ಲೋಕಸಭೆ ಚುನಾವಣೆ: ಮತ್ತೆ ಬೆಳಗಾವಿಯಿಂದಲೇ ಶುರುವಾದ ಗಿಫ್ಟ್​​ ಪಾಲಿಟಿಕ್ಸ್, ಬಿಜೆಪಿ ನಾಯಕನಿಂದ ಹೆಲ್ಮೆಟ್​ ವಿತರಣೆ

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗಿಪ್ಟ್ ಪಾಲಿಟಿಕ್ಸ್ ಜೋರಾಗಿಯೇ ಸದ್ದು ಮಾಡಿತ್ತು. 2023 ವರ್ಷದ ಆರಂಭದಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತದಾರರಿಗೆ ಗಿಫ್ಟ್​​ಗಳನ್ನು ನೀಡಿ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಆರಂಭಿಸಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದು, ಈ ಬಾರಿಯೂ ಗಿಪ್ಟ್ ಪಾಲಿಟಿಕ್ಸ್ ಬೆಳಗಾವಿಯಿಂದಲೇ ಆರಂಭವಾಗಿದೆ.

ಲೋಕಸಭೆ ಚುನಾವಣೆ: ಮತ್ತೆ ಬೆಳಗಾವಿಯಿಂದಲೇ ಶುರುವಾದ ಗಿಫ್ಟ್​​ ಪಾಲಿಟಿಕ್ಸ್, ಬಿಜೆಪಿ ನಾಯಕನಿಂದ ಹೆಲ್ಮೆಟ್​ ವಿತರಣೆ
ಬೆಳಗಾವಿ ಗಿಫ್ಟ್​​ ಪಾಲಿಟಿಕ್ಸ್​​
Follow us
Sahadev Mane
| Updated By: ವಿವೇಕ ಬಿರಾದಾರ

Updated on: Jan 15, 2024 | 8:55 AM

ಬೆಳಗಾವಿ, ಜನವರಿ 15: ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗಿಪ್ಟ್ ಪಾಲಿಟಿಕ್ಸ್ (Gift Politics) ಜೋರಾಗಿಯೇ ಸದ್ದು ಮಾಡಿತ್ತು. 2023 ವರ್ಷದ ಆರಂಭದಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತದಾರರಿಗೆ ಗಿಫ್ಟ್​​ಗಳನ್ನು ನೀಡಿ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಆರಂಭಿಸಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದು, ಈ ಬಾರಿಯೂ ಗಿಪ್ಟ್ ಪಾಲಿಟಿಕ್ಸ್ ಬೆಳಗಾವಿಯಿಂದಲೇ ಆರಂಭವಾಗಿದೆ. ಹೌದು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ‌ ಶಾಸಕ ಸಂಜಯ ಪಾಟೀಲ್ ಹೆಲ್ಮೆಟ್ ವಿತರಿಸುತ್ತಿದ್ದಾರೆ.

ಆಕಾಂಕ್ಷಿ ಸಂಜಯ ಪಾಟೀಲ್ ಭಾವಚಿತ್ರ ಮತ್ತು ಕಮಲದ ಗುರುತಿರುವ ಹೆಲ್ಮೆಟ್ ಅನ್ನು ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ ಹಾಗೂ ಬೆಳಗಾವಿ ಗ್ರಾಮೀಣ‌ ಮತಕ್ಷೇತ್ರದ ಬಿಜೆಪಿ ಪದಾಧಿಕಾರಿಗಳಿಗೆ ಪದಾಧಿಕಾರಿಗಳಿಗೆ ವಿತರಿಸುತ್ತಿದ್ದಾರೆ. ಸಂಜಯ ಪಾಟೀಲ್ ಕಳೆದ ವರ್ಷವೂ ಕ್ಷೇತ್ರದ ಮತದಾರರಿಗೆ ಗಿಪ್ಟ್ ವಿತರಿಸಿದ್ದರು. ಆದರೆ ಸಂಜಯ ಪಾಟೀಲ್​ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು.

ಇದನ್ನೂ ಓದಿ: ಬಿಜೆಪಿ ಅಥವಾ ಕಾಂಗ್ರೆಸ್; ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸುಮಲತಾ ಸ್ಪರ್ಧೆ ಖಚಿತ!

ಸಂಜಯ ಪಾಟೀಲ್ ಈ ಬಾರಿಯ ಬೆಳಗಾವಿ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಎಂಟೂ ಮತಕ್ಷೇತ್ರದ ಪಕ್ಷದ ಪದಾಧಿಕಾರಿಗಳನ್ನು ಸೆಳೆಯಲು ಸಂಜಯ್​ ಪಾಟೀಲ್​ ಹೆಲ್ಮೆಟ್ ವಿತರಿಸುತ್ತಿದ್ದಾರೆ. ಈ ಹೆಲ್ಮೆಟ್ ವಿತರಿಸುವ ಸಮಾರಂಭದಲ್ಲಿ ಸಂಸದೆ ಮಂಗಲಾ ಅಂಗಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಬಿಜೆಪಿ ಶಾಸಕ ಅಭಯ ಪಾಟೀಲ್ ಭಾಗಿಯಾಗಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಸದ್ದು ಮಾಡಿದ್ದ ಗಿಫ್ಟ್​​, ಆಣೆ ಪ್ರಮಾಣ

ಹಾಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಜನರಿಗೆ, ಮತ ಹಾಕುವಂತೆ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದ್ದರು. ಅವರು ಆಣೆ ಪ್ರಮಾಣ ಮಾಡಿದ ನಂತರ, ಮತದಾರರಿಗೆ ಮನೆಯ ಪಾತ್ರೆಗಳು ಮತ್ತು ಬ್ಲೆಂಡರ್ಗಳನ್ನು ನೀಡಲಾಗಿತ್ತು.

ಇನ್ನು ಖಾನಾಪುರ ಕ್ಷೇತ್ರದಲ್ಲಿ ಮಹಿಳಾ ಮತದಾರರ ಓಲೈಕೆಗೆ ಅರಿಶಿನ ಕುಂಕುಮ ಪಾಲಿಟಿಕ್ಸ್ ನಡೆದಿತ್ತು. ಅಂಜಲಿ ನಿಂಬಾಳ್ಕರ್ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಹಾಗೂ ಅಂಜಲಿ ನಿಂಬಾಳ್ಕರ್‌ ಮಹಿಳೆಯರಿಗೆ ಉಚಿತ ಲಂಚ್ ಬಾಕ್ಸ್ ವಿತರಣೆ ಮಾಡಿದ್ದರು. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎ.ದಿಲೀಪಕುಮಾರ್‌ ಮಹಿಳೆಯರಿಗೆ ಸೀರೆ ಗಿಫ್ಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ