ಲೋಕಸಭೆ ಚುನಾವಣೆ: ಮಂಡ್ಯದಲ್ಲಿ ದೇವೇಗೌಡ ಕುಟುಂಬದವರ ಸ್ಪರ್ಧೆಗೆ ಹೆಚ್ಚಿದ ಒತ್ತಡ

ಮಂಡ್ಯದಲ್ಲಿ ಜೆಡಿಎಸ್ ಸಾಕಷ್ಟು ಬಲಿಷ್ಠವಾಗಿದೆ. ಜೆಡಿಎಸ್​​ಗೆ ಬಿಜೆಪಿ ಮಂಡ್ಯ ಕ್ಷೇತ್ರ ಬಿಟ್ಟಿಕೊಡುವ ಸಾಧ್ಯತೆ ಹೆಚ್ಚು. ಹೀಗಾಗಿ ನಿಖಿಲ್ ಅಥವಾ ಕುಮಾರಸ್ವಾಮಿ ಅವರನ್ನೇ ಕಣಕ್ಕೆ ಇಳಿಸಿ ಕಳೆದ ಬಾರಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ದಳಪತಿಗಳು ಮುಂದಾಗಿದ್ದಾರೆ.

ಲೋಕಸಭೆ ಚುನಾವಣೆ: ಮಂಡ್ಯದಲ್ಲಿ ದೇವೇಗೌಡ ಕುಟುಂಬದವರ ಸ್ಪರ್ಧೆಗೆ ಹೆಚ್ಚಿದ ಒತ್ತಡ
ಕುಮಾರಸ್ವಾಮಿ & ನಿಖಿಲ್
Follow us
ಪ್ರಶಾಂತ್​ ಬಿ.
| Updated By: Ganapathi Sharma

Updated on: Dec 29, 2023 | 7:29 AM

ಮಂಡ್ಯ, ಡಿಸೆಂಬರ್ 29: ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿರುವಂತೆಯೇ ಮಂಡ್ಯದ (Mandya) ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಇಡೀ ದೇಶವನ್ನೇ ತಿರುಗಿ ನೋಡುವಂತೆ ಮಾಡಿತ್ತು. ಆ ಚುನಾವಣೆಯಲ್ಲಿ ಜೆಡಿಎಸ್ ಶಾಸಕಾಂಗ ನಾಯಕನ ಪುತ್ರ ನಿಖಿಲ್ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ದ ಹೀನಾಯ ಸೋಲನ್ನ ಕಂಡಿದ್ದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು ಕಾಯುತ್ತಿರೋ ದಳಪತಿಗಳು, ಈ ಬಾರಿ ಚುನಾವಣೆಗೆ ಹೆಚ್​ಡಿಕೆ ಅಥವಾ ನಿಖಿಲ್​​ರನ್ನೆ ಕಣಕ್ಕೆ ಇಳಿಸಲು ಪ್ಲಾನ್ ಮಾಡುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಟಕ್ಕರ್ ಕೊಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಅಂದಹಾಗೆ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾಗೆ ಪರೋಕ್ಷವಾಗಿ ಕಾಂಗ್ರೆಸ್ ಕೂಡ ಬೆಂಬಲ ಕೊಟ್ಟಿತ್ತು. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲೂ ಜೆಡಿಎಸ್ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಈ ಬಾರಿ ದೇವೇಗೌಡ ಕುಟುಂಬಸ್ಥರನ್ನೇ ಕಣಕ್ಕೆ ಇಳಿಸಿ ಗೆಲ್ಲಿಸುವ ಮೂಲಕ ಕಾಂಗ್ರೆಸ್​ಗೆ ಟಕ್ಕರ್ ಕೊಡಲು ಮಂಡ್ಯದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮಾಸ್ಟರ್ ಪ್ಯ್ಲಾನ್ ಮಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗಿದೆ. ಮಂಡ್ಯದಲ್ಲಿ ಜೆಡಿಎಸ್ ಸಾಕಷ್ಟು ಬಲಿಷ್ಠವಾಗಿದೆ. ಜೆಡಿಎಸ್​​ಗೆ ಬಿಜೆಪಿ ಮಂಡ್ಯ ಕ್ಷೇತ್ರ ಬಿಟ್ಟಿಕೊಡುವ ಸಾಧ್ಯತೆ ಹೆಚ್ಚು. ಹೀಗಾಗಿ ನಿಖಿಲ್ ಅಥವಾ ಕುಮಾರಸ್ವಾಮಿ ಅವರನ್ನೇ ಕಣಕ್ಕೆ ಇಳಿಸಿ ಕಳೆದ ಬಾರಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ದಳಪತಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲು ಆದ್ರೂ ಸುಮಲತಾ ಸ್ಪರ್ಧೆ?ಯಾವ ಪಕ್ಷದಿಂದ?

ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಮಂಡ್ಯದಿಂದ ನಿಖಿಲ್ ಅಥವಾ ಕುಮಾರಸ್ವಾಮಿ ಅವರೇ ಸ್ವರ್ಧೆ ಮಾಡಬೇಕು ಎಂಬ ಕೂಗು ಜೆಡಿಎಸ್ ವಲಯದಲ್ಲಿ ಹೇಳಿಬಂದಿದೆ. ಈ ಮಧ್ಯೆ ಮಂಡ್ಯ ಬಿಜೆಪಿ ನಾಯಕರು ಗುರುವಾರ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜಿಲ್ಲೆಯ ರಾಜಕೀಯದ ಬಗ್ಗೆ ಕೂಡ ಚರ್ಚೆ ನಡೆಸಿದ್ದಾರೆ. ಜಿಲ್ಲೆಯ ಜೆಡಿಎಸ್ ನಾಯಕರ ನಡುವೆ ಭಿನ್ನಾಭಿಪ್ರಾಯವಿದೆ. ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಹೀಗಾಗಿ ನೀವೇ ಈ ಬಾರಿ ಮಂಡ್ಯದಿಂದಲೇ ಸ್ವರ್ಧೆ ಮಾಡಿ ಎಂದು ಬಿಜೆಪಿ ನಾಯಕರು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕುಮಾರಸ್ವಾಮಿ ಅಥವಾ ನಿಖಿಲ್ ಸ್ವರ್ಧೆ ಮಾಡುತ್ತಾರೆಯೇ ಎಂಬ ಕುತೂಹಲ ಹೆಚ್ಚಾಗಿದ್ದು, ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ