ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಗೆ ನೆರವಾದೀತೇ ಕುಮಾರಸ್ವಾಮಿ ಪ್ರಭಾವ? ಬಲಾಬಲ ಲೆಕ್ಕಾಚಾರ ಇಲ್ಲಿದೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ನಗರ ಮತ್ತು ಗ್ರಾಮೀಣ ಮತದಾರರ ಮಿಶ್ರಣವಾಗಿದ್ದು, ಒಟ್ಟು 27.53 ಲಕ್ಷ ಮತದಾರರಿದ್ದಾರೆ. ಬೆಂಗಳೂರು ಉತ್ತರದ ನಂತರ ಅತಿ ಹೆಚ್ಚು ಮತದಾರರಿರುವ ರಾಜ್ಯದಲ್ಲಿ ಎರಡನೇ ಕ್ಷೇತ್ರ ಇದಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಗೆ ನೆರವಾದೀತೇ ಕುಮಾರಸ್ವಾಮಿ ಪ್ರಭಾವ? ಬಲಾಬಲ ಲೆಕ್ಕಾಚಾರ ಇಲ್ಲಿದೆ
ಡಿಕೆ ಸುರೇಶ್‌ & ಡಾ. ಸಿಎನ್ ಮಂಜುನಾಥ್
Follow us
Ganapathi Sharma
|

Updated on: Apr 11, 2024 | 10:49 AM

ಬೆಂಗಳೂರು, ಏಪ್ರಿಲ್ 11: ಲೋಕಸಭೆ ಚುನಾವಣೆಯ (Lok Sabha Elections) ಹೈವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿರುವ ಬೆಂಗಳೂರು ಗ್ರಾಮಾಂತರದಲ್ಲಿ (Bengaluru Rural) ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕುಟುಂಬಗಳ ನಡುವೆ ಒಕ್ಕಲಿಗರ ಮತ ಸೆಳೆಯಲು ಪೈಪೋಟಿ ನಡೆಯುತ್ತಿದೆ. ಡಿಕೆ ಶಿವಕುಮಾರ್‌ ಸಹೋದರ ಡಿಕೆ ಸುರೇಶ್‌ ಮತ್ತು ಜೆಡಿಎಸ್‌ ವರಿಷ್ಠ ದೇವೇಗೌಡರ ಅಳಿಯ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ (ಬಿಜೆಪಿ ಅಭ್ಯರ್ಥಿ) ಮಧ್ಯೆ ಪೈಪೋಟಿ ಏರ್ಪಟ್ಟಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಸ್ಥಾನವನ್ನು ವಶಪಡಿಸಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಶಿವಕುಮಾರ್ ಪಟ್ಟು ಬಿಗಿಗೊಳಿಸಲು ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಒಲಿಸಿಕೊಳ್ಳಲು ಎರಡೂ ಕಡೆಯವರು ಪ್ರಯತ್ನಿಸುತ್ತಿದ್ದಾರೆ. ಪ್ರಧಾನಿ ಮೋದಿ ಅಲೆ ಮತ್ತು ಡಾ. ಮಂಜುನಾಥ್ ಅವರ ಕ್ಲೀನ್ ಇಮೇಜ್ ಅನ್ನು ಬಳಸಿಕೊಂಡು ಗೆಲುವು ಸಾಧಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಮತ್ತೊಂದೆಡೆ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಮತ ಸೆಳೆಯಲು ಯತ್ನಿಸುತ್ತಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ನಗರ ಮತ್ತು ಗ್ರಾಮೀಣ ಮತದಾರರ ಮಿಶ್ರಣವಾಗಿದ್ದು, ಒಟ್ಟು 27.53 ಲಕ್ಷ ಮತದಾರರಿದ್ದಾರೆ. ಬೆಂಗಳೂರು ಉತ್ತರದ ನಂತರ ಅತಿ ಹೆಚ್ಚು ಮತದಾರರಿರುವ ರಾಜ್ಯದಲ್ಲಿ ಎರಡನೇ ಕ್ಷೇತ್ರ ಇದಾಗಿದೆ.

ಕುಮಾರಸ್ವಾಮಿ ಹಿಡಿತದಲ್ಲಿದ್ದ ಕ್ಷೇತ್ರ ಸುರೇಶ್ ಪಾಲಾಯಿತು

2009ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾದ ನಂತರ ನಡೆದ ಮೊದಲ ಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ 1.4 ಲಕ್ಷ ಮತಗಳ ಮುನ್ನಡೆಯೊಂದಿಗೆ ಗೆಲುವು ಸಾಧಿಸಿದ್ದರು. ಕುಮಾರಸ್ವಾಮಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, 2013 ರಲ್ಲಿ ನಡೆದ ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಗೆದ್ದರು.

ಈವರೆಗೆ ಬೆಂಗಳೂರು ಗ್ರಾಮಾಂತರವನ್ನು ಗೆದ್ದಿಲ್ಲ ಬಿಜೆಪಿ

ಬಿಜೆಪಿಯು ಬೆಂಗಳೂರು ದಕ್ಷಿಣ, ಉತ್ತರ ಮತ್ತು ಸೆಂಟ್ರಲ್ ಲೋಕಸಭಾ ಕ್ಷೇತ್ರಗಳನ್ನು ವರ್ಷಗಳಿಂದ ಗೆಲ್ಲುತ್ತಿದೆ. ಆದರೆ ಬೆಂಗಳೂರು ಗ್ರಾಮಾಂತರವನ್ನು ಈವರೆಗೆ ಗೆದ್ದಿಲ್ಲ. ಆದಾಗ್ಯೂ, ಬಿಜೆಪಿ ಅಭ್ಯರ್ಥಿಗಳು ಯಾವಾಗಲೂ ಯೋಗ್ಯ ಸಂಖ್ಯೆಯ ಮತಗಳನ್ನು ಗಳಿಸಿದ್ದಾರೆ. 2019 ರಲ್ಲಿ ಬಿಜೆಪಿ ನಾಯಕ ಅಶ್ವತ್ಥನಾರಾಯಣ ಗೌಡ 6.7 ಲಕ್ಷ ಮತಗಳನ್ನು ಪಡೆದರೆ, ಆಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸುರೇಶ್ 8.7 ಲಕ್ಷ ಮತಗಳನ್ನು ಗಳಿಸಿದ್ದರು.

ಇದನ್ನೂ ಓದಿ: ತುಮಕೂರು: ಡಾ. ಮಂಜುನಾಥ್​ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

ಈಗ ಜೆಡಿಎಸ್ ಮೈತ್ರಿಯೊಂದಿಗೆ ಬಿಜೆಪಿ ಇಲ್ಲಿ ಕಾಲಿಡಲು ಪ್ರಯತ್ನಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಬೆಂಗಳೂರು ಗ್ರಾಮಾಂತರದಿಂದ ರಾಜ್ಯದಲ್ಲಿ ತಮ್ಮ ಪ್ರಚಾರವನ್ನು ಪ್ರಾರಂಭಿಸಿದ್ದು, ‘ಪ್ರತ್ಯೇಕ ರಾಜ್ಯದ ಬೇಡಿಕೆ’ ಹೇಳಿಕೆಗಾಗಿ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬಿಜೆಪಿಯ ಅಭ್ಯರ್ಥಿ ಡಾ. ಮಂಜುನಾಥ್ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದೀರ್ಘಕಾಲ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅವರನ್ನು ‘ವೈಟ್ ಕಾಲರ್ ಅಭ್ಯರ್ಥಿ’ ಎಂದು ಟೀಕಿಸಿದ್ದು, ಸುರೇಶ್ ಅವರನ್ನು ತಳಮಟ್ಟದ ನಾಯಕ ಎಂದು ಬಿಂಬಿಸುತ್ತಿದೆ. ಇದಕ್ಕೆ ಬಿಜೆಪಿಯೂ ತಿರುಗೇಟು ನೀಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ