ಲೋಕಸಭೆ ಚುನಾವಣೆ: ಮಾರ್ಚ್ 15ರಿಂದ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ! ಇಲ್ಲಿದೆ ವೇಳಾಪಟ್ಟಿ

ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಳ್ಳಲು ಇನ್ನು ಕೆಲವೇ ದಿನ ಬಾಕಿ ಇದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿಯಾಗಿ ಪ್ರಚಾರ ಅಭಿಯಾನ ಶುರು ಮಾಡಿದ್ದಾರೆ. ಉತ್ತರ ಭಾರತದಲ್ಲಿ ನಿರಂತರ ಪ್ರವಾಸದಲ್ಲಿರುವ ಮೋದಿ ಕೆಲವೇ ದಿನಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಮೋದಿಯವರ ದಕ್ಷಿಣ ಭಾರತ ಪ್ರವಾಸದ ವೇಳಾಪಟ್ಟಿ ಇಲ್ಲಿದೆ.

ಲೋಕಸಭೆ ಚುನಾವಣೆ: ಮಾರ್ಚ್ 15ರಿಂದ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ! ಇಲ್ಲಿದೆ ವೇಳಾಪಟ್ಟಿ
ಪ್ರಧಾನಿ ಮೋದಿ
Follow us
| Updated By: ಗಣಪತಿ ಶರ್ಮ

Updated on: Mar 11, 2024 | 6:35 AM

ನವದೆಹಲಿ, ಮಾರ್ಚ್​ 11: ಈ ಬಾರಿ 400 ಸೀಟುಗಳನ್ನು ಪಡೆಯಬೇಕು. ಪ್ರಧಾನಿ ನರೇಂದ್ರ ಮೋದಿ (Narendra Modi) ಸತತ ಮೂರನೇ ಬಾರಿಗೆ ಕೇಂದ್ರದ ಗದ್ದುಗೆಗೆ ಏರಬೇಕು ಎಂಬ ಎರಡು ಅಜೆಂಡಾಗಳೊಂದಿಗೆ ಬಿಜೆಪಿ (BJP) ಭರ್ಜರಿ ಚುನಾವಣಾ ಪ್ರಚಾರ (Election Campaign) ಈಗಾಗಲೇ ಉತ್ತರ ಭಾರತದಲ್ಲಿ ಮತಬೇಟೆ ಆರಂಭಿಸಿರುವ ಪ್ರಧಾನಿ ಮೋದಿ ಕೆಲವೇ ದಿನಗಳಲ್ಲಿ ದಕ್ಷಿಣದ ರಾಜ್ಯಗಳಿಗೆ ಬರಲಿದ್ದಾರೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ ಅವರ 15 ಱಲಿ ಹಾಗೂ ಸಾರ್ವಜನಿಕ ಸಭೆಗಳು ನಿಗದಿಯಾಗಿವೆ.

ಮೋದಿ ದಕ್ಷಿಣ ಭಾರತ ಪ್ರವಾಸ ವೇಳಾಪಟ್ಟಿ

  • ಮಾರ್ಚ್ 15 : ಕೋಲಾರ, ಸೇಲಂ, ಪಾಲಕ್ಕಾಡ್
  • ಮಾರ್ಚ್ 16 : ಕನ್ಯಾಕುಮಾರಿ, ವಿಶಾಖಪಟ್ಟಣಂ, ಜಹೀರಾಬಾದ್
  • ಮಾರ್ಚ್ 17 : ಪತ್ತನಂತ್ತಿಟ್ಟ, ಶಿವಮೊಗ್ಗ, ಅಮರಾವತಿ
  • ಮಾರ್ಚ್ 18 : ಮಲ್ಕಾಜ್​ಗಿರಿ, ಬೀದರ್, ಕೊಯಮತ್ತೂರು
  • ಮಾರ್ಚ್ 19: ನಾಗರ್ ಕರ್ನೂಲ್, ಧಾರವಾಡ, ಏಲೂರು

ಕರ್ನಾಟಕದಲ್ಲಿ ಮೋದಿ ಪ್ರಚಾರ ಎಲ್ಲೆಲ್ಲ, ಯಾವಾಗ?

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶಕ್ಕೆ ಯೋಜನೆ ರೂಪಿಸಲಾಗಿದೆ. ಮಾರ್ಚ್ 17ರಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಱಲಿ ನಡೆಯಲಿದೆ. ಶಿವಮೊಗ್ಗದಲ್ಲಿ 4 ಕ್ಷೇತ್ರಗಳನ್ನೊಳಗೊಂಡ ಸಮಾವೇಶ ಆಯೋಜಿಸಲಾಗಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ 4 ಸಾರ್ವಜನಿಕ ಱಲಿ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮೋದಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ.

ಪ್ರಧಾನಿ ಮೋದಿ ವಾರಾಣಸಿ ಱಲಿ ಬಳಿಕ ಇದೀಗ ಗುಜರಾತ್​ನತ್ತ ಮುಖಮಾಡಿದ್ದಾರೆ. ಮಾರ್ಚ್ 12ರಂದು ಗುಜರಾತ್​ ಹಾಗೂ ರಾಜಸ್ಥಾನದಲ್ಲಿ ಮೋದಿ ಚುನಾವಣಾ ಪ್ರಚಾರ ಅಭಿಯಾನ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆ ದಿನಾಂಕ ಬಹುತೇಕ ಈ ವಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಉತ್ತರ ಭಾರತದಾದ್ಯಂತ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಹಲವಾರು ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ ಚುನಾವಣಾ ಪ್ರಚಾರ ಅಭಿಯಾನಗಳನ್ನೂ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಕ್ರೇನ್​ ಮೇಲೆ ರಷ್ಯಾ ಸಂಭಾವ್ಯ ಪರಮಾಣು ದಾಳಿ ತಡೆದಿದ್ದ ಪ್ರಧಾನಿ ಮೋದಿ: ಸಿಎನ್ಎನ್ ವರದಿ

ಚುನಾವಣೆ ವೇಳಾಪಟ್ಟಿ ಪ್ರಕಟಗೊಳ್ಳುವುದರೊಂದಿಗೆ ಮೋದಿ ಅವರ ಪ್ರಚಾರ ಅಭಿಯಾನ ಇನ್ನಷ್ಟು ಬಿರುಸುಕೊಳ್ಳಲಿದೆ. ಆ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಸಕಲ ಸಿದ್ಧತೆಗಳನ್ನು ನಡೆಸಿಕೊಂಡಿದೆ. ಮತ್ತೊಂದೆಡೆ, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ದೆಹಲಿಯಲ್ಲಿ ಇಂದು ಬಿಡುಗಡೆಯಾಗುವ ನಿರೀಕ್ಷೆ ಇದೆ. ಇದರಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಇರಬಹುದು ಎಂದು ಭಾವಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್