದೆ ಎಂಬುದು ಕುತೂಹಲಕರವಾಗಿದೆ.

ಎನ್​​ಡಿಎ ಕುಟುಂಬಕ್ಕೆ ಜೆಡಿಎಸ್ ಪಕ್ಷಕ್ಕೆ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಬಗ್ಗೆ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಜೆಡಿಎಸ್ ಪಕ್ಷವು ಎನ್‌ಡಿಎ ಭಾಗವಾಗಲು ನಿರ್ಧರಿಸಿದೆ. ಎನ್​​ಡಿಎ ಕುಟುಂಬಕ್ಕೆ ಜೆಡಿಎಸ್ ಪಕ್ಷವನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಜೆಡಿಎಸ್ ಪಕ್ಷದ ಸಹಯೋಗವು ಕರ್ನಾಟಕವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸಲ ಬಲಿಷ್ಠ ಭಾರತ ಹಾಗೂ ಬಲಿಷ್ಟ ಎನ್‌ಡಿಎ ನಿರ್ಮಾಣಕ್ಕೆ ದಾರಿ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್​ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 am, Sat, 23 September 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್