ಲೋಕಸಭೆ ಚುನಾವಣೆ: ದೇವೇಗೌಡರ ಕುಟುಂಬದ ಅಭ್ಯರ್ಥಿ ವಿರುದ್ಧ ನಾನು ಸ್ಪರ್ಧಿಸುವೆ: ಬಿಜೆಪಿ ಮುಖಂಡ

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರು ವರ್ಷ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಹಾಸನದಿಂದ ನಾನೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದರು.

ಲೋಕಸಭೆ ಚುನಾವಣೆ: ದೇವೇಗೌಡರ ಕುಟುಂಬದ ಅಭ್ಯರ್ಥಿ ವಿರುದ್ಧ ನಾನು ಸ್ಪರ್ಧಿಸುವೆ: ಬಿಜೆಪಿ ಮುಖಂಡ
ದೇವರಾಜೆಗೌಡ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:Mar 04, 2024 | 11:32 AM

ಹಾಸನ, ಮಾರ್ಚ 04: ಮುಂದಿನ ಲೋಕಸಭೆ ಚುನಾವಣೆಯನ್ನು (Lok Sabha Election) ಜಂಟಿಯಾಗಿ ಎದುರಿಸಲು ​ಬಿಜೆಪಿ (BJP) ಜೊತೆ ಜೆಡಿಎಸ್ (JDS) ಮೈತ್ರಿ ಮಾಡಿಕೊಂಡಿದೆ. ಆದರೆ ಬಿಜೆಪಿ ಮುಖಂಡ ದೇವರಾಜೇಗೌಡ (Devaraje Gowda) ಮಾತ್ರ ಹೆಚ್​​ಡಿ ದೇವಗೌಡರ (HD Devegowda) ಕುಟುಂಬದ ವಿರುದ್ಧ ಇನ್ನೂ ಕಿಡಿ ಕಾರುತ್ತಿದ್ದಾರೆ. ಮೈತ್ರಿ ನಂತರವೂ ಹಾಸನದಲ್ಲಿ ದೇವರಾಜೇಗೌಡ ಮತ್ತು ಹೆಚ್​ಡಿ ದೇವೆಗೌಡ ಕುಟುಂಬದ ನಡುವಿನ ಅಸಮಾಧಾನ ತಣದಿಲ್ಲ. “ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದ ಯಾರೇ ಅಭ್ಯರ್ಥಿ ಆದರೂ ಅವರ ವಿರುದ್ಧ ನಾನು ಸ್ಪರ್ದೆ ಮಾಡುತ್ತೇನೆ” ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರು ವರ್ಷ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಹಾಸನದಿಂದ ನಾನೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಕೂಡ ಇದಕ್ಕೆ ದ್ವನಿಗೂಡಿಸಿದ್ದಾರೆ. ಇದು ನಮ್ಮ ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರ ದಾರಿ ತಪ್ಪಿಸುವ ಕೆಲಸವಾಗಿದೆ ಎಂದರು.

ಇದರ ವಿರುದ್ಧ ನಾನು ಕೇಂದ್ರದ ನಾಯಕರಿಗೆ ದೂರು ನೀಡಿದ್ದೆ. ಕೇಂದ್ರದ ನಾಯಕರು ನನ್ನ ಕರೆಸಿ ಮಾತನಾಡಿದ್ದಾರೆ. ಹಾಸನದಿಂದ ಮೈತ್ರಿ ಅಭ್ಯರ್ಥಿ ಘೋಷಣೆ ಮಾಡಿಲ್ಲ, ನೀವು ಕೆಲಸ ಮಾಡಿ ಎಂದು ಹೇಳಿದ್ದಾರೆ. ಹಾಗಾಗಿಯೆ ಜಿಲ್ಲೆಯಲ್ಲಿ ಚುನಾವಣೆ ಕಛೇರಿ ತೆರೆಯಲಾಗಿದೆ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುವುದು ಬೇಡ. ನಮ್ಮ ಕೆಲ ನಾಯಕರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ದೇವೇಗೌಡರು ನಮ್ಮನ್ನು ಚಡ್ಡಿಗಳು ಎಂದಿದ್ದರು. ದೇವೇಗೌಡರು ದೇಶ ಬಿಡುತ್ತೇನೆ ಎಂದಿದ್ದರು. ಭವಾನಿ ರೇವಣ್ಣ ನಡು ರಾತ್ರಿಯಲ್ಲಿ ವಾಮಾಚಾರ ಮಾಡುತ್ತಾರೆ. ಹಂದಿ, ಕುರಿ ಮತ್ತು ಮೇಕೆ ಕಡಿದು ವಾಮಾಚಾರ ಮಾಡಿದ್ದಾರೆ. ದೇವೇಗೌಡರು ಯಜ್ಞಯಾಗಾದಿ ಮಾಡುತ್ತಾರೆ. ಇವರು ದೇವರನ್ನೇ ಕಟ್ಟಿಹಾಕುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾವು ಹೇಗೆ ಇವರೊಂದಿಗೆ ಮೈತ್ರಿಯಿಂದ ಕೆಲಸ ಮಾಡುವುದು ಪ್ರಶ್ನಿಸಿದರು.

ಕೆಲವು ರಾಜ್ಯ ನಾಯಕರು ಕೂಡ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ದೇವೇಗೌಡರ ಮನೆಗೆ ಹೋಗಿ ಓಲೈಕೆ ಕೆಲಸ ಮಾಡುತ್ತಿದ್ದಾರೆ. ಹಾಸನದಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಸುಪ್ರೀಂಕೋರ್ಟ್​​ನಲ್ಲಿ ಪ್ರಕರಣ ಅಂತಿಮ ಹಂತಕ್ಕೆ ಬಂದು ಕುತ್ತಿಗೆಗೆ ಬಂದಿದೆ. ರೇವಣ್ಣ ಕೂಡ ಜೈಲಿಗೆ ಹೋಗುವ ಪರಿಸ್ಥಿತಿ ಬಂದೇ ಬರುತ್ತೆ. ಈ ಬಾರಿ ಪಕ್ಷಾತೀತವಾಗಿ ನಾವು ಚುನಾವಣೆ ಮಾಡುತ್ತೇವೆ. ನಮ್ಮ ಕೆಲ ನಾಯಕರು ಜೆಡಿಎಸ್ ಮೇಲಿನ ಸಿಟ್ಟಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಲು ಆಲೋಚನೆ ಮಾಡಿದ್ದಾರೆ. ಯಾರೂ ಈ ರೀತಿ ಗೊಂದಲಕ್ಕೆ ಒಳಗಾಗೋದು ಬೇಡ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಸಮರ, ಸುಪ್ರೀಂಕೋರ್ಟ್‌ನಲ್ಲಿ ಕೇವಿಯೆಟ್ ಫೈಲ್ ಮಾಡಿದ ದೇವರಾಜೇಗೌಡ

ಕರ್ನಾಟಕದಲ್ಲಿ ಮುಂದೆ ರಾಷ್ಟ್ರಪತಿ ಆಡಳಿತ ಬರಲಿದೆ. ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಕೇಸ್ ನಡೆಯುತ್ತಿದೆ. ಈ ತೀರ್ಪು ಬಂದ ಕೂಡಲೆ ಕರ್ನಾಟಕ ಸರ್ಕಾರ ವಜಾ ಆಗುತ್ತೆ. ತೀರ್ಪು ಬಂದ ಹತ್ತು ನಿಮಿಷಕ್ಕೆ ರಾಷ್ಟ್ರಪತಿ ಆಡಳಿತ ಜಾರಿ ಆಗುತ್ತೆ ಎಂದು ಭವಿಷ್ಯ ನುಡಿದರು.

ಯಾರು ಈ ದೇವರಾಜೇಗೌಡ

2019ರ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಅವರು ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿ ದೇವರಾಜೇಗೌಡ ತಮ್ಮ ದೂರಿನಲ್ಲಿ ತಿಳಿಸಿದ್ದರು.

ಇದಾದ ಬಳಿಕ ಮಾಜಿ ಸಚಿವ ರೇವಣ್ಣ ಅವರ ಕುಟುಂಬ ಸದಸ್ಯರ ಮತ್ತು ಸಂಸದ ಪ್ರಜ್ವಲ್‌ ರೇವಣ್ಣ ಅವರ ಭ್ರಷ್ಟಾಚಾರ, ಕರ್ಮಕಾಂಡ ಕೆಲವು ವಿಡಿಯೋಗಳು ನನ್ನ ಹತ್ತಿರವಿದ್ದು, ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಬಾಂಬ್​ ಸಿಡಿಸಿದ್ದರು. ಅಂದಿನಿಂದ ಇಲ್ಲಿಯವರೆಗು ರೇವಣ್ಣ ಕುಟುಂಬ ಮತ್ತು ದೇವರಾಜೇಗೌಡ ಮಧ್ಯೆ ಶೀತಲ ಸಮರ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Mon, 4 March 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್