ಲೋಕಸಭೆ ಚುನಾವಣೆ: ಬಿಜೆಪಿಯಿಂದ ‘ನೋ ಮೈಕ್, ನೋ ಚೇರ್ಸ್’ ಪ್ರಚಾರಾಭಿಯಾನ! ಏನಿದರ ವಿಶೇಷ?

No Mike, No Chairs: ಲೋಕಸಭೆ ಚುನಾವಣೆ ಸಂಬಂಧ ತಳ ಮಟ್ಟದಲ್ಲಿ ಜನರನ್ನು ತಲುಪಿ ಪ್ರಚಾರ ನಡೆಸುವ ಸಲುವಾಗಿ ಕರ್ನಾಟಕ ಬಿಜೆಪಿ ಹೊಸ ರೀತಿಯ ಪ್ರಚಾರ ಅಭಿಯಾನ ಒಂದನ್ನು ಆರಂಭಿಸಲಿದೆ. ‘ನೋ ಮೈಕ್, ನೋ ಚೇರ್ಸ್’ ಹೆಸರಿನ ಪ್ರಚಾರಾಭಿಯಾನದ ವಿಶೇಷವೇನು? ಯಾವ ರೀತಿ ಪ್ರಚಾರ ನಡೆಸಲಾಗುತ್ತದೆ? ಇದರ ಹಿಂದಿನ ಬಿಜೆಪಿ ತಂತ್ರಗಾರಿಕೆ ಏನು ಎಂಬ ಮಾಹಿತಿ ಇಲ್ಲಿದೆ.

ಲೋಕಸಭೆ ಚುನಾವಣೆ: ಬಿಜೆಪಿಯಿಂದ ‘ನೋ ಮೈಕ್, ನೋ ಚೇರ್ಸ್’ ಪ್ರಚಾರಾಭಿಯಾನ! ಏನಿದರ ವಿಶೇಷ?
ಲೋಕಸಭೆ ಚುನಾವಣೆ: ಬಿಜೆಪಿಯಿಂದ ‘ನೋ ಮೈಕ್, ನೋ ಚೇರ್ಸ್’ ಪ್ರಚಾರಾಭಿಯಾನ!
Follow us
Ganapathi Sharma
|

Updated on: Mar 21, 2024 | 8:58 AM

ಬೆಂಗಳೂರು, ಮಾರ್ಚ್​ 21: ಲೋಕಸಭೆ ಚುನಾವಣೆ (Lok Sabha Elections) ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಸಣ್ಣಮಟ್ಟಿನ ಜನ ಸಮುದಾಯವನ್ನು ತಲುಪಿ ಪ್ರಚಾರ ಮಾಡುವವ ನಿಟ್ಟಿನಲ್ಲಿ ಕರ್ನಾಟಕದಲ್ಲಿ (Karnataka) ಬಿಜೆಪಿ (BJP) ಇದೇ ಮೊದಲ ಬಾರಿಗೆ ‘ನೋ ಮೈಕ್, ನೋ ಚೇರ್ಸ್’ ಅಭಿಯಾನ ಹಮ್ಮಿಕೊಂಡಿದೆ. ತಳಮಟ್ಟದಲ್ಲಿ ಜನರನ್ನು ತಲುಪುವ ಉದ್ದೇಶದೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಏಪ್ರಿಲ್ 5ರ ಒಳಗೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಚುನಾವಣಾ ಪ್ರಚಾರ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಅಭಿಯಾನದಡಿ ರಸ್ತೆ ಬದಿಗಳಲ್ಲಿ, ಸಣ್ಣಪುಟ್ಟ ಹಳ್ಳಿಗಳ ಮರಗಳ ಅಡಿಯಲ್ಲಿ ಅಥವಾ ಮನೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಗುತ್ತದೆ. ಒಂದು ಬಾರಿಯ ಸಭೆಯ ವೇಳೆ ಸುಮಾರು ನೂರು ಜನರನ್ನು ತಲುಪುವ ಗುರಿ ಹೊಂದಲಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ದೊಡ್ಡ ದೊಡ್ಡ ರ‍್ಯಾಲಿಗಳನ್ನು ನಡೆಸುವ ಬದಲು ಸಣ್ಣಪುಟ್ಟ ಸಭೆಗಳನ್ನು ನಡೆಸುವ ಮೂಲಕ ಜನರನ್ನು ತಲುಪುವುದು ಉತ್ತಮ ವಿಧಾನವಾಗಿದೆ. ಈ ಮೂಲಕ ಪ್ರತಿಯೊಬ್ಬರಿಗೂ ನಾವು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬಹುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರ ಹೇಳಿಕೆ ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಈ ರೀತಿಯ ಚುನಾವಣಾ ಪ್ರಚಾರ ನಡೆಸುವ ಬಗ್ಗೆ ಬುಧವಾರ ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿವಿಧ ಹಂತಗಳಲ್ಲಿ ಚುನಾವಣಾ ಪ್ರಚಾರ ಅಭಿಯಾನದ ರೀತಿಯನ್ನು ಪಕ್ಷ ಬದಲಾಯಿಸಿದೆ. 8 ಕ್ಲಸ್ಟರ್​​ಗಳಲ್ಲಿ ದೊಡ್ಡ ಅಭಿಯಾನಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಈಗಾಗಲೇ ಬೃಹತ್ ಪ್ರಚಾರ ನಡೆಸಲಾಗಿದೆ. ದೊಡ್ಡ ಪ್ರಚಾರ ಅಭಿಯಾನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರಂಥ ನಾಯಕರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇವರೇ ಸ್ಟಾರ್ ಪ್ರಚಾರಕರು!

ಸಣ್ಣ ಮಟ್ಟದ ಸ್ಥಳೀಯ ಚುನಾವಣಾ ಪ್ರಚಾರ ಸಭೆಗಳಿಗೆ ಪಕ್ಷದ ರಾಜ್ಯ ಘಟಕವು 22 ವಿವಿಧ ಘಟಕಗಳನ್ನು ಸ್ಥಾಪಿಸಿದೆ. ಇದರಲ್ಲಿ ರೈತರು, ವಕೀಲರು, ವೈದ್ಯರು ಹಾಗೂ ಕೇಂದ್ರ ಸರ್ಕಾರ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ.

ಇದನ್ನೂ ಓದಿ: ಕಂತೆ ಕಂತೆ ಹಣ, ಕುಕ್ಕರ್, ನೂರಾರು ಸೀರೆಗಳು ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ನೋಡಿ

ಸ್ಥಳೀಯ ನಾಯಕರ ಸಹಕಾರದೊಂದಿಗೆ ಈ ಹೊಸ ಪ್ರಚಾರದ ಪರಿಕಲ್ಪನೆಯನ್ನು ನಾವು ಸಾಕಾರ ಗೊಳಿಸಲಿದ್ದೇವೆ. ಇಂಥ ಪ್ರಚಾರ ಸಭೆಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ನಾಯಕರು, ಪದಾಧಿಕಾರಿಗಳು ಹಾಗೂ ಇತರರು ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸರ್ಕಾರದ ಉಜ್ವಲ, ಜಲಜೀವನ್ ಮಿಷನ್ ಹಾಗೂ ಇತರ ಯೋಜನೆಗಳನ್ನು ಮುಂದಿಟ್ಟುಕೊಂಡು ಮಹಿಳಾ ಮತದಾರರ ಬಳಿ ಮತಯಾಚನೆ ಮಾಡಲಿದ್ದೇವೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಉಭಯ ಪಕ್ಷಗಳ ನಡುವೆ ಮೂಡುವ ವೈಮನಸ್ಸು ಹಾಗೂ ಗೊಂದಲಗಳನ್ನು ಪರಿಹರಿಸುವ ಸಲುವಾಗಿ ಸಮನ್ವಯ ಸಮಿತಿಯನ್ನು ರಚಿಸಲು ಉದ್ದೇಶಿಸಲಾಗಿದೆ. ಸಮಿತಿಯಲ್ಲಿ ಎರಡು ಪಕ್ಷಗಳ ನಾಯಕರು ಇರಲಿದ್ದಾರೆ. ಕ್ಷೇತ್ರ ಮಟ್ಟದಲ್ಲಿ ಈ ನಾಯಕರು ಕಾರ್ಯನಿರ್ವಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ