Lok Sabha Elections: ಕಾಂಗ್ರೆಸ್ 2ನೇ ಪಟ್ಟಿ ಬಹುತೇಕ ಅಂತಿಮ: ಯಾರಿಗೆಲ್ಲ ಟಿಕೆಟ್? ಇಲ್ಲಿದೆ ವಿವರ
ಮೂರು ದಿನಗಳ ಸಿಇಸಿ ಸಭೆ ಬಳಿಕ ಕೊನೆಗೂ ಕಾಂಗ್ರೆಸ್ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಂಡಿದೆ. ಅಧಿಕೃತ ಘೋಷಣೆ ಬಾಕಿ ಇದ್ದು, ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನ ಅಂತಿಮಗೊಳಿಸುತ್ತಿರುವ ಪ್ರಕ್ರಿಯೆಯು ಬಾಕಿ ಇದೆ. ಎರಡನೇ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.
ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು 2ನೇ ಪಟ್ಟಿ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಿಇಸಿ ಸಭೆ ಬಳಿಕ ಕೊನೆಗೂ ‘ಕೈ’ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು
- ಚಿತ್ರದುರ್ಗ – ಚಂದ್ರಪ್ಪ
- ರಾಯಚೂರು – ಕುಮಾರ ನಾಯ್ಕ್
- ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್
- ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
- ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್
- ಧಾರವಾಡ – ವಿನೋದ್ ಅಸೂಟಿ
- ಕೊಪ್ಪಳ – ರಾಜಶೇಖರ ಹಿಟ್ನಾಳ್
- ಕಲಬುರಗಿ – ರಾಧಾಕೃಷ್ಣ ದೊಡ್ಮನಿ
- ಬೀದರ್ – ಸಾಗರ್ ಖಂಡ್ರೆ
- ದಕ್ಷಿಣ ಕನ್ನಡ – ಪದ್ಮರಾಜ್
- ಮೈಸೂರು – ಎಂ.ಲಕ್ಷ್ಮಣ
- ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
- ಬೆಂಗಳೂರು ಕೇಂದ್ರ -ಮನ್ಸೂರ್ ಅಲಿ ಖಾನ್
- ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
- ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
- ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
ಅಂತಿಮವಾಗದ ಕ್ಷೇತ್ರಗಳಿವು
- ಕೋಲಾರ
- ಚಾಮರಾಜನಗರ
- ಚಿಕ್ಕಬಳ್ಳಾಪುರ
- ಬಳ್ಳಾರಿ
ಒಂದೆಡೆ ರಾಜ್ಯದಲ್ಲಿ ಬಂಡಾಯದ ಬಿಸಿ ಹೆಚ್ಚಾಗಿರುವ ಕಾರಣ ಇತ್ತ ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ.
4 ಕ್ಷೇತ್ರ ಬಾಕಿ ಉಳಿಸಿಕೊಂಡಿದ್ದೇವೆ ಎಂದು ದೆಹಲಿಯಿಂದ ಬೆಂಗಳೂರಿಗೆ ಮರಳಿರುವ ಸಿಎಂ, ಡಿಸಿಎಂ ಹೇಳಿದ್ದಾರೆ. ಕಾಂಗ್ರೆಸ್ನಿಂದ ಬಿಜೆಪಿ ನಾಯಕರಿಗೆ ಗಾಳ ಹಾಕುವ ವಿಚಾರವಾಗಿ ಬಹಿರಂಗವಾಗಿ ಮಾತನಾಡಲು ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಬೇರೆ ಪಕ್ಷದ ನಾಯಕರು ಕಾಂಗ್ರೆಸ್ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡಲ್ಲ, ಕೆಲವು ಸಂಸದರ ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಐವರು ಸಚಿವರ ಮಕ್ಕಳಿಗೆ ಕಾಂಗ್ರೆಸ್ ಟಿಕೆಟ್! ಇಲ್ಲಿದೆ ಸಂಭಾವ್ಯರ ಪಟ್ಟಿ
ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಐವರು ಹೆಣ್ಣು ಮಕ್ಕಳಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್ಗಳನ್ನ ಯುವಕರಿಗೆ ನೀಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮತ್ತೊಂದೆಡೆ ಟಿಕೆಟ್ ಕೈ ತಪ್ಪುವ ಭೀತಿಯಿಂದಾಗಿ ಹಲವು ಟಿಕೆಟ್ ಆಕಾಂಕ್ಷಿಗಳು ರೊಚ್ಚಿಗೆದ್ದಿದ್ದಾರೆ. ಟಿಕೆಟ್ ಖಾತ್ರಿಯಾಗದೆ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ