Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್-ಬಿಜೆಪಿ ಮೈತ್ರಿಗೆ ಸ್ಫೋಟಕ ತಿರುವು, ಇನ್ನೇನು ದೋಸ್ತಿ ಫೈನಲ್ ಎನ್ನುಷ್ಟರಲ್ಲೇ ಕತ್ರಿ ಬಿತ್ತೇ?

ಮೊನ್ನೆ ಮೈತ್ರಿಗೆ ಅಮಿತ್ ಶಾನೇ ಒಪ್ಪಿಗೆ ಸೂಚಿಸಿದ್ದಾರೆ ಅಂದಿದ್ರು.. ನಿನ್ನೆ ಹಂಗೇನೂ ಇಲ್ಲ ಅಂದಿದ್ರು. ಇಂದು ಅವರು ಕೇಳಿಲ್ಲ, ನಾವು ಹೇಳಿಲ್ಲ ಎಂದಿದ್ದಾರೆ. ಇದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಮೂರು ದಿನದಲ್ಲಿ ಮಾಜಿ ಸಿಎಂ ಬಿಎಸ್​ವೈ ಕೊಟ್ಟ ಮೂರು ಹೇಳಿಕೆ. ಅಲ್ಲಿಗೆ ದೋಸ್ತಿ ವಿಚಾರಕ್ಕೆ ದೊಡ್ಡ ತಿರುವು ಸಿಕ್ಕಿದೆ.

ಜೆಡಿಎಸ್-ಬಿಜೆಪಿ ಮೈತ್ರಿಗೆ ಸ್ಫೋಟಕ ತಿರುವು, ಇನ್ನೇನು ದೋಸ್ತಿ ಫೈನಲ್ ಎನ್ನುಷ್ಟರಲ್ಲೇ ಕತ್ರಿ ಬಿತ್ತೇ?
ಬಿಜೆಪಿ ಜೆಡಿಎಸ್ ಮೈತ್ರಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 15, 2023 | 7:34 AM

ಬೆಂಗಳೂರು, (ಸೆಪ್ಟೆಂಬರ್ 15): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ (JDS-BJP Alliance) ಆಗೇ ಬಿಡುತ್ತೆ, ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಇನ್ನೇನಿದ್ರೂ ಸೀಟ್ ಹಂಚಿಕೆ ನಡೀಬೇಕು ಅಷ್ಟೇ ಎನ್ನಲಾಗಿತ್ತು. ಖುದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಇಂಥಾ ಮಾತು ಹೇಳಿದ್ರಿಂದ ಅದಕ್ಕೆ ಒಂದು ತೂಕವೂ ಬಂದಿತ್ತು. ನಿನ್ನೆ(ಸೆಪ್ಟೆಂಬರ್ 14) ದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯೂ ನಡೆದಿದೆ. ಹೀಗಾಗಿ ಮೈತ್ರಿ ಅಂತಿಮ ಹಂತಕ್ಕೆ ಬರುತ್ತೆ ಎನ್ನಲಾಗಿತ್ತು. ಆದ್ರೆ ಸಭೆಯಲ್ಲಿ ವಿಚಾರವಾಗಿ ಚರ್ಚೆಯಾಗಿಲ್ಲ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಮನಸ್ಸಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬಿಎಸ್​ವೈ ಹೇಳಿದ್ದಾರೆ.

ಇನ್ನು ಮೊನ್ನೆ, ಜೆಡಿಎಸ್ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದಿದ್ದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಇಂದು, ಬೇರೆ ರೀತಿ ಮಾತನಾಡಿದ್ದಾರೆ. ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ವರಿಷ್ಠರು ಚರ್ಚಿಸುತ್ತಾರೆ ಎಂದು ಹೇಳಿದ್ದಾರೆ.

ಇದನನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು 

ಈಗಾಗಲೇ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಮೈತ್ರಿ ಬಗ್ಗೆ ದೂರವಾಣಿ ಮೂಲಕ ಬಿಜೆಪಿ ವರಿಷ್ಠರ ಜತೆ ಚರ್ಚಿಸಿದ್ದಾರೆ. ಇದೀಗ ಖುದ್ದು ಮುಖಾಮುಖಿಯಾಗಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ಒಂದೇ ಬಾಕಿ ಇದೆ ಎನ್ನಲಾಗುತ್ತಿದೆ. ಆದ್ರೆ, ಇದುವರೆಗೂ ಮೋದಿ, ಕುಮಾರಸ್ವಾಮಿ ಭೇಟಿಗೆ ಆಹ್ವಾನ ನೀಡಿಲ್ಲ.

ಮೈತ್ರಿಗೆ ಕತ್ರಿ ಬಿತ್ತೇ?, ಬಿಜೆಪಿ ಕುಟುಕಿದ ಕಾಂಗ್ರೆಸ್ ಪಡೆ!

ಒಂದ್ಕಡೆ ಬಿಎಸ್​ವೈ ಹೀಗೆ ಮೈತ್ರಿ ಕುರಿತು ಯೂಟರ್ನ್ ಹೊಡೆಯೋ ರೀತಿ ಹೇಳಿಕೆ ಕೊಡುತ್ತಿದ್ದರೆ, ಇದನ್ನೇ ಕಾಂಗ್ರೆಸ್ ಅಸ್ತ್ರ ಮಾಡಿಕೊಂಡಿತ್ತು. ಯಡಿಯೂರಪ್ಪ ಜೆಡಿಎಸ್ ಜೊತೆ ಸಖ್ಯ ಬೆಳೆಸುವ ಮಾತನಾಡಿದ್ರು, ಈಗ ಯೂಟರ್ನ್ ಹೊಡೆದಿದ್ದಾರೆ. ಮೈತ್ರಿಯ ಚೌಕಾಸಿ ವ್ಯವಹಾರ ಕುದರಲಿಲ್ವೇ, ಅಥವಾ ಯಡಿಯೂರಪ್ಪನವರನನ್ ಕಟ್ಟಿ ಹಾಕಲು ಈ ಕಡಿವಾಣ ಹಾಕಿದ್ದೇ..? ಎಂದು ಟ್ವೀಟ್​ನಲ್ಲಿ ಪ್ರಶ್ನಿಸಿದೆ. ಇನ್ನು ಸಚಿವ ಚೆಲುವರಾಯಸ್ವಾಮಿ ಸೀಟು ಹಂಚಿಕೆ ಬಗ್ಗೆ ಇನ್ನೂ ಗೊಂದಲವಿದೆ ಹೀಗಾಗಿಯೇ ಯಡಿಯೂರಪ್ಪ ಆ ರೀತಿ ಹೇಳಿದ್ದಾರೆ ಎಂದಿದ್ದಾರೆ.

ದಳ ಕಮಲ ಮೈತ್ರಿ ಇನ್ನೇನು ಫೈನಲ್ ಹಂತಕ್ಕೆ ಹೋಗಿದೆ ಎನ್ನುವಾಗಲೇ, ತಿರುವು ಸಿಕ್ಕಿದೆ. ಆದ್ರೆ ವಿಚಾರ ಅದಲ್ಲ, ಮಾಜಿ ಸಿಎಂ ಯಡಿಯೂರಪ್ಪ, ಅಷ್ಟು ಖಡಾ ಖಂಡಿತವಾಗಿ ಮೈತ್ರಿ ಬಗ್ಗೆ ಹೇಳಿಕೆ ಕೊಟ್ಟು, ಈಗ ಸೈಲೆಂಟ್ ಆಗುತ್ತಿರುವುದು ನಾನಾ ಅನುಮಾನ, ಪ್ರಶ್ನೆಗಳನ್ನ ಹುಟ್ಟಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:18 am, Fri, 15 September 23

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ