ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ

ದೇಶವನ್ನೇ ಮುನ್ನಡೆಸೋ ಪ್ರಧಾನಿಯಾದ್ರು ಇಲ್ಲಿ ಸಾಮಾನ್ಯ ವ್ಯಕ್ತಿಯೇ. ವಿಶ್ವದ ಶ್ರೀಮಂತ ವ್ಯಕ್ತಿ ಅನಿಸಿಕೊಂಡರೂ ಅಷ್ಟೇ.. ವೋಟಿಂಗ್ ಬೂತ್​ ಮುಂದೆ ಆತ ಕಾಮನ್ ಮ್ಯಾನ್. ಹೀಗೆ ಸಮಾನತೆ ಸಾರುವ, ನಮ್ಮನ್ನ ಯಾರು ಆಳಬೇಕೆಂದು ನಿರ್ಧರಿಸುವ ಪ್ರಜಾಪ್ರಭುತ್ವದ ಹಬ್ಬವೇ ಮತೋತ್ಸವ. ಇಂದು (ಮೇ 07) ದೇಶದಲ್ಲೆಡೆ 3ನೇ ಹಂತದ ಮತದಾನ ಭರ್ಜರಿಯಾಗಿ ನಡೆದಿದೆ. ರಾಜ್ಯದ 14 ಕ್ಷೇತ್ರಗಳಲ್ಲಿವತ್ತು 2ನೇ ಹಂತದ ವೋಟಿಂಗ್ ನಡೆದಿದೆ. ಉತ್ತರ ಕರ್ನಾಟಕದ 14 ಕ್ಷೇತ್ರದಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ವೋಟಿಂಗ್ ಆಗಿದೆ. ಈ ಹಿಂದಿನ ಚುನಾವಣೆಯಲ್ಲಿ ಎಷ್ಟು ಪ್ರಮಾಣದ ಮತದಾನವಾಗಿತ್ತು ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಯಾವ್ಯಾವ ಕ್ಷೇತ್ರದಲ್ಲಿಎಷ್ಟು ಮತದಾನ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: May 07, 2024 | 10:17 PM

ಬೆಂಗಳೂರು, (ಮೇ 07): ಕರ್ನಾಟಕದಲ್ಲಿಂದು(Karnataka) (ಮೇ 07) ಲೋಕಸಭೆಗೆ (Loksabha Elections 2024) 2ನೇ ಹಂತದಲ್ಲಿ ಮತದಾನ ನಡೆದಿದ್ದು, ಬಾಕಿ ಉಳಿದಿದ್ದ14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 227 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಇನ್ನು ಮೊದಲನೇ ಹಂತಕ್ಕೆ ಎರಡನೇ ಹಂತದಲ್ಲಿ ಭರ್ಜರಿ ಮತದಾನ ಆಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇಕಡಾ 69.37ರಷ್ಟು ಮತದಾನವಾಗಿದೆ. ಸಿಟಿ ಮಂದಿಗೆ ಹೋಲಿಸಿದ್ರೆ ಹಳ್ಳಿ ಮಂದಿ ಭರ್ಜರಿ ವೋಟಿಂಗ್ ಮಾಡಿದ್ದಾರೆ. ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕದ 14 ಕ್ಷೇತ್ರದಲ್ಲಿ ಬಿರುಸಿನ ಮತದಾನವಾಗಿದೆ. ಬಿರು ಬಿಸಿಲನ್ನೂ ಲೆಕ್ಕಿಸದೇ ಮತದಾರರು ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.

ಎಲ್ಲೆಲ್ಲಿ ಎಷ್ಟು ಮತದಾನವಾಗಿದೆ?

ರಾಯಚೂರು 60.72%, ಬೀದರ್ 63.65%, ಕಲಬುರಗಿ 61.73%, ಚಿಕ್ಕೋಡಿ 74.39%, ಕೊಪ್ಪಳ 69.50%, ವಿಜಯಪುರ 64.71%, ಬಾಗಲಕೋಟೆ 70.47%, ಬೆಳಗಾವಿ 70.84%, ಬಳ್ಳಾರಿ 69.74%, ಹಾವೇರಿ 72.59%, ಶಿವಮೊಗ್ಗ 76.05%, ಉತ್ತರ ಕನ್ನಡ 73.52%, ದಾವಣಗೆರೆ 75.48%, ಧಾರವಾಡ ಕ್ಷೇತ್ರದಲ್ಲಿ ಶೇ. 70.54ರಷ್ಟು ಮತದಾನವಾಗಿದೆ.

ಮೊದಲ ಹಂತದ 14 ಕ್ಷೇತ್ರಗಳಲ್ಲಿ ಎಷ್ಟು ಮತದಾನ?

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ಮಂಡ್ಯದಲ್ಲಿ (ಶೇ 81.67), ಕೋಲಾರದಲ್ಲಿ (ಶೇ 78.27) ಮತ್ತು ತುಮಕೂರಿನಲ್ಲಿ (ಶೇ 78.05 ರಷ್ಟು) ಅತಿ ಹೆಚ್ಚು ಮತದಾನವಾಗಿತ್ತು. ಬೆಂಗಳೂರು ಸೆಟ್ರಲ್​​​ನಲ್ಲಿ ಶೇ 54.06, ಬೆಂಗಳೂರು ದಕ್ಷಿಣದಲ್ಲಿ ಶೇ 53.17, ಬೆಂಗಳೂರು ಉತ್ತರದಲ್ಲಿ ಶೇ 54.45 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಶೇ 68.30ರಷ್ಟು ಮತದಾನವಾಗಿತ್ತು.

ಒಟ್ಟು 474 ಅಭ್ಯರ್ಥಿಗಳ ಭವಿಷ್ಯ ಎವಿಎಂನಲ್ಲಿ

ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಇದೀಗ ಎರಡನೇ ಹಂತದಲ್ಲಿ ಒಟ್ಟು 227 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಒಟ್ಟಾರೆ 474 ಅಭ್ಯರ್ಥಿಗಳ ಭವಿಷ್ಯ ಎವಿಎಂನಲ್ಲಿ ಭದ್ರವಾಗಿದ್ದು, ಯಾರು ಗೆಲ್ಲಲಿದ್ದಾರೆ? ಯಾರು ಸೋಲುತ್ತಾರೆ ಎನ್ನುವುದನ್ನು ಜೂನ್ 4 ರವರೆಗೆ ಕಾಯಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ