ಲೋಕಸಭೆ ಚುನಾವಣೆ: ಬಿಜೆಪಿ ಮರು ಸಂಘಟನೆಗೆ ರಾಜಹುಲಿ ಅಖಾಡಕ್ಕೆ, ಮುಂದಿನ ವಾರದಿಂದ ಯಡಿಯೂರಪ್ಪ ರಾಜ್ಯ ಪ್ರವಾಸ

|

Updated on: Sep 09, 2023 | 7:35 AM

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ, ಆಡಳಿತರೂಢ ಬಿಜೆಪಿ ಹಲವು ರಾಜ್ಯಗಳಲ್ಲಿ ತಯಾರಿಗಳನ್ನು ನಡೆಸುತ್ತಿದೆ. ಕರ್ನಾಟಕದಲ್ಲೂ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶವನ್ನು ಇಟ್ಟುಕೊಳ್ಳಲಾಗಿದೆ. ಅದರಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮುಂದಿನ ವಾರದಿಂದ ಅಖಾಡಕ್ಕಿಳಿದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಲೋಕಸಭೆ ಚುನಾವಣೆ: ಬಿಜೆಪಿ ಮರು ಸಂಘಟನೆಗೆ ರಾಜಹುಲಿ ಅಖಾಡಕ್ಕೆ, ಮುಂದಿನ ವಾರದಿಂದ ಯಡಿಯೂರಪ್ಪ ರಾಜ್ಯ ಪ್ರವಾಸ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us on

ಬೆಂಗಳೂರು, ಸೆ.9: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮುಂದಿನ ವಾರದಿಂದ ರಾಜ್ಯ ಪ್ರವಾಸ ಪ್ರಾರಂಭಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ನಡೆದ ಬೃಹತ್ ಬಿಜೆಪಿ (BJP) ಪ್ರತಿಭಟನಾ ರ್ಯಾಲಿಯಲ್ಲಿ ಈ ಘೋಷಣೆ ಮಾಡಿದರು.

“ನಾನು ರಾಜ್ಯವ್ಯಾಪಿ ಪ್ರವಾಸವನ್ನು ಪ್ರಾರಂಭಿಸುವ ಮೊದಲು ಸೆಪ್ಟೆಂಬರ್ 15 ಅಥವಾ 16 ರಂದು ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದೇನೆ. ಅದರ ಮುಂದಿನ ವಾರದಿಂದ ನಾವು ಪಕ್ಷವನ್ನು ಮರುಸಂಘಟಿಸುತ್ತೇವೆ” ಎಂದು ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ; ಬಿಎಸ್​ ಯಡಿಯೂರಪ್ಪ ಹೇಳಿದ್ದಿಷ್ಟು…

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವುದು ಮತ್ತು ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವುದು ತಮ್ಮ ಪ್ರವಾಸದ ಮೂಲ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವನ್ನು ಬಯಲಿಗೆಳೆಯಬೇಕಾಗಿದೆ. ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ರಾಜ್ಯದ ಜನರು ಸರ್ಕಾರದಿಂದ ಬೇಸತ್ತಿದ್ದಾರೆ. ಕಾಂಗ್ರೆಸ್ ಮತ್ತು ಅದರ ನಾಯಕರು ಭ್ರಷ್ಟಾಚಾರದಲ್ಲಿ ತೊಡಗುವ ಮೂಲಕ, ಆಡಳಿತವನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಕ್ಕೆ ಮತ್ತು ಜನರು ಪಕ್ಷಕ್ಕೆ ನೀಡಿದ ಆದೇಶಕ್ಕೆ ಅವಮಾನ ತಂದಿದ್ದಾರೆ” ಎಂದು ಯಡಿಯೂರಪ್ಪ ಆರೋಪಿಸಿದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ