Kannada News Politics Lok Sabha Elections: BJP second list, Here are the details of potential candidates from Karnataka
ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಯಾರಿಗೆಲ್ಲ ಟಿಕೆಟ್? ಸಂಭಾವ್ಯ ಅಭ್ಯರ್ಥಿಗಳ ವಿವರ ಇಲ್ಲಿದೆ
ಲೋಕಸಭೆ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ಇಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಸಭೆ ಬಳಿಕ ಬಹುತೇಕ ಇಂದೇ ಎರಡನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಇದರಲ್ಲಿ ಕರ್ನಾಟಕದ ಹಲವು ಕ್ಷೇತ್ರಗಳಿಗೂ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ವಿವರ ಇಲ್ಲಿದೆ.
ಬೆಂಗಳೂರು, ಮಾರ್ಚ್ 6: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ (BJP) ಎರಡನೇ ಪಟ್ಟಿ ಬಿಡುಗಡೆ ಮಾಡುವುದಕ್ಕಾಗಿ ಇಂದು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಸಭೆಯ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟೆಯನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ.
ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಕೆಲವು ಮಂದಿ ನಾಯಕರಿಗೂ ಟಿಕೆಟ್ ಘೋಷಣೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.
ಬೆಂಗಳೂರು ಗ್ರಾಮಾಂತರ : ಡಾ. ಮಂಜುನಾಥ್/ಸಿ.ಪಿ. ಯೋಗೇಶ್ವರ್
ಚಾಮರಾಜನಗರ: ಡಾ. ಮೋಹನ್
ಬೆಂಗಳೂರು ಕೇಂದ್ರ : ಪಿ.ಸಿ. ಮೋಹನ್
ತುಮಕೂರು : ವಿ.ಸೋಮಣ್ಣ/ ಜೆ.ಸಿ. ಮಾಧುಸ್ವಾಮಿ
ಬೆಂಗಳೂರು ದಕ್ಷಿಣ : ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ : ಡಿ.ವಿ. ಸದಾನಂದ ಗೌಡ/ಸಿ.ಟಿ. ರವಿ/ ನಾರಾಯಣ್/ ವಿವೇಕ್ ರೆಡ್ಡಿ
ಇಂದು ಸಂಜೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗುವ ಎಲ್ಲ ಸಾಧ್ಯತೆಗಳಿವೆ. ಕರ್ನಾಟಕದ ಪ್ರಮುಖ ನಾಯಕರು ಕೂಡ ಇಂದಿನ ಸಭೆಯಲ್ಲಿ ಭಾಗವಹಿಸುತ್ತಿರುವುದರಿಂದ ರಾಜ್ಯದ ಹಲವು ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗುವ ನಿರೀಕ್ಷೆ ದಟ್ಟವಾಗಿದೆ.